Monday, 11th December 2017  

Vijayavani

1. ಮತ್ತಷ್ಟು ಹದಗೆಟ್ಟ ರವಿ ಬೆಳಗೆರೆ ಆರೋಗ್ಯ – ಕಾಲು ನೋವು, ನಿಶ್ಯಕ್ತಿಯಿಂದ ಪತ್ರಕರ್ತನ ನರಳಾಟ – ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ 2. ಮಧ್ಯಾಹ್ನ 12ಕ್ಕೆ ಕೋರ್ಟ್​ಗೆ ಹಾಜರ್ – ರವಿ ಬೆಳಗೆರೆ ವಿರುದ್ಧ ಮತ್ತೊಂದು ಕೇಸ್‌ – ಪತ್ರಕರ್ತನಿಗೆ ಜೈಲಾ..? ಬೇಲಾ..? 3. ಬಳ್ಳಾರಿಯಲ್ಲಿ ಗಣಿಗಾರಿಕೆ ವಿರುದ್ಧ ಕೂಗು – ಕುಮಾರಸ್ವಾಮಿ ಬೆಟ್ಟ ಉಳಿವಿಗೆ ಸಂಡೂರು ಬಂದ್ – ಅಂಗಡಿ, ಮುಂಗಟ್ಟುಗಳಿಗೆ ಬೀಗ, ಶಾಲಾ-ಕಾಲೇಜಿಗೆ ರಜೆ 4. ರಾಜ್ಯ ಸರ್ಕಾರದಿಂದ ಬಿಜೆಪಿ ಹತ್ತಿಕ್ಕುವ ಕೆಲಸ – ರ‍್ಯಾಲಿಯಲ್ಲಿ ಭಾಗಿಯಾದವ್ರ ವಿರುದ್ಧ ಟ್ರಾಫಿಕ್‌ ಪೊಲೀಸ್‌ ಕೇಸ್ – ಕಲಬುರಗಿಯಲ್ಲಿ ಖಾಕಿ, ಕೇಸರಿ ಕದನ 5. ಪ್ರಧಾನಿ ಮೋದಿ ರ‍್ಯಾಲಿಗೆ ಅವಕಾಶವಿಲ್ಲ – ಮೆಗಾ ರೋಡ್​ ಶೋಗೆ ಅನುಮತಿ ನಿರಾಕರಣೆ – ರಾಹುಲ್ ಸಮಾವೇಶಕ್ಕೂ ಗುಜರಾತ್ ಪೊಲೀಸರ ತಡೆ
Breaking News :

ಪಿತೃತ್ವ ವಿವಾದ ಪ್ರಕರಣ ವಜಾ, ನಟ ಧನುಷ್ ಗೆ ಬಿಗ್ ರಿಲೀಫ್

Friday, 21.04.2017, 12:20 PM       No Comments

ಚೆನ್ನೈ: ತಮಿಳಿನ ಖ್ಯಾತ ನಟ ಮತ್ತು ನಟ ರಜನೀಕಾಂತ್ ಅವರ ಅಳಿಯ ಧನುಷ್ ತಮ್ಮ ಮಗನೆಂದು ಕೋರಿ ಮಧುರೈನ ದಂಪತಿ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ವೀಕ್ಷಿಸಿ ದಿಗ್ವಿಜಯ ನ್ಯೂಸ್ LIVE

ಮಧುರೈನ ಕದಿರೇಶನ್ ಮತ್ತು ಮೀನಾಕ್ಷಿ ದಂಪತಿ ನಟ ಧನುಷ್ ತಮ್ಮ ಮಗ, ಆತನಿಂದ ನಮಗೆ ಮಾಸಿಕ 65 ಸಾವಿರ ರೂ. ಜೀವನಾಂಶ ಕೊಡಿಸಿ ಎಂದು ಕೋರಿ ಮದ್ರಾಸ್ ಹೈಕೋರ್ಟ್ ನ ಮಧುರೈ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ವೃದ್ಧ ದಂಪತಿಯ ಮನವಿಯ ಮೇರೆಗೆ ಧನುಷ್ ಅವರ ದೇಹದ ಮೇಲಿದ್ದ ಹುಟ್ಟು ಮಚ್ಚೆ ಮತ್ತು ಗುರುತುಗಳನ್ನು ಪರಿಶೀಲಿಸಲು ಆದೇಶಿಸಿತ್ತು. ಆದರೆ ವೃದ್ಧ ದಂಪತಿ ತಿಳಿಸಿದಂತೆ ಧನುಷ್ ದೇಹದ ಮೇಲೆ ಯಾವುದೇ ಗುರುತು ಪತ್ತೆಯಾಗಿರಲಿಲ್ಲ. ಜತೆಗೆ ದೇಹದ ಮೇಲಿದ್ದ ಗುರುತುಗಳನ್ನು ಅಳಿಸಿ ಹಾಕಿರುವ ಕುರುಹೂ ಸಹ ಪತ್ತೆಯಾಗಿರಲಿಲ್ಲ. ಈ ಸಂಬಂಧ ತಜ್ಞ ವೈದ್ಯರು ಕೋರ್ಟ್ ಗೆ ವರದಿ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಅರ್ಜಿಯ ವಿಚಾರಣೆ ನಡೆಸಿದ ಪೀಠ ಧನುಷ್ ಪರ ತೀರ್ಪು ನೀಡಿದ್ದು, ಪಿತೃತ್ವ ವಿವಾದ ಪ್ರಕರಣವನ್ನು ವಜಾಗೊಳಿಸಿ ಆದೇಶಿಸಿದೆ.

– ಏಜೆನ್ಸೀಸ್

(ವೈವಿಧ್ಯಮಯ ಸುದ್ದಿಗಳಿಗೆ ವಿಜಯವಾಣಿ ಪತ್ರಿಕೆ ಓದಿರಿ)

Leave a Reply

Your email address will not be published. Required fields are marked *

Back To Top