Monday, 11th December 2017  

Vijayavani

1. ಜಮ್ಮುವಿನಲ್ಲಿ ಗುಂಡಿನ ಚಕಮಕಿ- ಯೋಧರ ಗುಂಡೇಟಿಗೆ ಮೂವರು ಉಗ್ರರು ಮಟಾಶ್​​​- ಒಬ್ಬ ಜೀವಂತವಾಗಿ ಸೆರೆ, ವಿಚಾರಣೆ 2. ರವಿ ಬೆಳಗೆರೆ ಕಸ್ಟಡಿ ಅವಧಿ ಇಂದಿಗೆ ಅಂತ್ಯ- ಮಧ್ಯಾಹ್ನ ನ್ಯಾಯಾಲಯಕ್ಕೆ ಪತ್ರಕರ್ತ ಹಾಜರು- ಜಾಮೀನು ಕೊಡ್ತಾರಾ ನ್ಯಾಯಾಧೀಶರು..? 3. ಮಕ್ಕಳ ಮೊಟ್ಟೆ ಗುತ್ತಿಗೆದಾರರ ಹೊಟ್ಟೆಗೆ- ಕೊಪ್ಪಳದಲ್ಲಿ ನಡೆದಿದೆ ಮೊಟ್ಟೆ ಗೋಲ್​​ಮಾಲ್​- ಡಿಸಿ ಸೇರಿ ನಾಲ್ವರ ವಿರುದ್ಧ ಲೋಕಾಯುಕ್ತಕ್ಕೆ ದೂರು 4. ಸರ್ಕಾರಿ ಜಾಗದ ಮೇಲೆ ಬಿಲ್ಡರ್​ ಕಣ್ಣು- ರಾತ್ರೋರಾತ್ರೊ ಮನೆ ಖಾಲಿಗೆ ಆವಾಜ್​​- ಹುಬ್ಬಳ್ಳಿಯಲ್ಲಿ ದಯಾಮರಣಕ್ಕೆ 12 ಕುಟುಂಬದಿಂದ ಅರ್ಜಿ 5. ಗುತ್ತಿಗೆದಾರರ ಬಳಿ ಸರ್ಕಾರಿ ಫೈಲ್​​​​​ ಪ್ರಕರಣ- ಸ್ಪಷ್ಟನೆ ಕೋರಿ ಎಇಇಗೆ ನೋಟಿಸ್​​​- ಇದು ದಿಗ್ವಿಜಯ ನ್ಯೂಸ್​​ ಬಿಗ್​​ ಇಂಪ್ಯಾಕ್ಟ್​​​​
Breaking News :

ಅಯ್ಯೋ! ಕೇಜ್ರಿವಾಲರ ಬೆಸ ಸಂಖ್ಯೆಯ ಕಾರನ್ನು ಯಾರೋ ಕದ್ದುಬಿಟ್ಟಿದ್ದಾರೆ!

Thursday, 12.10.2017, 6:07 PM       No Comments

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಅವರ ಕಾರು ಕಳ್ಳತನವಾಗಿದೆ.

ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ರಾಜ್ಯ ಸರ್ಕಾರದ ಸಚಿವಾಲಯದ ಬಳಿ ನಿಲ್ಲಿಸಿದ್ದ ಅರವಿಂದ್​ ಕೇಜ್ರಿವಾಲ್​ ಅವರ ನೀಲಿ ಬಣ್ಣದ ವ್ಯಾಗನಾರ್​ ಕಾರನ್ನು ಕಳ್ಳರು ಕದ್ದೊಯ್ದಿದ್ದಾರೆ.

DL 9C G 9769 ನಂ. ನ ವ್ಯಾಗನಾರ್​ ಕಾರು ಕೇಜ್ರಿವಾಲ್​ ಅವರ ಅಚ್ಚುಮೆಚ್ಚಿನ ಕಾರಾಗಿತ್ತು. ಅವರು ದೆಹಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರವೂ ಸಹ ಇದೇ ಕಾರನ್ನು ಬಳಕೆ ಮಾಡುತ್ತಿದ್ದರು. ಕೇಜ್ರಿವಾಲ್​ ಅವರು ಆಮ್​ ಆದ್ಮಿ ಪಕ್ಷ ಕಟ್ಟುವ ಸಂದರ್ಭದಲ್ಲಿ ಮತ್ತು ದೆಹಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದಾಗ ಇದೇ ಕಾರಿನಲ್ಲಿ ಎಲ್ಲೆಡೆಗೆ ತೆರಳುತ್ತಿದ್ದರು.

ಕಾರು ಕಳ್ಳತನ ಸಂಬಂಧ ಐಪಿ ಎಸ್ಟೇಟ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top