Sunday, 24th June 2018  

Vijayavani

ಕಾವೇರಿ ನೀರು ಪ್ರಾಧಿಕಾರ ಸಮಿತಿ ರಚನೆ - ಕೇಂದ್ರದಿಂದ ರಾಜ್ಯಕ್ಕಾದ ಅನ್ಯಾಯದ ಬಗ್ಗೆ ಸರ್ಕಾರದಿಂದ ಪುಸ್ತಕ        ಮಾಜಿ ಸಿಎಂ ಸಿದ್ದುಗೆ ಎಚ್​ಡಿಕೆ ಬಂಪರ್ ಆಫರ್​ - ಸಮನ್ವಯ ಸಮಿತಿ ಅಧ್ಯಕ್ಷರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ?        ನಕಲಿ ದಾಖಲೆ ಸೃಷ್ಟಿಸಿ ಭೂಮಿ ಕಬಳಿಕೆ ಆರೋಪ - ಆತ್ಮಹತ್ಯೆ ಯತ್ನ - ಇದೆಲ್ಲಾ ಷಡ್ಯಂತ್ರ ಅಂದ್ರು ಮುನಿಯಪ್ಪ        ಕಲ್ಲಿನ ಹಾರ ಬೇಕಾದ್ರೆ ಕೊರಳಿಗೆ ಹಾಕಿ - ಸುಗಂಧರಾಜದ ಹೂವಿನ ಹಾರ ಬೇಡ್ವೇಬೇಡ - ಸಚಿವ ಡಿಕೆಶಿ ಆಕ್ಷೇಪ        ವಿದ್ಯುತ್ ಉಳಿಸಲು ಕೇಂದ್ರದ ಮೆಗಾ ಪ್ಲಾನ್ - ಇನ್ಮುಂದೆ 24 ಡಿಗ್ರಿಗೆ ಎಸಿ ಡಿಫಾಲ್ಟ್​ ಸೆಟ್ಟಿಂಗ್       
Breaking News

ಚುನಾವಣಾ ಭಯ! ಜಾತಿ ವರದಿ ಕೈ ಬಿಟ್ಟ ಹೈಕಮಾಂಡು: ವೃಥಾ ತೆರಿಗೆ ಹಣ ಪೋಲು

Saturday, 15.07.2017, 10:24 AM       No Comments

ಬೆಂಗಳೂರು: ರಾಜ್ಯ ಸರ್ಕಾರ ಬಹಳ ಮುತುವರ್ಜಿಯಿಂದ ನಡೆಸಿದ್ದ ಜಾತಿ ಗಣತಿಯ ವರದಿಗೆ ಇನ್ನೂ ಬಿಡುಗಡೆ ಭಾಗ್ಯ ಬಂದಿಲ್ಲ. ಸರ್ಕಾರ ವರದಿಯನ್ನು ಬಿಡುಗಡೆ ಮಾಡಲು ಹಿಂದೆ ಮುಂದೆ ನೋಡುತ್ತಿದೆ.

ಜಾತಿ ಗಣತಿ ವರದಿ ಬಿಡುಗಡೆ ಮಾಡುವುದರಿಂದ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ರಾಜಕೀಯವಾಗಿ ಹಿನ್ನಡೆಯಾಗಬಹುದು ಎಂದು ಹಿರಿಯ ಕಾಂಗ್ರೆಸ್​ ನಾಯಕರು ಲೆಕ್ಕ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಕಾಂಗ್ರೆಸ್​ ನಾಯಕರು ಎಐಸಿಸಿ ಉಪಾಧ್ಯಕ್ಷ ರಾಹುಲ್​ ಗಾಂಧಿ ಬಳಿ ತೆರಳಿ ವರದಿಯನ್ನು ತಡೆಹಿಡಿಯುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಹೈಕಮಾಂಡ್​ ಜಾತಿ ಗಣತಿ ವರದಿಯನ್ನು ಬಿಡುಗಡೆ ಮಾಡದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಖಡಕ್​ ಸೂಚನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತರ ಸಂಖ್ಯೆ ಹೆಚ್ಚಿದೆ ಎಂದು ವರದಿಯಿಂದ ಬಹಿರಂಗವಾದರೆ ಬಿಜೆಪಿ ಅಹಿಂದ ಮತಗಳನ್ನು ಸೆಳೆಯಲು ತಂತ್ರ ರೂಪಿಸುವ ಸಾಧ್ಯತೆ ಇದೆ.

ಇದರಿಂದ ಅಹಿಂದ ಮತಗಳು ವಿಭಜನೆಗೊಳ್ಳುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್​ ನಾಯಕರು ವರದಿ ಕುರಿತು ತಮ್ಮ ಆತಂಕವನ್ನು ಹೈಕಮಾಂಡ್​ ಬಳಿ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ಸರ್ಕಾರ ಕೋಟ್ಯಾಂತರ ರೂ. ತೆರಿಗೆ ಹಣ ಖರ್ಚು ಮಾಡಿ ಜಾತಿ ಗಣತಿ ನಡೆಸಿತ್ತು. ಸ್ವತಃ ಸಿಎಂ ಸಿದ್ದರಾಮಯ್ಯ ಮುತುವರ್ಜಿಯಿಂದ ಜಾತಿ ಗಣತಿಯ ಮೇಲುಸ್ತುವಾರಿ ವಹಿಸಿದ್ದರು.

(ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top