Monday, 23rd July 2018  

Vijayavani

ಬಿಜೆಪಿ ಸಂಪರ್ಕ್ ಸಮರ್ಥನ್ ಅಭಿಯಾನ - ಕಿಚ್ಚ ಸುದೀಪ್ ಭೇಟಿಯಾದ ಶ್ರೀರಾಮುಲು- ಮೋದಿ ಸಾಧನೆ ಪುಸ್ತಕ  ವಿತರಣೆ        ದೆಹಲಿಯಲ್ಲಿ ರಾಹುಲ್-ಸಿದ್ದು ಭೇಟಿ - ದೋಸ್ತಿ ನಡೆಗೆ ಅಸಮಾಧಾನ ಹೊರಹಾಕಿದ್ರಾ ಸಿದ್ದು - ಕುತೂಹಲ ಕೆರಳಿಸಿದ ಕೈ ದಿಗ್ಗಜರ ಭೇಟಿ        ಮತ್ತೆ ವಾಸ್ತು ಮೊರೆ ಮೋದ ರೇವಣ್ಣ - ಸರ್ಕಾರಿ ಬಂಗಲೆ ನವೀಕರಣಕ್ಕೆ 2 ಕೋಟಿ ಖರ್ಚು - ಇದೇನಾ ದುಂದುವೆಚ್ಚಕ್ಕೆ ಕಡಿವಾಣ ?        ದರ್ಶನ್ ಮ್ಯಾನೇಜರ್​​ ಮಲ್ಲಿಕಾರ್ಜುನ್​ನಿಂದ ಮತ್ತೊಂದು ದೋಖಾ - ನಟ ಅರ್ಜುನ್ ಸರ್ಜಾಗೂ ಮಹಾ ಮೋಸ        ಶೀರೂರು ಶ್ರೀ ಸಾವಿಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್ - ಸ್ವಾಮೀಜಿ ಕೊನೆದಿನದ ಡಿವಿಆರ್ ನಾಪತ್ತೆ - ಪೊಲೀಸರಿಂದ ತೀವ್ರ ಶೋಧ       
Breaking News

ಕಾಂಗ್ರೆಸ್​ ಹಿರಿಯ ನಾಯಕರ ದೆಹಲಿ ಭೇಟಿ ದಿಢೀರ್​ ರದ್ದು

Monday, 04.06.2018, 8:29 AM       No Comments

ಬೆಂಗಳೂರು: ಮೈತ್ರಿ ಸರ್ಕಾರದ ಸಚಿವ ಸಂಪುಟ ಕರಸತ್ತು ತೀವ್ರವಾಗಿರುವ ಬೆನ್ನಲ್ಲೇ ಕಾಂಗ್ರೆಸ್​ನ ಹಿರಿಯ ನಾಯಕರು ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಅವರನ್ನು ಭೇಟಿ ಮಾಡಲು ಯೋಜನೆ ರೂಪಿಸಿದ್ದರು. ಆದರೆ ಅವರ ದೆಹಲಿ ಭೇಟಿ ದಿಢೀರ್​ ರದ್ದಾಗಿದೆ.

ಇಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್​, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ಅವರು ರಾಹುಲ್​ ಭೇಟಿಗೆ ಅವಕಾಶ ನೀಡುವಂತೆ ಕೋರಿದ್ದರು.

ಆದರೆ ಕಾಂಗ್ರೆಸ್​ ಹಿರಿಯ ನಾಯಕ ಗುಲಾಂ ನಬಿ ಆಜಾದ್​ ಮತ್ತು ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​ ನೀವು ದೆಹಲಿಗೆ ಬರುವುದು ಬೇಡ ಎಂದು ಸಂದೇಶ ರವಾನಿಸಿದ್ದಾರೆ. ಜತೆಗೆ ಇಂದು ರಾಹುಲ್​ ಜತೆ ನಾವೇ ಮಾತನಾಡಿ ನಿಮಗೆ ಮಾಹಿತಿ ನೀಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ದೆಹಲಿಗೆ ಕೈ ಹಿರಿಯ ನಾಯಕರು ಬರುವುದರಿಂದ ಸಚಿವ ಸ್ಥಾನದ ಇತರ ಆಕಾಂಕ್ಷಿಗಳೂ ಸಹ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ  ನೀವು ದೆಹಲಿಗೆ ಬರುವುದು ಬೇಡ ಎಂದು ಹೈಕಮಾಂಡ್​ ಸ್ಪಷ್ಟ ಸಂದೇಶ ನೀಡಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

Back To Top