Saturday, 20th October 2018  

Vijayavani

ಚೀಪ್ ಮೆಂಟಾಲಿಟಿ ನನಗಿಲ್ಲ - ಇದರ ಹಿಂದೆ ಕೈವಾಡ ಇರಬಹುದು - ನಟಿ ಶ್ರುತಿ ಹರಿಹರನ್ ಆರೋಪ ತಳ್ಳಿಹಾಕಿದ ಅರ್ಜುನ್ ಸರ್ಜಾ        ಸ್ಯಾಂಡಲ್​ವುಡ್​​ನಲ್ಲಿ ಮೀ ಟೂ - ನಾಳೆ ಸುದ್ದಿಗೋಷ್ಠಿಯಲ್ಲಿ ಶ್ರುತಿ ಹಾಕ್ತಾರಾ ಬಾಂಬ್ - ನಟಿ ವಿರುದ್ಧ ಗುಡುಗಿದ ಅರ್ಜುನ್ ಸರ್ಜಾ ಅತ್ತೆ        ಧರ್ಮ ವಿಚಾರದಲ್ಲಿ ಡಿಕೆಶಿ ಕ್ಷಮೆಯಾಚನೆಗೆ ಸಿದ್ದು ಸಿಟ್ಟು - ಒಂದೇ ವೇದಿಯಲ್ಲಿದ್ರೂ ಮುಖ ಮುಖ ನೋಡಲಿಲ್ಲ - ಜಂಟಿ ಸುದ್ದಿಗೋಷ್ಠಿಯಲ್ಲಿ ನಾಯಕರ ಮಹಾ ಮುನಿಸು        ಜೆಡಿಎಸ್‌, ಕಾಂಗ್ರೆಸ್‌ನ ಸುದ್ದಿಗೋಷ್ಠಿ - ಕಾಂಗ್ರೆಸ್‌, ಜೆಡಿಎಸ್‌ ಜಂಟಿ ಸಮರಕ್ಕೆ ಬಿಜೆಪಿ ವ್ಯಂಗ್ಯ- ಟ್ವೀಟ್‌ ಮೂಲಕ ಟಾಂಗ್‌        ಒಂದೇ ಮನಸ್ಸು ಎರಡು ದೇಹ ಅಂದ್ರು ಸಿಎಂ - ಈ ಜನ್ಮದಲ್ಲಿ ಗೌಡ್ರು-ಸಿದ್ದು ಒಂದಾಗಲ್ಲ ಅಂದ್ರು ಕಾರಜೋಳ - ದೋಸ್ತಿಗಳಿಗೆ ಬಿಜೆಪಿ ನಾಯಕರ ಟಕ್ಕರ್        ಗದಗಿನ ತೋಂಟದಾರ್ಯ ಶ್ರೀಗಳು ಲಿಂಗೈಕ್ಯ - ಹೃದಯಾಘಾತದಿಂದ ಗದಗ್‌ನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶ - ನಾಳೆ ಗದಗದಲ್ಲಿ ಅಂತ್ಯಕ್ರಿಯೆ       
Breaking News

ಬಿಜೆಪಿ ಜಾಲತಾಣ ಪೋಸ್ಟ್​ಗಳ ಮೇಲೆ ಕಾಂಗ್ರೆಸ್ ಗೂಢಚರ್ಯು

Wednesday, 08.08.2018, 3:03 AM       No Comments

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಡೆಸಿದ ತಂತ್ರಗಾರಿಕೆ ಅರಿತು ಲೋಕಸಭಾ ಚುನಾವಣೆಯಲ್ಲಿ ಸೆಡ್ಡು ಹೊಡೆಯಲು ಮುಂದಾಗಿರುವ ಕಾಂಗ್ರೆಸ್, ಸಾಮಾಜಿಕ ಜಾಲತಾಣದ ಮೇಲೆ ವಿಶೇಷ ನಿಗಾ ವಹಿಸಲು ಕಾರ್ಯತಂತ್ರವೊಂದನ್ನು ರೂಪಿಸಿದೆ.

ಕಳೆದ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲದಿದ್ದರೂ ಅದನ್ನು ಸೃಷ್ಟಿಸಿ, ಕೊನೇ ಹಂತದಲ್ಲಿ ಬಿಜೆಪಿ ನಡೆಸಿದ ಋಣಾತ್ಮಕ ಪ್ರಚಾರವೂ ನಿರೀಕ್ಷಿತ ಸ್ಥಾನ ಪಡೆಯಲು ಸಾಧ್ಯವಾಗದ್ದಕ್ಕೆ ಪ್ರಮುಖ ಕಾರಣ. ಬಿಜೆಪಿಯ ಈ ತಂತ್ರ ಲೋಕಸಭಾ ಚುನಾವಣೆಯಲ್ಲಿ ಮರುಕಳಿಸಬಾರದೆಂದು ಯೋಜನೆ ಸಿದ್ಧಪಡಿಸಿರುವುದಾಗಿ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ. ‘ಸೋಲಿನಿಂದ ಪಾಠ ಕಲಿತಿದ್ದು, ಎಲ್ಲರನ್ನೂ ಒಳಗೊಂಡಂತೆ ಚುನಾವಣೆಗೆ ಸಜ್ಜಾಗುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.

ಫೇಸ್​ಬುಕ್, ವಾಟ್ಸ್​ಆಪ್ ಮೂಲಕ ಬಿಜೆಪಿಯವರು ಸುಳ್ಳುಗಳನ್ನು ಹರಡುತ್ತಾರೆ. ಜನ ಸಾಮಾನ್ಯರಿಗೆ ಮೇಲಿಂದ ಮೇಲೆ ಸುಳ್ಳುಗಳನ್ನೊಳಗೊಂಡ ಸಂದೇಶ ಕಳಿಸುತ್ತ ಜನ ನಂಬುವಂತೆ ಮಾಡುತ್ತಾರೆ. ಒಂದು ರೀತಿಯಲ್ಲಿ ಒತ್ತಡ ಹಾಕುತ್ತಾರೆ. ಈ ಬೆಳವಣಿಗೆ ಬಗ್ಗೆ ಕಾಂಗ್ರೆಸ್​ನ ರಿಸರ್ಚ್ ತಂಡದಿಂದ ವಿಶೇಷ ಹದ್ದಿನ ಕಣ್ಣಿಟ್ಟು ಗಮನ ಹರಿಸಲು ನಿರ್ಧರಿಸಲಾಗಿದೆ. ಜತೆಗೆ ಸೂಕ್ತ ಉತ್ತರ ಸಿದ್ಧಪಡಿಸಿ ಅಷ್ಟೇ ವೇಗದಲ್ಲಿ ಪ್ರತಿಕ್ರಿಯೆ ಕಳುಹಿಸಿ ಜನರಿಗೆ ವಾಸ್ತವ ಸಂಗತಿ ತಿಳಿಸುವ ಕೆಲಸ ಮಾಡಬೇಕೆಂಬ ತಿರ್ವನಕ್ಕೆ ಬರಲಾಗಿದೆ.

ಇಂಟರ್ನ್​ಶಿಪ್

ಕಾಂಗ್ರೆಸ್ ಸಂಶೋಧನಾ ಘಟಕ ಪ್ರಕಾರ, ಪಕ್ಷದ ಚಟುವಟಿಕೆಯಲ್ಲಿ ಸೇವೆ ಸಲ್ಲಿಸಲು ಇಂಟರ್ನ್​ಶಿಪ್ ಅವಕಾಶ ಕಲ್ಪಿಸಲು ಅರ್ಜಿ ಆಹ್ವಾನಿಸಿದೆ. 15 ಜನರಿಗೆ ಕನಿಷ್ಠ ಒಂದು ತಿಂಗಳು, ಗರಿಷ್ಠ ಲೋಕಸಭಾ ಚುನಾವಣೆವರೆಗೆ ಕೋರ್ಸ್ ನಡೆಸಲು ಅವಕಾಶವಿದ್ದು ಈಗಾಗಲೇ 220ಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದಿಯಾಗಿ ಪ್ರಮುಖ ನಾಯಕರು ಇಂಟರ್ನ್​ಶಿಪ್ ಅಭ್ಯರ್ಥಿಗಳಿಗೆ ಪಕ್ಷದ ಚಟುವಟಿಕೆ, ರಾಜಕೀಯದ ಬಗ್ಗೆ ಮಾರ್ಗದರ್ಶನ ಮಾಡಲಿದ್ದಾರೆ. ಮೊದಲ ಹಂತದಲ್ಲಿ ಬೆಂಗಳೂರು ಕೇಂದ್ರಿತ ಇಂಟರ್ನ್​ಶಿಪ್ ನಡೆಯಲಿದ್ದು, ಕೋರಿಕೆ ಬಂದರೆ ಜಿಲ್ಲೆಗಳಲ್ಲೂ ಅವಕಾಶ ಕಲ್ಪಿಸಲಾಗುತ್ತದೆ ಎಂದು ಸಂಶೋಧನಾ ತಂಡ ಹೇಳಿದೆ.

ಕಾಂಗ್ರೆಸ್​ಗೆ ಆಪರೇಷನ್ ಭಯ

ಕಾಂಗ್ರೆಸ್​ಗೆ ಬಿಜೆಪಿಯಿಂದ ಆಪರೇಷನ್ ಕಮಲದ ಭಯ ಆವರಿಸಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಗಳು ಕೈ ಆತಂಕವನ್ನು ತೋರಿಸುತ್ತಿದೆ. ‘ಬಿಜೆಪಿಯವರು ನಮ್ಮ ಶಾಸಕರನ್ನು ಸಂರ್ಪಸಿ ಆಮಿಷ ಒಡ್ಡುವ ಮೂಲಕ ಅನೈತಿಕತೆಯಿಂದ ಸರ್ಕಾರ ರಚನೆಗೆ ಪ್ರಯತ್ನಿಸುತ್ತಿದ್ದಾರೆ. ಬಿಜೆಪಿಗೆ ಸ್ಪಷ್ಟ ಬಹುಮತ ಇಲ್ಲ, ಅನ್ಯ ಮಾರ್ಗದಲ್ಲಿ ಸರ್ಕಾರ ರಚನೆ ಮಾಡುವುದು ಸರಿಯಲ್ಲ’ ಎಂದು ದಿನೇಶ್ ಗುಂಡೂರಾವ್ ಹೇಳಿದರು. ‘ಈಗಾಗಲೇ ಬಿಜೆಪಿಯ ಐವರು ನಮ್ಮ ಸಾಕಷ್ಟು ನಾಯಕರನ್ನು ಸಂಪರ್ಕ

ಮಾಡಿರುವ ಮಾಹಿತಿ ಗೊತ್ತಿದೆ. ಸೂಕ್ತ ಸಮಯದಲ್ಲಿ ಈ ಕುರಿತು ಮಾತನಾಡುತ್ತೇವೆ’ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು. ಯಡಿಯೂರಪ್ಪ ಜತೆ ಸಚಿವ ರಮೇಶ್ ಜಾರಕಿಹೊಳಿ ಒಂದೇ ವಿಮಾನ ದಲ್ಲಿ ದೆಹಲಿಗೆ ತೆರಳಿದ್ದಾರೆ ಎಂಬ ಗುಮಾನಿ ಕುರಿತು ಪ್ರತಿಕ್ರಿಯಿಸಿದ ಅವರು, ಜಾರಕಿಹೊಳಿ ಮತ್ತಿತರರು ಪಕ್ಷದ ಕಟ್ಟಾಳುಗಳು. ಯಾರು ಸುದ್ದಿ ಹರಡಿಸುತ್ತಿದ್ದಾರೋ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

13ಕ್ಕೆ ರಾಹುಲ್ ಜನಧ್ವನಿ ರ‍್ಯಾಲಿ

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆ.13ರಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಬೀದರ್​ನಲ್ಲಿ ಪಕ್ಷ ಹಮ್ಮಿಕೊಂಡಿರುವ ಜನಧ್ವನಿ ರ‍್ಯಾಲಿ ಮುನ್ನೆಡೆಸಲಿದ್ದಾರೆ. ಕೇಂದ್ರ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದ್ದು, ಅದರ ಲೋಪಗಳನ್ನು ಎತ್ತಿ ತೋರಿಸಲಾಗುತ್ತದೆ. ಲೋಕಸಭಾ ಚುನಾವಣೆಗೆ ಪೂರ್ವಭಾವಿ ಯಾಗಿ ಇದು ಮಹತ್ವದ ಕಾರ್ಯಕ್ರಮ ವಾಗಿರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದರು. ಕ್ವಿಟ್ ಇಂಡಿಯಾ ಚಳವಳಿ ಸ್ಮರಣೆಗಾಗಿ ಆ.9ರಂದು ಎಲ್ಲ ಜಿಲ್ಲೆಗಳಲ್ಲಿ ಪಕ್ಷದಿಂದ ಕಾರ್ಯಕ್ರಮ ನಡೆಯಲಿದ್ದು, ಬೆಂಗಳೂರಿನ ಪುರಭವನ ದಲ್ಲಿ ಸಮಾವೇಶ ಆಯೋಜಿಸಲಾಗಿದೆ ಎಂದರು.

ರಾಜ್ಯ ಪ್ರತಿನಿಧಿಸುತ್ತಿರುವ ನಿರ್ಮಲಾ ಸೀತಾರಾಮನ್ ಕೇಂದ್ರದಿಂದ ಅನ್ಯಾಯ ವಾಗುತ್ತಿದ್ದರೂ ಸುಮ್ಮನಿದ್ದಾರೆ. ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ವಿಫಲರಾಗಿದ್ದೀರೆಂದು ತಿಳಿಸಲು ಅವರಿಗೆ ಪತ್ರ ಬರೆಯುತ್ತಿದ್ದೇವೆ.

| ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ

Leave a Reply

Your email address will not be published. Required fields are marked *

Back To Top