Monday, 19th February 2018  

Vijayavani

ವಿದ್ಯಾರ್ಥಿ ಮೇಲೆ ದರ್ಪ ಮೆರೆದಿದ್ದ ಗೂಂಡಾ ಅರೆಸ್ಟ್ - ಕಬ್ಬನ್‌ ಪಾರ್ಕ್‌ ಪೊಲೀಸರಿಂದ ಬಂಧನ - ಠಾಣೆ ಎದುರು ಕಾರ್ಯಕರ್ತರ ಹೈಡ್ರಾಮಾ        ಶ್ರವಣಬೆಳಗೊಳದತ್ತ ಪ್ರಧಾನಿ ಮೋದಿ ಪಯಣ - ಬಾಹುಬಲಿಗೆ ಹೆಲಿಕಾಪ್ಟರ್‌ ಮೂಲಕ ಪುಷ್ಪನಮನ - ನಾಲ್ಕು ಗಂಟೆ ವೇಳೆಗೆ ಮೈಸೂರಲ್ಲಿ ಬಿಜೆಪಿ ಪರಿವರ್ತನಾ        ಭಾರತವೇ ಎಲ್ಲ ಆವಿಷ್ಕಾರಕ್ಕೆ ಹಾಟ್‌ ಸ್ಪಾಟ್ - ಜನರಿಂದಲೇ ಡಿಜಿಟಲ್ ಇಂಡಿಯಾ ಸಕ್ಸಸ್ - ಹೈದ್ರಾಬಾದ್ ಸಮಾವೇಶಕ್ಕೆ ಮೈಸೂರಿಂದ ಮೋದಿ ಸ್ಪೀಚ್        ಮುಂದುವರಿದ ಪಿಎನ್‌ಬಿ ಬ್ಯಾಂಕ್‌ ಹಗರಣ ಬೇಟೆ - ಬೆಂಗಳೂರಿನ ಹಲವೆಡೆ ಇಡಿ ದಾಳಿ - ನೀರವ್ ಡೈಮಂಡ್ಸ್ ಮಳಿಗೆಗಳಲ್ಲಿ ಶೋಧ        ಕೆ.ಆರ್‌ ಆಸ್ಪತ್ರೆಗೆ ಕೆ.ಎಸ್‌ ಪುಟ್ಟಣ್ಣಯ್ಯ ಪಾರ್ಥಿವ ಶರೀರ ರವಾನೆ - ವಿದೇಶದಿಂದ ಪುತ್ರಿ ಬಂದ ಬಳಿಕ ಬುಧವಾರ ಅಂತ್ಯಕ್ರಿಯೆ - ಗಣ್ಯರಿಂದ ಸಂತಾಪ       
Breaking News

ಗಂಗೆಗೆ ನಮಿಸಿದ ದೀಪಿಕಾ ಪಡುಕೋಣೆ

Tuesday, 04.04.2017, 9:26 AM       No Comments

https://www.youtube.com/watch?v=inE3nqmYwL0&feature=youtu.be

ಹೃಷಿಕೇಶ: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಸೋಮವಾರ ಹೃಷಿಕೇಶದಲ್ಲಿ ಗಂಗಾ ಆರತಿಯಲ್ಲಿ ಪಾಲ್ಗೊಂಡಿದ್ದಾರೆ. ಸಾಂಪ್ರದಾಯಿಕ ಉಡುಗೆಯಲ್ಲಿ ಗಂಗೆಯ ತಟದಲ್ಲಿ ನಿಂತು ಆರತಿ ಬೆಳಗಿ, ವಿಶೇಷ ಪೂಜೆಯಲ್ಲಿ ಭಾಗವಹಿಸಿ ಪುಳಕಿತರಾಗಿದ್ದಾರೆ. ಇತ್ತೀಚೆಗಷ್ಟೇ ಹಾಲಿವುಡ್ ಸಿನಿಮಾ ಟ್ರಿಪಲ್ ಎಕ್ಸ್- ದ ರಿಟರ್ನ್ ಆಫ್ ಕ್ಸಾಂಡರ್ ಕೇಜ್ನಲ್ಲಿ ಮಿಂಚಿದ್ದ ದೀಪಿಕಾ, ಸದ್ಯ ಪದ್ಮಾವತಿ ಹಾಗೂ ರಾಬ್ತಾ ಚಿತ್ರಗಳಲ್ಲಿ ಬ್ಯುಸಿ. ಅದ್ರ ನಡುವೆಯೂ ಗಂಗಾ ಆರತಿಯಲ್ಲಿ ಪಾಲ್ಗೊಂಡಿರೋದು ವಿಶೇಷ. ಸಾಮಾನ್ಯವಾಗಿ ಪ್ರತಿ ಸಿನಿಮಾ ರಿಲೀಸ್ ಸಮಯದಲ್ಲೂ ಈ ಪಡುಕೋಣೆ ಹುಡುಗಿ ಮುಂಬೈನ ಸಿದ್ಧಿವಿನಾಯಕ ದೇವಾಲಯಕ್ಕೆ ಭೇಟಿ ನೀಡುವುದನ್ನು ರೂಢಿಸಿಕೊಂಡಿದ್ದಾರೆ.

– ಏಜೆನ್ಸೀಸ್

(ವೈವಿಧ್ಯಮಯ ಸುದ್ದಿಗಳಿಗೆ ವಿಜಯವಾಣಿ ಪತ್ರಿಕೆ ಓದಿರಿ)

Leave a Reply

Your email address will not be published. Required fields are marked *

Back To Top