Wednesday, 24th October 2018  

Vijayavani

ರಂಗೇರಿದ ಉಪ ಚುನಾವಣಾ ಕಣ-ಜಮಖಂಡಿಯಲ್ಲಿಂದು ಬಿಎಸ್ ವೈ ಮತಬೇಟೆ-ಸಕ್ಕರೆ ನಾಡು ಮಂಡ್ಯದಲ್ಲಿಂದು ಸಿದ್ದರಾಮಯ್ಯ ಪ್ರಚಾರ        ದೀಪಾವಳಿಯಿಂದ ಲೋಡ್​ ಶೆಡ್ಡಿಂಗ್-ಇಂಧನ ಇಲಾಖೆ ಅಧಿಕಾರಿಗಳ ಜತೆ ಸಿಎಂ ಸಭೆ-ಕತ್ತಲಲ್ಲಿ ಮುಳುಗುತ್ತಾ ಕರ್ನಾಟಕ..?        ಸಾಲಮನ್ನಾವೂ ಇಲ್ಲ, ಬೆಲೆಯೂ ಇಲ್ಲ-ಬೆವರು ಸುರಿಸಿ ಬೆಳೆದ ಬೆಳೆ ಕೇಳೋರೂ ಇಲ್ಲ-ಅನ್ನದಾತನಿಗೆ ಕಣ್ಣೀರು ತರಿಸುತ್ತಿದೆ ಈರುಳ್ಳಿ        ಬೆಂಗಳೂರಲ್ಲಿ ಅನಧಿಕೃತ ಬಿಟ್ ಕಾಯಿನ್ ATM-ಆರೋಪಿ ಹರೀಶ್ ಬಂಧನ-ಕೆಂಪ್ ಫೋರ್ಟ್​ನಲ್ಲಿದ್ದ ಎಟಿಎಂ ಪೊಲೀಸರ ವಶಕ್ಕೆ        ಕೊಳ್ಳೆಗಾಲದಲ್ಲಿ 17 ವರ್ಷಗಳಿಂದ ಕಾಮಗಾರಿ ಅಪೂರ್ಣ-ಇನ್ನೂ ಆಗಿಲ್ಲ ವಾಲ್ಮೀಕಿ ಭವನ ನಿರ್ಮಾಣ-ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ        ವಿಜಯಪುರದಲ್ಲಿ ಗಂಗಾಕಲ್ಯಾಣ ಗೋಲ್ಮಾಲ್-ಫಲಾನುಭವಿಗಳಿಗೆ ಸಿಗದ ಬೋರ್ ವೇಲ್ ಸೌಲಭ್ಯ-ಯಾರದ್ದೋ ಹೆಸರಲ್ಲಿ ಅನುದಾನ ನೀಡಿದ ಅಧಿಕಾರಿಗಳು       
Breaking News

ಮುಂಬೈಗೆ ಹಾರಿದ ಕಾಂಗ್ರೆಸ್‌ನ ಅತೃಪ್ತ ಶಾಸಕರು?

Saturday, 22.09.2018, 7:52 PM       No Comments

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಿಂಚಿನ ಸಂಚಲನ ಉಂಟಾಗಿದ್ದು, ಕೈ-ತೆನೆ ದೋಸ್ತಿ ಸರ್ಕಾರ ಪತನಕ್ಕೆ ಕೌಂಟ್​ಡೌನ್ ಶುರುವಾಗಿದೆ ಎನ್ನಲಾಗುತ್ತಿದೆ.

ರೆಸಾರ್ಟ್​​ ರಾಜಕಾರಣಕ್ಕೆ ಕಾಂಗ್ರೆಸ್​​ನ 16 ಅತೃಪ್ತ ಶಾಸಕರು ಮುಂದಾಗಿದ್ದು, 16 ಕೈ ಶಾಸಕರ ಜತೆ ಒಬ್ಬ ಪಕ್ಷೇತರ ಶಾಸಕ ಕೂಡ ದೌಡಾಯಿಸಿದ್ದಾರೆ ಎನ್ನಲಾಗಿದೆ.

ಈಗಾಗಲೇ ಮುಂಬೈನ ಪಂಚತಾರಾ ಹೋಟೆಲ್​​​ನಲ್ಲಿ 11 ಶಾಸಕರು ವಾಸ್ತವ್ಯ ಹೂಡಿದ್ದಾರೆ. ಉಳಿದ ಆರು ಉಳಿದ 6 ಶಾಸಕರ ಪೈಕಿ ಮೂವರು ಚೆನ್ನೈಗೆ ಪ್ರಯಾಣ ಬೆಳೆಸಿದ್ದಾರೆ. ಅಲ್ಲಿಂದ ಮುಂಬೈಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ರಾಜ್ಯ ಪೊಲೀಸ್‌ ಇಲಾಖೆಯಿಂದ ಸಿಎಂಗೆ ಮಾಹಿತಿ ಲಭ್ಯವಾಗಿದ್ದು, 6 ಶಾಸಕರ ಚಲನವಲನ ಟ್ರ್ಯಾಕ್ ಆಗದ ಕುರಿತು ವರದಿಯಾಗಿದೆ. ಪೊಲೀಸ್ ಇಲಾಖೆ ವರದಿಯಿಂದ ಸಿಎಂ ಕುಮಾರಸ್ವಾಮಿ ಕಂಗಾಲಾಗಿದ್ದಾರೆ. ಮುಂಬೈನಲ್ಲಿರುವ ರಾಜ್ಯದ ಶಾಸಕರಿಗೆ ಮುತ್ತಿಗೆ ಹಾಕಲು ಕಾರ್ಯಕರ್ತರಿಗೆ ಕಾಂಗ್ರೆಸ್‌ ಮುಖಂಡರು ಸೂಚನೆ ನೀಡಿದ್ದಾರೆ. ಇದರಿಂದ ಎಚ್ಚೆತ್ತ ಶಾಸಕರು ಗೌಪ್ಯ ಸ್ಥಳದತ್ತ ಪ್ರಯಾಣ ಬೆಳೆಸಿದ್ದಾರೆ ಎನ್ನಲಾಗಿದೆ.

ಅತೃಪ್ತರಿಗೆ ಸಿದ್ದು ಸಮಾಧಾನ

ಅತೃಪ್ತ ಶಾಸಕರ ನಡೆಯು ಕುತೂಹಲ ಮೂಡಿಸಿದ್ದು, ಅತೃಪ್ತರಾದ ಸುಧಾಕರ್, ಎಂಟಿಬಿ ನಾಗರಾಜ್, ನಾಗೇಶ್​ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕರೆ ಮಾಡಿ ಮಾತನಾಡಿದ್ದಾರೆ. ಈ ವೇಳೆ ನಾವು ಯಾರೂ ಪಕ್ಷ ಬಿಡುತ್ತಿಲ್ಲ ಎಂದು ಅತೃಪ್ತರು ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ಭೇಟಿಯಾಗುವಂತೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಸಿದ್ದು ಜತೆ ಕೆಪಿಸಿಸಿ ಅಧ್ಯಕ್ಷರ ಚರ್ಚೆ

ಅತೃಪ್ತ ಶಾಸಕರ ನಿಗೂಢ ನಡೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿವಾಸ ಕಾವೇರಿ ಚಟುವಟಿಕೆಯ ಕೇಂದ್ರಬಿಂದುವಾಗಿದೆ. ಸಿದ್ದು ನಿವಾಸದಲ್ಲಿ ಅತೃಪ್ತ ಶಾಸಕರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಚರ್ಚೆ ನಡೆಸುತ್ತಿದ್ದಾರೆ. ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದು ನಿಗೂಢ ನಡೆ ಇಟ್ಟಿರುವ ಶಾಸಕ ಡಾ.ಸುಧಾಕರ್, ಎಂಟಿಬಿ ನಾಗರಾಜ್ ಹಾಗೂ ನಾಗೇಶ್‌ರನ್ನು ಹಿಡಿದಿಟ್ಟುಕೊಳ್ಳುವ ಬಗ್ಗೆ ಸುದೀರ್ಘ ಮಾತುಕತೆ ನಡೆಸಿದ್ದಾರೆ.

ಸೋಮವಾರ ದೆಹಲಿಗೆ ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರು ಸೋಮವಾರ ಬೆಳಗ್ಗೆ 7 ಗಂಟೆಗೆ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ. ಲೋಕಸಭೆ ಚುನಾವಣೆ ಕುರಿತು ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಚುನಾವಣೆ ಸಿದ್ಧತೆಗಳ ಬಗ್ಗೆ ಕೈ ನಾಯಕರ ಚರ್ಚೆ ನಡೆಸಲಿದ್ದಾರೆ. ನಂತರ ಮಂಗಳವಾರ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top