Tuesday, 16th January 2018  

Vijayavani

ಮತ್ತೊಂದು ಟ್ವೀಟ್‌ ಮಾಡಿ ಕೆಣಕಿದ ಪಾಲ್ಯೇಕರ್ - ಕಣಕುಂಬಿ ಕಾಮಗಾರಿ ಪರಿಶೀಲನೆಗೆ ನಾಲ್ವರ ತಂಡ ರಚನೆ - ಗೋವಾ ಸಚಿವನ ವಿರುದ್ಧ ಸಿಎಂ ಆಕ್ರೋಶ        ಪರಮೇಶ್ವರ್‌ಗೂ ಕಂಟಕವಾಯ್ತು ಸದಾಶಿವ ಆಯೋಗ - ವರದಿ ವಿರೋಧಿಸಿದ್ದಕ್ಕೆ ಸ್ವಕ್ಷೇತ್ರದಲ್ಲೇ ಆಕ್ರೋಶ - ಮತ ಹಾಕದಿರಲು ಮಾದಿಗ ಮುಖಂಡರ ನಿರ್ಧಾರ        ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಮತ್ತೆ ಕೀಚಕ ಕೃತ್ಯ - ಇಂದಿರಾನಗರ ಪೊಲೀಸರಿಂದ ಇಬ್ಬರು ಆರೋಪಿಗಳ ಸೆರೆ - ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆಗೆ ಆಕ್ರೋಶ        ಕೊನೆಗೂ ಮೌನ ಮುರಿದ ಸುಪ್ರೀಂಕೋರ್ಟ್‌ ಸಿಜೆ - ಬಂಡಾಯ ನ್ಯಾಯಮೂರ್ತಿಗಳ ಜತೆ ದೀಪಕ್‌ ಮಿಶ್ರ ಚರ್ಚೆ - 15 ನಿಮಿಷಗಳ ಕಾಲ ಸಂಧಾನ ಮಾತುಕತೆ        ಚೆಂಡು ನೆಲಕ್ಕೆ ಎಸೆದ ವಿರಾಟ್‌ಗೆ ಐಸಿಸಿ ತರಾಟೆ - ಟೆಸ್ಟ್‌ ಕ್ರಿಕೆಟ್‌ನಲ್ಲಿ ಸಿಟ್ಟಾದ ಕೊಹ್ಲಿಗೆ ದಂಡ - ಪಂದ್ಯದ 25 ಪರ್ಸೆಂಟ್‌ ಸಂಭಾವನೆ ಕಡಿತ       
Breaking News :

ಸಿಎಂ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Friday, 12.01.2018, 3:16 AM       No Comments

ಧಾರವಾಡ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರುರಾಷ್ಟ್ರೀಯ ಸ್ವಯಂ ಸೇವಕ ಸಂಘ  ಹಾಗೂ ಬಜರಂಗ ದಳ ಕಾರ್ಯಕರ್ತರು ಉಗ್ರಗಾಮಿಗಳು ಎಂದು ನೀಡಿರುವ ಹೇಳಿಕೆ ಖಂಡಿಸಿ ಇಲ್ಲಿನ ರೀಗಲ್ ವೃತ್ತದಲ್ಲಿನ ಕಾಂಗ್ರೆಸ್ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಶಿವಾಜಿ ವೃತ್ತದಿಂದ ರೀಗಲ್ ವೃತ್ತಕ್ಕೆ ಪ್ರತಿಭಟನಾ ರ‍್ಯಾಲಿ ಮೂಲಕ ಆಗಮಿಸಿದ ಕಾರ್ಯಕರ್ತರು, ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೊಷಣೆ ಕೂಗಿದ ಪ್ರತಿಭಟನಾಕಾರರು ಟೈರ್​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಶಾಸಕ ಸೀಮಾ ಮಸೂತಿ, ಮಹಾನಗರ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅರವಿಂದ ಏಗನಗೌಡರ, ಮಾಜಿ ಶಾಸಕರಾದ ವೀರಭದ್ರಪ್ಪ ಹಾಲಹರವಿ, ಎಸ್.ಐ. ಚಿಕ್ಕನಗೌಡ್ರ, ಸಿ.ಎಂ. ನಿಂಬಣ್ಣವರ, ಪಾಲಿಕೆ ಸದಸ್ಯರಾದ ಶಿವು ಹಿರೇಮಠ, ಸಂಜಯ ಕಪಟಕರ, ವಿಜಯಾನಂದ ಶೆಟ್ಟಿ, ಶಂಕರ ಶೆಳಕೆ, ಶಿವಾನಂದ ಮುತ್ತಣ್ಣವರ, ಬಲರಾಮ್ ಕುಸಗಲ್ಲ, ಶಿವಣ್ಣ ಬಡಣ್ಣವರ, ಮುಖಂಡರಾದ ಗಣೇಶ ಟೆಂಗಿನಕಾಯಿ, ತವನಪ್ಪ ಅಷ್ಟಗಿ, ಜಿ.ಪಂ. ಅಧ್ಯಕ್ಷೆ ಚೈತ್ರಾ ಶಿರೂರ, ಸ್ಲಂ ಮೋರ್ಚಾ ರಾಜ್ಯ ಉಪಾಧ್ಯಕ್ಷ ಈರೇಶ ಅಂಚಟಗೇರಿ, ರಾಜು ಕೋಟ್ಯಾನವರ, ಮೋಹನ್ ರಾಮದುರ್ಗ, ಅನಸೂಯಾ ಹಿರೇಮಠ, ವಾಣಿ ಮೋಟೇಕಾರ, ವಿವಿಧ ಮೋರ್ಚಾ ಪದಾಧಿಕಾರಿಗಳು, ಇತರರು ಇದ್ದರು.

ಬಂಧನ, ಬಿಡುಗಡೆ: ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಚೇರಿ ಸುತ್ತ ಬ್ಯಾರಿಕೇಡ್ ನಿರ್ವಿುಸಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು. ಕಚೇರಿ ಎದುರು ಕೆಲ ಹೊತ್ತು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ನಂತರದಲ್ಲಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರಣ ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದರು

ಸ್ಥಳೀಯ ಶಾಸಕರ ಗೈರು: ಸಿಎಂ ಹೇಳಿಕೆ ಖಂಡಿಸಿ ರಾಜ್ಯಾದ್ಯಂತೆ ಪ್ರತಿಭಟನೆ ನಡೆಸುವಂತೆ ಕರೆ ಕೊಟ್ಟ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಎದುರು ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಸ್ಥಳೀಯ ಶಾಸಕ ಅರವಿಂದ ಬೆಲ್ಲದ ಗೈರಾಗಿದ್ದರು. ಪ್ರತಿಭಟನೆ ನಡೆಸಿದ ಸಮಯದಲ್ಲಿ ಅವರು ನಗರದಲ್ಲೇ ಇದ್ದರು ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

Back To Top