Sunday, 23rd September 2018  

Vijayavani

ಜಿಮ್​ ತರಬೇತುದಾರನ ಅಪಹರಣ ಮತ್ತು ಹಲ್ಲೆ ಪ್ರಕರಣದಲ್ಲಿ ನಟ ದುನಿಯಾ ವಿಜಯ್​ ಬಂಧನ.        ವಿಧಾನ ಪರಿಷತ್​​ 3 ಸ್ಥಾನಗಳಿಗೆ ಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಬಿಜೆಪಿ ಪಟ್ಟಿ ಇಂದು ಅಂತಿಮ        ಮೋದಿ ಕಳ್ಳ ಎಂದಿದ್ದ ರಾಹುಲ್​ ವಿರುದ್ಧ ನಿರ್ಮಲಾ ಗುಡುಗು: ರಾಹುಲ್​ ಅವರದ್ದು ಕಳ್ಳರ ಕುಟುಂಬ ಎಂದ ಸಚಿವೆ        ಹಾಸನದಲ್ಲಿ ಇಂದು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಮುಖ್ಯಮಂತ್ರಿ ಎಚ್​ಡಿಕೆ       
Breaking News

ಕಾರ್ತಿ ಜಾಮೀನು ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ

Tuesday, 13.03.2018, 7:27 PM       No Comments

ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ಜಾಮೀನು ಅರ್ಜಿಯ ವಿಚಾರಣೆಯಿಂದ ಇಂದು ನ್ಯಾಯಮೂರ್ತಿ ಇಂದ್ರಮೀತ್‌ ಕೌರ್‌ ಸ್ವಯಂಪ್ರೇರಿತರಾಗಿ ಹಿಂದೆ ಸರಿದಿದ್ದಾರೆ.

ಈ ಕುರಿತು ಯಾವುದೇ ಕಾರಣ ನೀಡದ ನ್ಯಾಯಮೂರ್ತಿ ಕೌರ್‌, ಹಂಗಾಮಿ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್‌ ಅವರಿಗೆ ಜಾಮೀನು ಅರ್ಜಿ ವಿಚಾರಣೆಯನ್ನು ಬೇರೆ ಪೀಠಕ್ಕೆ ವರ್ಗಾಯಿಸುವಂತೆ ಕೋರಲಾಗುವುದು ಎಂದು ತಿಳಿಸಿದ್ದಾರೆ.

ನ್ಯಾಯಮೂರ್ತಿ ಗೀತಾ ಮಿತ್ತಲ್‌ ಮತ್ತು ನ್ಯಾಯಮೂರ್ತಿ ಸಿ. ಹರಿಶಂಕರ್‌ ಅವರ ಪೀಠದ ಮುಂದೆ ನಿನ್ನೆಯಷ್ಟೇ ಜಾಮೀನು ಅರ್ಜಿ ಸಲ್ಲಿಸಲಾಗಿತ್ತು ಮತ್ತು ಇಂದು ವಿಚಾರಣೆಗೆ ನಿಗದಿ ಮಾಡಲಾಗಿತ್ತು.

ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ನಿರಾಕರಿಸಿ ಮಾರ್ಚ್​ 24 ರವರೆಗೆ ನ್ಯಾಯಾಂಗ ಬಂಧನಕ್ಕೆ ಸೋಮವಾರ ಒಪ್ಪಿಸಿದ ನಂತರ ಹೈಕೋರ್ಟ್​ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು.

ಕಾರ್ತಿ ಚಿದಂಬರಂ ಅವರ ಜಾಮೀನು ಅರ್ಜಿಯನ್ನು ನಿಗದಿಯಂತೆ ಮಾ. 15ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಕೋರ್ಟ್‌ ಹೇಳಿದೆ.

ಕಾರ್ತಿ ಚಾರ್ಟೆಂಡ್‌ ಅಕೌಂಟೆಂಟ್‌ಗೆ ಜಾಮೀನು

ಐಎನ್‌ಎಕ್ಸ್‌ ಮೀಡಿಯಾ ಪ್ರಕರಣದಲ್ಲಿ ಕಾರ್ತಿಯೊಂದಿಗೆ ಇ.ಡಿ. ಅಧಿಕಾರಿಗಳು ಬಂಧಿಸಿದ್ದ ಚಾರ್ಟೆಂಡ್‌ ಅಕೌಂಟೆಂಟ್‌ ಭಾಸ್ಕರರಮಣ್‌ಗೆ ದೆಹಲಿ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಸುನೀಲ್‌ ರಾಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ. ಜಾಮೀನಿಗಾಗಿ 2 ಲಕ್ಷ ಮೌಲ್ಯದ ಬಾಂಡ್‌ನ್ನು ಪಡೆಯಲಾಗಿದೆ. (ಏಜೆನ್ಸೀಸ್‌)

Leave a Reply

Your email address will not be published. Required fields are marked *

Back To Top