Wednesday, 18th October 2017  

Vijayavani

1. ರಾತ್ರಿ ಹಾಕಿದ ಟಾರು ಬೆಳಗ್ಗೆ ಕಿತ್ತುಬಂತು- ಸರ್ಕಾರದಿಂದ ಕಾಟಾಚಾರದ ಗುಂಡಿ ಮುಚ್ಚೋಕಾರ್ಯ- ಕೋಟ್ಯಾಂತರ ರೂಪಾಯಿ ನೀರಲ್ಲಿ ಹೋಮ 2. ಬರಿಗೈಯಲ್ಲಿ ಕಾರ್ಮಿಕನಿಂದ ಮಾನ್​ಹೋಲ್​ ಸ್ವಚ್ಛತೆ- ಸುರಕ್ಷಾ ಸಾಧನ ನೀಡಿದ ಮಹಾನಗರ ಪಾಲಿಕೆ- ಮಂಗಳೂರಿನಲ್ಲಿ ಅಮಾನವೀಯ ಘಟನೆ 3. ಪರಿಸರ ಉಳಿಸಿ, ಪಟಾಕಿ ತ್ಯಜಿಸಿ ಅಭಿಯಾನಕ್ಕೆ ಆಕ್ಷೇಪ- ವರ್ತಕರೊಂದಿಗೆ ಪರಿಸರ ಪ್ರೇಮಿಗಳ ವಾಗ್ವಾದ- ಮೈಸೂರಿನಲ್ಲಿ ಪಟಾಕಿ ಜಟಾಪಟಿ 4. ಅನೈತಿಕ ಸಂಬಂಧ ತಿಳಿದು ಗಂಡ ಬಿಟ್ಟ- ಪ್ರಿಯಕರನಿಗಾಗಿ ಮಗಳಿಗೆ ಕೊಟ್ಲು ಕಾಟ- ಗಂಗಾವತಿಯ ಹಿರೇಜಂತಕಲ್​ನಲ್ಲಿ ಕ್ರೂರಿ ತಾಯಿ 5. ನೋಟ್​ಬ್ಯಾನ್​ ವಿಚಾರದಲ್ಲಿ ಕಮಲ್​ ಉಲ್ಟಾ- ಬೆಂಬಲ ವ್ಯಕ್ತಪಡಿಸಿದ್ದಕ್ಕೆ ಕ್ಷಮೆಯಾಚನೆ- ಇದು ಕಮಲ್​ ಹೊಸ ರಾಜಕೀಯ ಆಟ
Breaking News :

ಹಂಗ್​ಪಾನ್ ದಾದಾ ಸಾಹಸ ಸಾರುವ ಸಾಕ್ಷ್ಯ ಚಿತ್ರ ಬಿಡುಗಡೆ

Friday, 27.01.2017, 1:59 PM       No Comments

https://www.youtube.com/watch?v=e4VudjgCMNA&feature=youtu.be

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರೊಂದಿಗೆ ಸೆಣಸಿ ವೀರಮರಣವನ್ನಪ್ಪಿದ ಯೋಧ ಹವಾಲ್ದಾರ್ ಹಂಗ್​ಪಾನ್ ದಾದಾ ಅವರಿಗೆ ಕೇಂದ್ರ ಸರ್ಕಾರ 68ನೇ ಗಣರಾಜ್ಯೊತ್ಸವದ ಸಂದರ್ಭದಲ್ಲಿ ಮರಣೋತ್ತರವಾಗಿ ಅಶೋಕ ಚಕ್ರ ಪ್ರಶಸ್ತಿ ನೀಡಿ ಗೌರವಿಸಿದೆ. ಇದೇ ಸಂದರ್ಭದಲ್ಲಿ ಭಾರತೀಯ ಸೇನೆ ಹಂಗ್​ಪಾನ್ ದಾದಾ ಅವರ ಸಾಹಸವನ್ನು ಸಾರುವ ಸಾಕ್ಷ್ಯ ಚಿತ್ರವನ್ನು ಬಿಡುಗಡೆ ಮಾಡಿದೆ.

‘ದಿ ವಾರಿಯರ್ಸ್್ಸ ಸ್ಪಿರಿಟ್’ ಹೆಸರಿನ ಸಾಕ್ಷ್ಯ ಚಿತ್ರವನ್ನು ಗುರುವಾರ ಭಾರತೀಯ ಸೇನೆ ಬಿಡುಗಡೆ ಮಾಡಿದೆ. ಈ ಸಾಕ್ಷ್ಯತ್ರದಲ್ಲಿ ದಾದಾ ಭಾರತದೊಳಗೆ ನುಸುಳಲು ಯತ್ನಿಸಿದ ನಾಲ್ಕು ಉಗ್ರರೊಂದಿಗೆ ಕೆಚ್ಚೆದೆಯಿಂದ ಹೋರಾಡಿದ ವಿಧವನ್ನು ಮರುಸೃಷ್ಟಿಸಲಾಗಿದೆ. ಜತೆಗೆ ಅವರ ಕುಟುಂಬ ವರ್ಗ ಮತ್ತು ಸ್ನೇಹಿತರು ದಾದಾ ಅವರು ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

35ನೇ ರಾಷ್ಟ್ರೀಯ ರೈಫನ್ಸ್​ನಲ್ಲಿ ಹವಾಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಹಂಗ್​ಪಾನ್ ದಾದಾ 2016 ಮೇ 26 ರಂದು ಜಮ್ಮು ಮತ್ತು ಕಾಶ್ಮೀರದ ನೌಗಾಮ್ ಸೆಕ್ಟರ್​ನ ಶಂಶಬ್ರಿ ಪ್ರದೇಶದಲ್ಲಿ ಉಗ್ರರೊಂದಿಗೆ ಸೆಣಸಿದ್ದರು. ದಾದಾ ಮೂವರು ಉಗ್ರರನ್ನು ಗುಂಡಿಟ್ಟು ಹತ್ಯೆ ಮಾಡಿದ್ದರು. ಆದರೆ ಮರೆಯಲ್ಲಿ ಅಡಗಿ ಕುಳಿತಿದ್ದ ಮತ್ತೋರ್ವ ಉಗ್ರ ದಾದಾಗೆ ಗುಂಡು ಹೊಡೆದಿದ್ದರಿಂದ ಅವರು ವೀರ ಮರಣವನ್ನಪ್ಪಿದ್ದರು.

ವಿಡಿಯೋ ಕೃಪೆ: ಭಾರತೀಯ ಸೇನೆ

– ಏಜೆನ್ಸೀಸ್

(ವೈವಿಧ್ಯಮಯ ಸುದ್ದಿಗಳಿಗೆ ವಿಜಯವಾಣಿ ಪತ್ರಿಕೆ ಓದಿರಿ)

Leave a Reply

Your email address will not be published. Required fields are marked *

Back To Top