Friday, 21st September 2018  

Vijayavani

ಸಂಕಷ್ಟ ತಂದ ದಂಗೆ ಹೇಳಿಕೆ - ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು - ರಾಷ್ಟ್ರಪತಿಗಳಿಗೆ ಮಾಹಿತಿ ರವಾನೆ ಸಾಧ್ಯತೆ        ಸಿಎಂ ಬೇಜವಾಬ್ಧಾರಿ ಹೇಳಿಕೆಗೆ ರಾಜ್ಯಾದ್ಯಂತ ಖಂಡನೆ - ಬಿಜೆಪಿ ಕಾರ್ಯಕರ್ತರ ಪ್ರೊಟೆಸ್ಟ್​ - ಬಾಗಲಕೋಟೆಯಲ್ಲಿ ಬ್ಯಾನರ್​ ದಹನ        ಮಲೆನಾಡಲ್ಲಿ ಪ್ರವಾಹದ ಬೆನ್ನಲ್ಲೇ ಮತ್ತೊಂದು ಬರೆ - ನೆರೆ ಬಳಿಕ ಬತ್ತುತ್ತಿವೆ ನದಿಗಳು - ಆತಂಕದಲ್ಲಿ ಚಿಕ್ಕಮಗಳೂರು ಜನತೆ        ಶತಮಾನದ ಆಸ್ಪತ್ರೆಗೆ ಸರ್ಕಾರದ ಬೀಗ - ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ಜಾಗ - ಉಡುಪಿಯಲ್ಲಿ ಉಚಿತ ಚಿಕಿತ್ಸೆ ಇನ್ನು ಮರೀಚಿಕೆ..?        ಮೈಸೂರಲ್ಲಿ ನಾಡಹಬ್ಬಕ್ಕೆ ತಯಾರಿ - ಮಾವುತರಿಗೆ ಜಿಲ್ಲಾಡಳಿತದ ಭೂರಿ ಭೋಜನ - ಕೇರಂ ಆಡಿ ಸಂತಸಪಟ್ಟ ಕಾವಾಡಿಗರು        ಹುಬ್ಬಳ್ಳಿಯಲ್ಲಿ ಅಷ್ಟವಿನಾಯಕ ಸ್ಪರ್ಧೆ - ಅಲಂಕಾರದಲ್ಲಿ ಹಿರೇಪೇಟೆಯ ವಿನಾಯಕ ಪ್ರಥಮ- ಗಾಂಧಿ ಚೌಕ್ ಗಣಪ ಉತ್ತಮ ವಿಗ್ರಹ       
Breaking News

ಎಚ್‌ಡಿಕೆ ವಿರುದ್ಧ ಮಾನನಷ್ಟ ಮೊಕದ್ದಮೆ: 1 ಕೋಟಿ ರೂ. ಪರಿಹಾರಕ್ಕೆ ದಾವೆ

Tuesday, 09.01.2018, 6:55 PM       No Comments

<< ದೀಪಕ್​ ಹತ್ಯೆಯಲ್ಲಿ ಬಿಜೆಪಿ ನಾಯಕರ ಕೈವಾಡ ಎಂದಿದ್ದ ಮಾಜಿ ಮುಖ್ಯಮಂತ್ರಿ? >>

ಮಂಗಳೂರು: ಮಂಗಳೂರಿನ ಕಾಟಿಪಳ್ಳದಲ್ಲಿ ನಡೆದ ದೀಪಕ್ ರಾವ್‌ ಹತ್ಯೆಯ ಹಿಂದೆ ಸ್ಥಳೀಯ ಬಿಜೆಪಿ ನಾಯಕರ ಕೈವಾಡವಿದೆ ಎಂದು ಆರೋಪಿಸಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಸಿವಿಲ್‌ ಕೋರ್ಟ್‌ಗೆ ಈ ಕುರಿತು ದೂರು ನೀಡಲಾಗಿದ್ದು, ೧ ಕೋಟಿ ರೂ. ಮೊತ್ತದ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ.

ಮಂಗಳೂರು ಉತ್ತರ ಕ್ಷೇತ್ರದ ಅಧ್ಯಕ್ಷ ಡಾ.ಭರತ್ ಶೆಟ್ಟಿ ಕುಮಾರಸ್ವಾಮಿ ವಿರುದ್ಧ ದೂರನ್ನು ದಾಖಲಿಸಿದ್ದಾರೆ.

ಸೋಮವಾರವಷ್ಟೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕಾಟಿಪಳ್ಳದಲ್ಲಿ ನಡೆದ ಕೊಲೆಯ ಹಿಂದೆ ಸ್ಥಳೀಯ ಬಿಜೆಪಿ ನಾಯಕರ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಅದಾದ ಮೂರ್ನಾಲ್ಕು ಗಂಟೆಗಳ ಅಂತರದಲ್ಲೇ ಉಲ್ಟಾ ಹೊಡೆದಿದ್ದ ಅವರು, ನನ್ನ ಬಳಿ ಇರುವ ಮಾಹಿತಿ ಸುಳ್ಳೂ ಇರಬಹುದು. ಯಾವೊಬ್ಬ ವ್ಯಕ್ತಿ ಮೇಲೆ ನಾನು ಆರೋಪ ಮಾಡಿಲ್ಲ. ಕೊಲೆ ಪ್ರಕರಣಗಳಲ್ಲಿ ರಾಷ್ಟ್ರೀಯ ಪಕ್ಷಗಳು ರಾಜಕಾರಣ ಮಾಡುವುದು ಬೇಡ ಎಂಬುದಷ್ಟೆ ನನ್ನ ಮಾತಿನ ಅರ್ಥವಾಗಿತ್ತು ಎಂದು ತಿಳಿಸಿದ್ದರು. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top