Monday, 24th September 2018  

Vijayavani

ದುನಿಯಾ ವಿಜಿಗೆ ಇನ್ನೂ ತಪ್ಪದ ಸಂಕಷ್ಟ- 2 ದಿನ ಜರಾಸಂಧನಿಗೆ ನ್ಯಾಯಾಂಗ ಬಂಧನ- ರೌಡಿ ಶೀಟ್​ ಓಪನ್​ಗೆ ಖಾಕಿ ಪ್ಲಾನ್.        ದರ್ಶನ್ ಕಾರ್ ಆಕ್ಸಿಡೆಂಟ್- ಬಲಗೈ ಮೂಳೆ ಮುರಿತ ಬೆನ್ನಲ್ಲೇ ವಾರ್ಡ್​ಗೆ ದಚ್ಚು ಶಿಫ್ಟ್- ಶೀಘ್ರ ಗುಣಮುಖ ಆಗುವಂತೆ ಸುದೀಪ್ ಟ್ವೀಟ್        ಪರಿಷತ್​ ಮೂರೂ ಸ್ಥಾನ ಮಿತ್ರಕೂಟಕ್ಕೆ- ಕಾಂಗ್ರೆಸ್​ನ ಇಬ್ಬರು, ಜೆಡಿಎಸ್​​ನ ಒಬ್ಬರು ಅವಿರೋಧ ಆಯ್ಕೆ- ರಮೇಶ್​ ಆಯ್ಕೆಗೆ ಅಪಸ್ವರ        ಉತ್ತರ ಭಾರತದಲ್ಲಿ ಅಬ್ಬರಿಸಿದ ವರುಣ- ಮೇಘಸ್ಫೋಟಕ್ಕೆ ಪಂಜಾಬ್, ಹಿಮಾಚಲ ತಲ್ಲಣ- ಕೇದಾರನಾಥದಲ್ಲಿ ಕನ್ನಡಿಗರಿಗೆ ಸಂಕಷ್ಟ        ಸಿಕ್ಕಿಂನಲ್ಲಿ ಏರ್​ಪೋರ್ಟ್​ಗೆ ಮೋದಿ ಚಾಲನೆ- ನಯನ ಮನೋಹರ ವಿಮಾನ ನಿಲ್ದಾಣ ಲೋಕಾರ್ಪಣೆ        ಅಂತೂ ರಜನಿ ಪಾರ್ಟಿಗೆ ಮುಹೂರ್ತ ಫಿಕ್ಸ್- ಡಿಸೆಂಬರ್​ನಲ್ಲಿ ಹೊಸ ಪಕ್ಷದ ಹೆಸರು ಅನೌನ್ಸ್- ಥ್ರಿಲ್ ಆಗಿದ್ದಾರೆ ಫ್ಯಾನ್ಸ್.!       
Breaking News

ಬೇಡಿಕೆ ಈಡೇರಿಕೆಗೆ ಒತ್ತಾಯ

Wednesday, 11.07.2018, 5:21 AM       No Comments

ಬಾಗಲಕೋಟೆ: ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಸಹಾಯಕಿ ಮತ್ತು ಕಾರ್ಯ ಕರ್ತೆಯರ ಹುದ್ದೆ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲಾಡಳಿತ ಭವನ ಎದುರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಅಂಗನವಾಡಿ ಕಾರ್ಯಕರ್ತೆಯರು ರಾಜ್ಯ ಸರ್ಕಾರದ ವಿರುದ್ಧ ಘೊಷಣೆ ಕೂಗಿದರು. ನಂತರ ಜಿಲ್ಲಾಡಳಿತ ಮೂಲಕ ಸಿಎಂ ಎಚ್. ಡಿ. ಕುಮಾರಸ್ವಾಮಿಗೆ ಮನವಿ ಸಲ್ಲಿಸಿದರು.

ಅಂಗನವಾಡಿ ನೌಕರರು ಅತ್ಯಂತ ಕಡಿಮೆ ಸವಲತ್ತುಗಳಿಂದ ಬದುಕು ಸಾಗಿಸುತ್ತಿದ್ದಾರೆ. ದೈನಂದಿನ ಕೆಲಸದೊಂದಿಗೆ ಚುನಾವಣೆ ಸರ್ವೆ, ಭಾಗ್ಯಲಕ್ಷ್ಮಿ, ಸ್ತ್ರೀ ಶಕ್ತಿ, ಅಂಗವಿಕಲರಿಗೆ ಸಂಬಂಧಿಸಿದ ಕೆಲಸಗಳು ಸೇರಿ ವಿವಿಧ ಕಾರ್ಯಗಳನ್ನು ಸರ್ಕಾರ ನಮ್ಮ ಕಡೆಯಿಂದ ಮಾಡಿಸಿಕೊಳ್ಳುತ್ತಿದೆ. ಜತೆಗೆ ಮಾತೃಪೂರ್ಣ ಯೋಜನೆಯ ಹೊಣೆಯನ್ನೂ ನಮ್ಮ ಮೇಲೆ ಹಾಕಿದೆ. ಸಣ್ಣ ತಪ್ಪುಗಳಿಗೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ. ಆದರೆ, ನಮ್ಮ ಸಮಸ್ಯೆ, ಬೇಡಿಕೆಗಳನ್ನು ಸರ್ಕಾರ ಆಲಿಸುತ್ತಿಲ್ಲ ಎಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು.

ಅಂಗವಿಕಲರಿಗೆ ಕನಿಷ್ಠ 18 ಸಾವಿರ ರೂ. ವೇತನ ನೀಡಬೇಕು. ಜಂಟಿ ಖಾತೆ ತೆರೆಯಲು ವಿರೋಧವಿಲ್ಲ, ಅದರಲ್ಲಿರುವ ನಕಾರಾತ್ಮಕ ಅಂಶಗಳನ್ನು ತೆಗೆಯಬೇಕು. ಸರ್ಕಾರದ ಎಲ್ಲ ಸೌಲಭ್ಯಗಳು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ದೊರಕುವಂತಾಗಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಮೊಟ್ಟೆ, ಗ್ಯಾಸ್ ಬಿಲ್, ಬಾಡಿಗೆ ಸೇರಿ ಇತರೆ ಬಿಲ್​ಗಳನ್ನು ಪ್ರತಿ ತಿಂಗಳ 5ನೇ ತಾರೀಖಿನೊಳಗೆ ಪಾವತಿಸಬೇಕು. ಎಸ್ಸೆಸ್ಸೆಲ್ಸಿ ಕಲಿತಿರುವ ಅಂಗನವಾಡಿ ಸಹಾಯಕಿಯರಿಗೆ ಅಂಗನವಾಡಿ ಕಾರ್ಯಕರ್ತೆ ಎಂದು ಮುಂಬಡ್ತಿ ನೀಡಬೇಕು. ಬೇರೆ ಇಲಾಖೆ ಕೆಲಸಗಳನ್ನು ವಹಿಸಬಾರದು. ಕೆಲಸದಲ್ಲಿ ಲೋಪದೋಷಗಳು ಕಂಡು ಬಂದಲ್ಲಿ ಕೆಲಸದಿಂದ ವಜಾಗೊಳಿಸುವುದು, ಅವಮಾನಿಸುವುದು, ಕಿರುಕುಳ ನೀಡಬಾರದೆಂದು ಒತ್ತಾಯಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿ ಎಲ್​ಕೆಜಿ, ಯುಕೆಜಿ ಆರಂಭಿಸಬೇಕು. ಪ್ರತಿ ತಿಂಗಳು ಗೌರವ ಧನ ಪಾವತಿಸಬೇಕು. ಮಿನಿ ಅಂಗನವಾಡಿ ಕೇಂದ್ರಗಳನ್ನು ಸ್ಥಾಪಿಸಿ, ಸಹಾಯಕರನ್ನು ನೇಮಿಸಬೇಕು. ಹೆರಿಗೆ ರಜೆ ನೀಡಬೇಕು. ಕಾಯಿಲೆ ಬಂದಾಗ ಪರ್ಯಾಯ ವ್ಯವಸ್ಥೆ ಮಾಡಬೇಕು. ಸೇವಾ ಜೇಷ್ಠತೆ ಆಧಾರದ ಮೇಲೆ ಕನಿಷ್ಠ ವೇತನ ಜಾರಿ ಮಾಡಬೇಕು. ಅಂಗನವಾಡಿ ಸಹಾಯಕಿಯರನ್ನು ಕಾರ್ಯಕರ್ತೆಯರನ್ನಾಗಿ ಮುಂಬಡ್ತಿ ಪಡೆಯಲು ಇರುವ ವಯಸ್ಸಿನ ಭೌಗೋಳಿಕ ವಿಸ್ತೀರ್ಣ ಮಿತಿ ಸಡಿಲಿಸಬೇಕು. ಅನುಕಂಪ ಆಧಾರದಲ್ಲಿರುವ ಷರತ್ತುಗಳನ್ನು ತೆಗೆದು ಹಾಕಿ ಕುಟುಂಬದವರಿಗೆ ಎಂದು ತಿದ್ದುಪಡಿ ಮಾಡಬೇಕು. ಹಲವು ಯೋಜನೆಗಳಿಗೆ ಡಿಡಿ, ಡಿಒ, ಸಿಡಿಪಿಒ ಮೇಲ್ವಿಚಾರಕಿಯರನ್ನು ಕಾಯಂ ಆಗಿ ನೇಮಿಸಬೇಕು. ಸೇವಾ ನಿಯಮಾವಳಿ ರಚಿಸಬೇಕು. ಕೇಂದ್ರ ಸರ್ಕಾರ ಕಡಿತ ಮಾಡಿರುವ ಅನುದಾನ ವಾಪಸ್ ಮಾಡಬೇಕು. ನೇರ ನಗದು ವರ್ಗಾವಣೆ ಸೂಚನೆಯನ್ನು ರಾಜ್ಯ ಸರ್ಕಾರ ಒಪ್ಪಬಾರದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಕಾರ್ಯಕರ್ತೆಯರು ಆಗ್ರಹಿಸಿದರು.

 

Leave a Reply

Your email address will not be published. Required fields are marked *

Back To Top