Monday, 11th December 2017  

Vijayavani

1. ಮತ್ತಷ್ಟು ಹದಗೆಟ್ಟ ರವಿ ಬೆಳಗೆರೆ ಆರೋಗ್ಯ – ಕಾಲು ನೋವು, ನಿಶ್ಯಕ್ತಿಯಿಂದ ಪತ್ರಕರ್ತನ ನರಳಾಟ – ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ 2. ಮಧ್ಯಾಹ್ನ 12ಕ್ಕೆ ಕೋರ್ಟ್​ಗೆ ಹಾಜರ್ – ರವಿ ಬೆಳಗೆರೆ ವಿರುದ್ಧ ಮತ್ತೊಂದು ಕೇಸ್‌ – ಪತ್ರಕರ್ತನಿಗೆ ಜೈಲಾ..? ಬೇಲಾ..? 3. ಬಳ್ಳಾರಿಯಲ್ಲಿ ಗಣಿಗಾರಿಕೆ ವಿರುದ್ಧ ಕೂಗು – ಕುಮಾರಸ್ವಾಮಿ ಬೆಟ್ಟ ಉಳಿವಿಗೆ ಸಂಡೂರು ಬಂದ್ – ಅಂಗಡಿ, ಮುಂಗಟ್ಟುಗಳಿಗೆ ಬೀಗ, ಶಾಲಾ-ಕಾಲೇಜಿಗೆ ರಜೆ 4. ರಾಜ್ಯ ಸರ್ಕಾರದಿಂದ ಬಿಜೆಪಿ ಹತ್ತಿಕ್ಕುವ ಕೆಲಸ – ರ‍್ಯಾಲಿಯಲ್ಲಿ ಭಾಗಿಯಾದವ್ರ ವಿರುದ್ಧ ಟ್ರಾಫಿಕ್‌ ಪೊಲೀಸ್‌ ಕೇಸ್ – ಕಲಬುರಗಿಯಲ್ಲಿ ಖಾಕಿ, ಕೇಸರಿ ಕದನ 5. ಪ್ರಧಾನಿ ಮೋದಿ ರ‍್ಯಾಲಿಗೆ ಅವಕಾಶವಿಲ್ಲ – ಮೆಗಾ ರೋಡ್​ ಶೋಗೆ ಅನುಮತಿ ನಿರಾಕರಣೆ – ರಾಹುಲ್ ಸಮಾವೇಶಕ್ಕೂ ಗುಜರಾತ್ ಪೊಲೀಸರ ತಡೆ
Breaking News :

ಧ್ವನಿವರ್ಧಕ ಬಳಕೆ ನಿಷೇಧಿಸಿ ದಾವಣಗೆರೆ ಡಿಸಿ ಆದೇಶ

Sunday, 13.08.2017, 1:25 PM       No Comments

ದಾವಣಗೆರೆ: ಸುಪ್ರೀಂಕೋರ್ಟ್ ಆದೇಶವನ್ನೇ ನೆಪವಾಗಿಸಿಕೊಂಡು ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಬಂಧ ಹೇರುವುದಿಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದ ಬೆನ್ನಲ್ಲೇ ದಾವಣಗೆರೆ ಡಿಸಿ ಧ್ವನಿವರ್ಧಕ ಬಳಕೆ ನಿಷೇಧಿಸಿ ಆದೇಶಿಸಿದ್ದಾರೆ.

ದಾವಣಗೆರೆ ಜಿಲ್ಲಾಧಿಕಾರಿ ರಮೇಶ್​ ಅವರು ರಾಷ್ಟ್ರೀಯ ಹಬ್ಬ, ಮೆರವಣಿಗೆ, ಸಮಾರಂಭ, ರಾಜಕೀಯ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಶಬ್ದ ಹೊರ ಸೂಸುವ ಧ್ವನಿವರ್ಧಕ ಬಳಸದಂತೆ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಆದರೆ ಈ ಆದೇಶ 31-12-2017ರವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಲಾಗಿದೆ. ನಿಷೇಧಕ್ಕೆ ಮಕ್ಕಳು, ವೃದ್ಧರು ಮತ್ತು ಗರ್ಭಿಣಿಯರಿಗೆ ತೊಂದರೆಯಾಗುತ್ತದೆ ಎಂಬ ಕಾರಣವನ್ನು ನೀಡಲಾಗಿದೆ.

ಜತೆಗೆ ಆದೇಶ ಪ್ರತಿಯಲ್ಲಿ ವಿವಿಧ ಪ್ರದೇಶಗಳಿಗೆ ಶಬ್ದದ ಪ್ರಮಾಣ ಇಂತಿಷ್ಟೇ ಡೆಸಿಬಲ್​ ಇರಬೇಕು ಎಂದು ಸೂಚಿಸಲಾಗಿದೆ. ಜಿಲ್ಲಾಧಿಕಾರಿಗಳ ಆದೇಶಕ್ಕೆ ಹಿಂದೂಪರ ಸಂಘಟನೆಗಳು ಮತ್ತು ವಿವಿಧ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಗಣೇಶೋತ್ಸವಕ್ಕೆ ಒಂದೊಂದು ಕಡೆ ಒಂದೊಂದು ನಿರ್ಬಂಧಗಳನ್ನು ಹೇರುವ ಮೂಲಕ ಜನರ ಧಾರ್ವಿುಕ ಭಾವನೆಗಳಿಗೆ ಧಕ್ಕೆ ತರಲು ಹೊರಟಿದ್ದ ರಾಜ್ಯ ಸರ್ಕಾರ ವಿಜಯವಾಣಿ ಸರಣಿ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಸುಗಮ ಗಣೇಶೋತ್ಸವ ಆಚರಣೆಗೆ ಪೂರಕವಾಗಿ ಕೆಲವು ಭದ್ರತಾ ನಿಯಮ ಅನುಸರಿಸುವುದನ್ನು ಬಿಟ್ಟರೆ, ಯಾವುದೇ ನಿರ್ಬಂಧ ವಿಧಿಸುವುದಿಲ್ಲ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರೇ ಸ್ಪಷ್ಟ ಪಡಿಸಿದ್ದರು. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top