Wednesday, 19th September 2018  

Vijayavani

ಸಂಪುಟಕ್ಕೆ ಸತೀಶ್​​​​​.. ಲೋಕಸಭೆಗೆ ರಮೇಶ್​​ - ಬೆಳಗಾವಿ ಕದನಕ್ಕೆ ತೆರೆ ಎಳೆಯಲು ಸಿದ್ದು ಪ್ಲಾನ್​​        ಹೈಕಮಾಂಡ್​​ ಅಂಗಳಕ್ಕೆ ಅತೃಪ್ತರ ಪುರಾಣ - ರಾಹುಲ್​​ ಜತೆ ಇಂದು ಸಿದ್ದರಾಮಯ್ಯ ಚರ್ಚೆ        ರಣೋತ್ಸಾಹದಲ್ಲಿ ಕಮಲ ಪಾಳಯ - ಇಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್​​ನಲ್ಲಿ ಶಾಸಕಾಂಗ ಸಭೆ        ಸಚಿವ ಡಿಕೆಶಿಗೆ ಫುಡ್​​ ಪಾಯ್ಸನ್​ - ಅಪೋಲೋ ಆಸ್ಪತ್ರೆಯಲ್ಲಿ ಸಚಿವರಿಗೆ ಟ್ರೀಟ್​ಮೆಂಟ್​ - ಸಂಜೆ ಡಿಸ್ಚಾರ್ಜ್ ಸಾಧ್ಯತೆ        ರಾಮಚಂದ್ರಾಪುರ ಮಠದ ಕೈತಪ್ಪಿದ ಗೋಕರ್ಣ ದೇಗುಲ - ಶ್ರೀ ಮಹಾಬಲೇಶ್ವರ ದೇವಸ್ಥಾನ ಸರ್ಕಾರದ ಸುಪರ್ದಿಗೆ        ದುಬೈ ಅಂಗಳದಲ್ಲಿಂದು ಭಾರತ- ಪಾಕ್​​ ಕಾಳಗ - ರೋಹಿತ್​​​​ ಪಡೆ ವಿರುದ್ಧ ಸರ್ಫರಾಜ್​ ಟೀಮ್​​ ತಂತ್ರ       
Breaking News

ಬಾವಿ ತೋಡುವಾಗ ಯುವಕ ಸಾವು

Thursday, 12.07.2018, 7:18 PM       No Comments

ಕೊಕಟನೂರ: ಅಥಣಿ ತಾಲೂಕಿನ ಮುರಗುಂಡಿ ಗ್ರಾಮದ ಹೊರವಲಯದಲ್ಲಿ ಬಾವಿ ತೋಡುವಾಗ ಕಲ್ಲು ಮೈಮೇಲೆ ಬಿದ್ದು ಸಿದ್ದೇವಾಡಿ ಗ್ರಾಮದ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತನನ್ನು ಸಿದ್ದೇವಾಡಿ ಗ್ರಾಮದ ಸಚಿನ್ ಉರ್ಫ ಶಿವಾಜಿ ನಾರಾಯಣ ಕದಂ (20) ಎಂದು ಗುರುತಿಸಲಾಗಿದೆ. ಮುರುಗುಂಡಿ ಗ್ರಾಮದ ವಿಠ್ಠಲ ಸಿದ್ದಪ್ಪ ಉಗಾರೆ ಅವರ ನಿರ್ಮಾಣ ಹಂತದ ಬಾವಿಲ್ಲಿ ಕಲ್ಲು, ಮಣ್ಣನ್ನು ತೆಗೆಯುತ್ತಿದ್ದಾಗ ಕಲ್ಲುಗಳು ಮೈ ಮೇಲೆ ಬಿದ್ದು ಈ ದುರ್ಘಟನೆ ಸಂಭವಿಸಿದೆ.

ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಅಥಣಿ ಠಾಣೆಯ ಎಎಸ್‌ಐ ಎನ್.ಎಸ್ ಪಾಟೀಲ, ಹವಾಲ್ದಾರ ಯಶವಂತ ರಾಮೋಜಿ ಹಾಗೂ ತನಿಖಾ ಸಹಾಯಕ ಸುಭಾಷ ಬಬಲೇಶ್ವರ ಭೇಟಿ ನೀಡಿ ಪರಿಶೀಲಿಸಿದರು.

Leave a Reply

Your email address will not be published. Required fields are marked *

Back To Top