Sunday, 15th July 2018  

Vijayavani

ಬಾಲಕನ ವಿಡಿಯೋ ಹಿಂದೆ ಬಿಜೆಪಿ ಕೈವಾಡ ಆರೋಪ - ವಿಡಿಯೋ ತನಿಖೆಗೆ ಸದಾನಂದಗೌಡ ಆಗ್ರಹ - ರಾಜಕಾರಣಿಗಳ ಆಟಕ್ಕೆ ಕೊಡವರ ಆಕ್ರೋಶ        26 ವರ್ಷ ಲಿಂಗಾಯತರೇ ರಾಜ್ಯ ಆಳಿದ್ದಾರೆ - ಕುಮಾರಸ್ವಾಮಿ ಸಿಎಂ ಆಗಿ 2 ತಿಂಗಳಾಗಿದೆ - ಉತ್ತರ ಕರ್ನಾಟಕ ನಿರ್ಲಕ್ಷ್ಯ ಆರೋಪಕ್ಕೆ ದೇವೇಗೌಡ ತಿರುಗೇಟು        ಕೊನೆಗೂ ಶಿರಾಡಿ ಘಾಟ್‌ ಲೋಕಾರ್ಪಣೆ - ವಾಸ್ತು ಪ್ರಕಾರ ರೇವಣ್ಣ ಉದ್ಘಾಟನೆ - ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ        ಮಟನ್ ಬಿರಿಯಾನಿ, ಚಿಕನ್ ಚಾಪ್ಸ್, ಬೋಟಿ ಗೊಜ್ಜು, ಮೊಟ್ಟೆ - 25 ಸಾವಿರ ಮಂದಿಗೆ ಭರ್ಜರಿ ಬಾಡೂಟ - ಚಾಮುಂಡೇಶ್ವರಿ ಕ್ಷೇತ್ರದ ಜನರಿಗೆ ಜಿಟಿಡಿ ಕೃತಜ್ಞತೆ        ಒಂದು ದೇಶ ಒಂದೇ ಚುನಾವಣೆ - ಮೋದಿ ಪರಿಕಲ್ಪನೆಗೆ ಸೂಪರ್‌ಸ್ಟಾರ್‌ ಬೆಂಬಲ - ಹಣ, ಸಮಯ ಉಳಿತಾಯ ಎಂದ ರಜನಿ        ಉಕ್ಕಿಹರಿಯುತ್ತಿರೋ ಕೃಷ್ಣೆ - ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ - ಇತ್ತ ತಮಿಳುನಾಡಿನಲ್ಲಿ ಕಾವೇರಿ ಭೋರ್ಗರೆತ       
Breaking News

BSY ಪುತ್ರ, ಶಾಸಕ ರಾಘವೇಂದ್ರ ಕಾರು ಡಿಕ್ಕಿಯಾಗಿ ಯುವಕ ಸಾವು

Friday, 01.09.2017, 7:37 AM       No Comments

ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್​ ಯಡಿಯೂರಪ್ಪ ಪುತ್ರ ಶಾಸಕ ಬಿ.ವೈ.ರಾಘವೇಂದ್ರರ ಕಾರು ಡಿಕ್ಕಿಯಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ದಾವಣಗೆರೆಯ ಹೊನ್ನಾಳಿ ತಾಲೂಕಿನ ಮಾದಾಪುರ ಬಳಿ ನಿನ್ನೆ ತಡರಾತ್ರಿ ನಡೆದಿದೆ.

ಮಾದಾಪುರ ಗ್ರಾಮದ 24 ವರ್ಷದ ಸುರೇಶ್ ಮೃತ ದುರ್ದೈವಿ. ಹೊನ್ನಾಳಿಯಿಂದ ಶಿಕಾರಿಪುರಕ್ಕೆ ಹೋಗುವಾಗ ಈ ಅಪಘಾತ ಸಂಭವಿಸಿದೆ. ಚಾಲಕನ ಅಜಾಗರೂಕತೆಯೇ ದುರ್ಘಟನೆಗೆ ಕಾರಣ ಎನ್ನಲಾಗಿದೆ.

ಸ್ಥಳಕ್ಕೆ ನ್ಯಾಮತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top