Saturday, 21st July 2018  

Vijayavani

ಶೀರೂರು ಶ್ರೀಗಳ ಸಾವು ಕೊಲೆಯಲ್ಲ - ಅವರಿಗೆ ಮೊದಲಿಂದಲೂ ಅನಾರೋಗ್ಯ ಇತ್ತು - ಉಡುಪಿಯಲ್ಲಿ ಪೇಜಾವರ ಶ್ರೀ ಸ್ಪಷ್ಟನೆ        ರಾಹುಲ್‌ ಅಪ್ಪುಗೆಗೆ ಬಿಜೆಪಿ ಸಿಡಿಮಿಡಿ - ಸದನದಲ್ಲಿನ ವರ್ತನೆ ಬಗ್ಗೆ ಕೋಪ - ರಾಹುಲ್‌ಗೆ ಸ್ಪೀಕರ್‌ ನೀತಿಪಾಠ        ಭಾಷಣಕ್ಕಿಂತ ರಾಹುಲ್‌ ಕಣ್ಣೇಟು ಫೇಮಸ್‌ - ಪ್ರಿಯಾ ವಾರಿಯರ್‌ ವಿಡಿಯೋಗೆ ಲಿಂಕ್‌ - ಸಾಮಾಜಿಕ ಜಾಲತಾಣಗಳಲ್ಲಿ ಫುಲ್‌ವೈರಲ್‌        ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ - ಕಾವೇರಿಗೆ ಮುಖ್ಯಮಂತ್ರಿ ದಂಪತಿಯಿಂದ ಪೂಜೆ - ಸಚಿವ ಡಿಕೆಶಿ, ಮಹೇಶ್‌ ಸಾಥ್‌        ಸಿಬ್ಬಂದಿ ಒತ್ತಾಯದಿಂದ ಅಲ್ಲಿಗೆ ಹೋಗಿದ್ದೆ - ಮೊಗಸಾಲೆಯಲ್ಲಿ ಬರ್ತಡೇ ಪಾರ್ಟಿ ತಪ್ಪು - ಕ್ಷಮೆ ಕೋರಿದ ವಿಧಾನಸಭೆ ಕಾರ್ಯದರ್ಶಿ        ನಿನ್ನೆ ಬೌಬೌ ಬಿರಿಯಾನಿ - ಇಂದು ಮಿಯಾಂವ್‌ ಮಿಯಾಂವ್‌ ಮಸಾಲ - ಬೆಂಗಳೂರಿನ ವಿಜಯನಗರದಲ್ಲಿ ಬೆಕ್ಕು ನಾಯಿ ಭಕ್ಷ       
Breaking News

ಬಿಎಸ್​ವೈ ಮೇಲುಗೈ, ಕೈಯಲ್ಲಿ ಹೊಯ್ಕೈ

Tuesday, 17.04.2018, 3:07 AM       No Comments

ಬೆಂಗಳೂರು: ದೆಹಲಿ ನಾಯಕರ ಸರಣಿ ಸಭೆ, ಹಲವು ಸಮೀಕ್ಷಾ ವರದಿಗಳ ಅಧ್ಯಯನ ಬಳಿಕ ಬಿಜೆಪಿ 82 ಅಭ್ಯರ್ಥಿಗಳನ್ನು ಒಳಗೊಂಡ ಎರಡನೇ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಹೆಚ್ಚಿನ ಅಭ್ಯರ್ಥಿಗಳಿಗೆ ಟಿಕೆಟ್ ಸಿಕ್ಕಿದ್ದು, ಬಿಎಸ್​ವೈ ಕೈ ಮೇಲಾಗಿದೆ.

ಕಳೆದ ಬಾರಿ ಬಿಜೆಪಿ, ಕೆಜೆಪಿಯಿಂದ ಸ್ಪರ್ಧಿಸಿ ಸೋತಿದ್ದ 43 ಅಭ್ಯರ್ಥಿಗಳಿಗೆ ಮನ್ನಣೆ ಸಿಕ್ಕಿದೆ. ಬೇರೆ ಪಕ್ಷದಿಂದ ಬಿಜೆಪಿಗೆ ಸೇರಿದ್ದ ನೆ. ಲ ನರೇಂದ್ರ ಬಾಬು, ಅಶೋಕ್ ಪೂಜಾರಿ, ಕುಮಾರ್ ಬಂಗಾರಪ್ಪ, ಎಂ.ಆರ್. ಹುಲಿನಾಯ್ಕರ್, ಸುನೀಲ್ ಹೆಗಡೆ ಹಾಗೂ ಸಂದೇಶ್ ಸ್ವಾಮಿಗೆ ಟಿಕೆಟ್ ನೀಡಲಾಗಿದೆ.

ಯುವಶಕ್ತಿಗೆ ಆದ್ಯತೆ

ಯುವ ಮೋರ್ಚಾದ 16 ಪದಾಧಿಕಾರಿಗಳಿಗೆ ಟಿಕೆಟ್ ನೀಡಲು ಬೇಡಿಕೆಯಿದ್ದರೂ ಇಬ್ಬರಿಗೆ ಅವಕಾಶ ಸಿಕ್ಕಿದೆ. ಬೆಳ್ತಂಗಡಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಹರೀಶ್ ಪೂಂಜಾ, ಕೋಲಾರಕ್ಕೆ ರಾಜ್ಯ ಯುವಮೋರ್ಚಾ ಉಪಾಧ್ಯಕ್ಷ ಓಂಶಕ್ತಿಛಲಪತಿಗೆ ಟಿಕೆಟ್ ನೀಡಲಾಗಿದೆ. ಕಲಬುರಗಿ ಉತ್ತರ ಕ್ಷೇತ್ರದಿಂದ ಚಂದ್ರಕಾಂತ್ ಪಾಟೀಲ್ ಟಿಕೆಟ್ ಪಡೆದಿದ್ದಾರೆ.

ವರಿಷ್ಠರಿಗೆ ತಲೆನೋವು ತಂದ ಬಂಡಾಯ

ಒಂದೇ ಹಂತದಲ್ಲಿ 218 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ ಮರುದಿನ ಪಕ್ಷದಲ್ಲಿ ಎದ್ದಿರುವ ಬಂಡಾಯ, ಅತೃಪ್ತಿಯಿಂದಾಗಿ ಕಾಂಗ್ರೆಸ್ ಇಕ್ಕಟ್ಟಿಗೆ ಸಿಲುಕಿದೆ. ಮಂಡ್ಯ, ಚಿಕ್ಕಮಗಳೂರುಗಳಲ್ಲಿ ಕಾರ್ಯಕರ್ತರು ಪಕ್ಷದ ಕಚೇರಿಯ ಪೀಠೋಪಕರಣ ಧ್ವಂಸಗೊಳಿಸಿ ಆಕ್ರೋಶ ಹೊರಹಾಕಿದ್ದಾರೆ. 15 ಜಿಲ್ಲೆಗಳಲ್ಲಿ ಟಿಕೆಟ್ ವಂಚಿತರ ಬೆಂಬಲಿಗರು ಪ್ರತಿಭಟನೆ, ಧರಣಿ, ಹೆದ್ದಾರಿ ತಡೆ ನಡೆಸಿ ಪಕ್ಷದ ಹೈಕಮಾಂಡ್ ನಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಚೇರಿ ಎದುರು ಸರಣಿ ಪ್ರತಿಭಟನೆ ನಡೆಸಲಾಗಿದೆ.

 

ಗೆಲ್ಲುವ ಲೆಕ್ಕಾಚಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಚುನಾವಣೆ ವೇಳೆ ಅಸಮಾಧಾನ ಸಹಜ. ಅಂಥವರನ್ನು ಸಮಾಧಾನಪಡಿಸುವ ಕೆಲಸವನ್ನೂ ಮಾಡುತ್ತೇವೆ.

| ಡಾ.ಜಿ.ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ

 

Leave a Reply

Your email address will not be published. Required fields are marked *

Back To Top