Wednesday, 19th September 2018  

Vijayavani

ಗೌಡರ ಫ್ಯಾಮಿಲಿ ವಿರುದ್ಧ ಮತ್ತೆ ಸಿಡಿದೆದ್ದ ಮಂಜು- ಡಿಸಿ, ಕಂದಾಯ ಸಚಿವರಿಗೆ ನಾಳೆ  ದೂರು ನೀಡಲಿರುವ ಎ.ಮಂಜು        ಎದುರಾಳಿ ಇಲ್ದೇ ಚೆಸ್ ಆಡೋದೇಗೆ - ಡಿಕೆಶಿ ದರ್ಪದ ಮಾತಿಗೆ ಬಿಎಸ್​ವೈ ತಿರುಗೇಟು - ಇತ್ತ ಅಪ್ಪ-ಮಕ್ಕಳ ವಿರುದ್ಧವೂ ವಾಗ್ದಾಳಿ        ಬಿಜೆಪಿಗೆ ಹೋದ್ರೆ ಬೆಳೆಯಕ್ಕಾಗಲ್ಲ, ಪಕ್ಷದಲ್ಲಿದ್ರೆ ಹೆಚ್ಚು ಲಾಭ - ಬಂಡೆದ್ದಿದ್ದ ಬ್ರದರ್ಸ್ ಕೂಲ್ ಮಾಡಿದ್ದೇ ಸಹೋದರ ಲಖನ್        ದಿಲ್ಲಿಯಲ್ಲಿ ಸಂಪುಟ ವಿಸ್ತರಣೆ ಸರ್ಕಸ್ - ಖಾಲಿ ಇರೋ 6 ಸ್ಥಾನಗಳಿಗೆ ಲಾಬಿ ಜೋರು - ಭಿನ್ನಮತಕ್ಕೆ ರಾಹುಲ್ ಹಾಡ್ತಾರಾ ಇತಿಶ್ರೀ..?        ತ್ರಿವಳಿ ತಲಾಖ್ ಸುಗ್ರೀವಾಜ್ಞೆಗೆ ಅಸ್ತು - ಕೇಂದ್ರ ಸಚಿವ ಸಂಪುಟದಿಂದ ಒಪ್ಪಿಗೆ - ಮುಸ್ಲಿಂ ಮಹಿಳೆಯರಿಗೆ ಕೊನೆಗೂ ಸಿಕ್ತು ನ್ಯಾಯ       
Breaking News

ಸಮನ್ವಯ ಸಮಿತಿಯಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಜಾರಿಗೆ ನಿರ್ಧಾರ

Thursday, 14.06.2018, 6:20 PM       No Comments

ಬೆಂಗಳೂರು: ಮೈತ್ರಿ ಸರ್ಕಾರ ರಚನೆಯಾದ ನಂತರ ಇದೇ ಮೊದಲ ಬಾರಿಗೆ ಸಮನ್ವಯ ಸಮಿತಿ ಸಭೆ ನಡೆದಿದ್ದು, ಪ್ರಣಾಳಿಕೆಯಲ್ಲಿನ ಅಂಶಗಳ ಜಾರಿ, ನಿಗಮ ಮಂಡಳಿ, ಭಿನ್ನಮತ ಶಮನ ಸೇರಿದಂತೆ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ಕುಮಾರ ಕೃಪ ಅತಿಥಿ ಗೃಹದಲ್ಲಿ ಸಮನ್ವಯ ಸಮಿತಿಯ ಮೊದಲ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್​, ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ ವೇಣುಗೋಪಾಲ್​, ಜೆಡಿಎಸ್​ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್​ ಅಲಿ ಭಾಗವಹಿಸಿದ್ದರು.

ಸಮಿತಿಯು ಸುಮಾರು ಒಂದೂವರೆ ಗಂಟೆಗಳ ಕಾಲ ಸಭೆ ನಡೆಸಿತು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಸಭೆಯಲ್ಲಿ ಎರಡೂ ಪಕ್ಷಗಳ ಪ್ರಣಾಳಿಕೆ ಬಗ್ಗೆ ಚರ್ಚೆ ನಡೆಯಿತು. ಎರಡೂ ಪ್ರಣಾಳಿಕೆ ಜಾರಿ ಮಾಡುವುದು ಕಷ್ಟದ ಕೆಲಸ. ಆದ್ದರಿಂದ ಎರಡೂ ಪ್ರಣಾಳಿಕೆಗಳಲ್ಲಿನ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳನ್ನು ಪಟ್ಟಿ ಮಾಡಿ ಜಾರಿ ಮಾಡಲಾಗುವುದು, ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳನ್ನು ಪಟ್ಟಿ ಮಾಡಲು ಸಮಿತಿ ರಚಿಸಲಾಗುವುದು. ಸಮಿತಿಯು ಇನ್ನು ಹತ್ತು ದಿನದಲ್ಲಿ ವರದಿ ನೀಡಲಿದೆ ಎಂದು ತಿಳಿಸಿದರು.

ಸಮಿತಿಯಲ್ಲಿ ಕಾಂಗ್ರೆಸ್ ಪಕ್ಷದ ಮೂವರು, ಜೆಡಿಎಸ್ ಪಕ್ಷದ ಇಬ್ಬರು ಸದಸ್ಯರು ಇರಲಿದ್ದಾರೆ. ಈ ಸಮಿತಿ ನೀಡುವ ವರದಿಯನ್ನು ಸಮನ್ವಯ ಸಮಿತಿ ಮುಂದಿಟ್ಟು ಅನುಮೋದನೆ ಪಡೆಯಲಾಗುತ್ತದೆ. ನಾವು ಹಿಂದೆ ಬಜೆಟ್​ನಲ್ಲಿ ಕೊಟ್ಟ ಎಲ್ಲ ಯೋಜನೆಗಳು ಮುಂದುವರಿಯುತ್ತವೆ. ನಂತರ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳು ಜಾರಿಗೆ ಬರಲಿವೆ ಎಂದು ತಿಳಿಸಿದರು.

ನಿಗಮ ಮಂಡಳಿ ನೇಮಕದ ಕುರಿತು ಮಾತನಾಡಿದ ಅವರು, ನಿಗಮ ಮತ್ತು ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸಿಎಂ ಮತ್ತು ಡಿಸಿಎಂ ನಿರ್ಧಾರವೇ ಅಂತಿಮ. ಮೊದಲ ಹಂತದಲ್ಲಿ 30 ನಿಗಮ ಮಂಡಳಿ ಅಧ್ಯಕ್ಷ ಉಪಾಧ್ಯಕ್ಷರ ನೇಮಕ ಮಾಡುವ ನಿರ್ಧಾರಕ್ಕೆ ಬರಲಾಯಿತು ಎಂದರು.

ಭಿನ್ನಮತದ ಚರ್ಚೆ
ಇನ್ನು ಭಿನ್ನಮತದ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು ಎಂದು ತಿಳಿದು ಬಂದಿದೆ. ಅಸಮಾಧಾನ ಶಮನ ಮಾಡಲು ಜೆಡಿಎಸ್ ಪಟ್ಟು ಹಿಡಿದಿದ್ದು, ಬಂಡಾಯ ಶಮನವಾಗದಿದ್ರೆ ಸರ್ಕಾರ ಕಾರ್ಯನಿರ್ವಹಿಸುವುದು ಕಷ್ಟ ಎಂಬ ಅಭಿಪ್ರಾಯ ಜೆಡಿಎಸ್​ ನಾಯಕರಿಂದ ವ್ಯಕ್ತವಾಗಿದೆ ಎನ್ನಲಾಗಿದೆ.

ಸಚಿವ ಸ್ಥಾನ ವಂಚಿತರು ಅಸಮಾಧಾನ ಹೊರ ಹಾಕುವುದು ಸಾಮಾನ್ಯ. ಇದರ ಜತೆಗೆ ಒಬ್ಬರ ಇಲಾಖೆಯಲ್ಲಿ ಮತ್ತೊಬ್ಬರು ಮೂಗು ತೂರಿಸುವುದು ಬೇಡ. ಸರ್ಕಾರದಲ್ಲಿ ರೇವಣ್ಣ ಅವರ ಹಸ್ತಕ್ಷೇಪ ಕಡಿಮೆ ಆಗಲಿ. ಬಿಜೆಪಿ ಅವಕಾಶಕ್ಕಾಗಿ ಕಾಯುತ್ತಿದೆ, ನಾವು ಎಚ್ಚೆತ್ತುಕೊಳ್ಳಬೇಕು ಎಂದು ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ ವೇಣುಗೋಪಾಲ್​ ಸಲಹೆ ನೀಡಿದರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

Back To Top