Sunday, 15th July 2018  

Vijayavani

ಬಾಲಕನ ವಿಡಿಯೋ ಹಿಂದೆ ಬಿಜೆಪಿ ಕೈವಾಡ ಆರೋಪ - ವಿಡಿಯೋ ತನಿಖೆಗೆ ಸದಾನಂದಗೌಡ ಆಗ್ರಹ - ರಾಜಕಾರಣಿಗಳ ಆಟಕ್ಕೆ ಕೊಡವರ ಆಕ್ರೋಶ        26 ವರ್ಷ ಲಿಂಗಾಯತರೇ ರಾಜ್ಯ ಆಳಿದ್ದಾರೆ - ಕುಮಾರಸ್ವಾಮಿ ಸಿಎಂ ಆಗಿ 2 ತಿಂಗಳಾಗಿದೆ - ಉತ್ತರ ಕರ್ನಾಟಕ ನಿರ್ಲಕ್ಷ್ಯ ಆರೋಪಕ್ಕೆ ದೇವೇಗೌಡ ತಿರುಗೇಟು        ಕೊನೆಗೂ ಶಿರಾಡಿ ಘಾಟ್‌ ಲೋಕಾರ್ಪಣೆ - ವಾಸ್ತು ಪ್ರಕಾರ ರೇವಣ್ಣ ಉದ್ಘಾಟನೆ - ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ        ಮಟನ್ ಬಿರಿಯಾನಿ, ಚಿಕನ್ ಚಾಪ್ಸ್, ಬೋಟಿ ಗೊಜ್ಜು, ಮೊಟ್ಟೆ - 25 ಸಾವಿರ ಮಂದಿಗೆ ಭರ್ಜರಿ ಬಾಡೂಟ - ಚಾಮುಂಡೇಶ್ವರಿ ಕ್ಷೇತ್ರದ ಜನರಿಗೆ ಜಿಟಿಡಿ ಕೃತಜ್ಞತೆ        ಒಂದು ದೇಶ ಒಂದೇ ಚುನಾವಣೆ - ಮೋದಿ ಪರಿಕಲ್ಪನೆಗೆ ಸೂಪರ್‌ಸ್ಟಾರ್‌ ಬೆಂಬಲ - ಹಣ, ಸಮಯ ಉಳಿತಾಯ ಎಂದ ರಜನಿ        ಉಕ್ಕಿಹರಿಯುತ್ತಿರೋ ಕೃಷ್ಣೆ - ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ - ಇತ್ತ ತಮಿಳುನಾಡಿನಲ್ಲಿ ಕಾವೇರಿ ಭೋರ್ಗರೆತ       
Breaking News

ಉದ್ಯೋಗ ಸೃಷ್ಟಿಗೆ ಸಿಎಂ ಎಚ್​ಡಿಕೆಗೆ ವಿನಂತಿಸಿ ಯುವಕ ಆತ್ಮಹತ್ಯೆಗೆ ಶರಣು

Tuesday, 03.07.2018, 6:04 PM       No Comments

ದಾವಣಗೆರೆ: ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವಂತೆ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರಿಗೆ ವಿನಂತಿಸಿ ಯುವಕನೊರ್ವ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಚನ್ನಗಿರಿ ತಾಲೂಕಿನ ಹೊಸನಗರದಲ್ಲಿ ಮಂಗಳವಾರ ನಡೆದಿದೆ.

ಅನಿಲ್‌. ಬಿ (22) ನೇಣಿಗೆ ಶರಣಾದ ವಿದ್ಯಾರ್ಥಿ. ಈತ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಎಂಎ ಓದುತ್ತಿದ್ದ. ನೇಣಿಗೆ ಶರಣಾಗುವ ಮುನ್ನ ಮೊಬೈಲ್‌ನಲ್ಲಿ ಹೇಳಿಕೆ ರೆಕಾರ್ಡ್‌ ಮಾಡಿ, ಡೆತ್​ನೋಟ್​ ಬರೆದು, ಉದ್ಯೋಗ ಸೃಷ್ಟಿಗೆ ವಿನಂತಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿವೆ. ರಾಜಕಾರಣಿಗಳು ತಮ್ಮ ಮಕ್ಕಳಿಗೆ ಹಾಗೂ ಸಂಬಂಧಿಕರಿಗೆ ಮಾತ್ರ ಉದ್ಯೋಗ ನೀಡುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಯಾವುದೇ ಉದ್ಯೋಗ ದೊರೆಯುತ್ತಿಲ್ಲ. ಸರ್ಕಾರದ ನಡೆಗೆ ಬೇಸತ್ತು ಸಾವನ್ನಪ್ಪುತ್ತಿದ್ದೇನೆ ಎಂದು ಯುವಕ ವಿಡಿಯೋ ಹಾಗೂ ಡೆತ್​ನೋಟ್​ನಲ್ಲಿ ಉಲ್ಲೇಖಿಸಿದ್ದಾನೆ.

ಕರ್ನಾಟಕ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಯುವಕರನ್ನು ಪರಿಗಣನೆಗೆ ತೆಗೆದುಕೊಂಡು ಉದ್ಯೋಗ ಸೃಷ್ಟಿ ಮಾಡಲಿ. ಗ್ರಾಮೀಣ ಪ್ರದೇಶದಲ್ಲಿ ಪದವಿಯನ್ನು ಪಡೆದಿರುವ ವಿದ್ಯಾರ್ಥಿಗಳು ಕೂಲಿಗೆ ಹೋಗುವ ಪರಿಸ್ಥಿತಿ ಬಂದಿದೆ. ಆದ್ದರಿಂದ ನಾನೊಬ್ಬ ವಿದ್ಯಾರ್ಥಿಯಾಗಿ, ಬಡ ಕುಟುಂಬದ ವ್ಯಕ್ತಿಯಾಗಿ, ಯುವಕನಾಗಿ ಹಾಗೂ ನಿರುದ್ಯೋಗಿಯಾಗಿ ಸರ್ಕಾರಕ್ಕೆ ನನ್ನ ಸಾವಿನಿಂದ ವರದಿಯನ್ನು ನೀಡುತ್ತಿದ್ದೇನೆ. ನನ್ನ ಸಾವಿನಿಂದಾದರೂ ಎಚ್ಚೆತ್ತು ವಿದ್ಯಾವಂತ ಯುವಕರಿಗೆ ಉದ್ಯೋಗ ಸೃಷ್ಟಿಸಿ, ಬಡತನ ನಿವಾರಣೆ ಮಾಡಲಿ, ನನ್ನ ಸಾವು ವಿದ್ಯಾವಂತ ಯುವಕರಿಗೆ ಹಾಗೂ ನಿರುದ್ಯೋಗಿಗಳಿಗೆ ಮಾತ್ರ ಅರ್ಥವಾಗುತ್ತದೆ. ಆದ್ದರಿಂದ ಸರ್ಕಾರ ಉದ್ಯೋಗವನ್ನು ಸೃಷ್ಟಿಸಿ, ಯುವಕರನ್ನು ಉಳಿಸಿ ಎಂದು ಡೆತ್​ನೋಟ್​ ಬರೆದಿಟ್ಟು ವಿನಂತಿ ಮಾಡಿಕೊಂಡಿದ್ದಾನೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top