Friday, 23rd March 2018  

Vijayavani

Breaking News

ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು

Tuesday, 12.09.2017, 10:03 AM       No Comments

ಚಿಕ್ಕಬಳ್ಳಾಪುರ: ಚಿಕ್ಕಬಳ್ಲಾಪುರದ ಮಾಡಿಕೆರೆ ರೈಲ್ವೆ ಅಂಡರ್‌ ಪಾಸ್‌ ಬಳಿ ಇಂದು ಬೆಳ್ಳಂಬೆಳಗ್ಗೆಯೇ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಆಟೋಗೆ ಲಾರಿ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಮಾಡಿಕೆರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಕುರಟಹಳ್ಳಿ ಗ್ರಾಮದ ಮುರಳಿ(45), ಅಶ್ವತ್ಥ್(50) ಮತ್ತು ರಾಮಪುರದ ಚಲಪತಿ(38) ಮೃತಪಟ್ಟಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿಗಾಗಿ ವಿಜಯವಾಣಿ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಮೃತರೆಲ್ಲರು ಕುರುಟಹಳ್ಳಿಯಿಂದ ಬಾಯಿಕೊಂಡದ ಗಂಗಮ್ಮನ ದೇವಸ್ಥಾನಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಇನ್ನು ಘಟನೆ ನಡೆದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

Back To Top