Sunday, 15th July 2018  

Vijayavani

ಬಾಲಕನ ವಿಡಿಯೋ ಹಿಂದೆ ಬಿಜೆಪಿ ಕೈವಾಡ ಆರೋಪ - ವಿಡಿಯೋ ತನಿಖೆಗೆ ಸದಾನಂದಗೌಡ ಆಗ್ರಹ - ರಾಜಕಾರಣಿಗಳ ಆಟಕ್ಕೆ ಕೊಡವರ ಆಕ್ರೋಶ        26 ವರ್ಷ ಲಿಂಗಾಯತರೇ ರಾಜ್ಯ ಆಳಿದ್ದಾರೆ - ಕುಮಾರಸ್ವಾಮಿ ಸಿಎಂ ಆಗಿ 2 ತಿಂಗಳಾಗಿದೆ - ಉತ್ತರ ಕರ್ನಾಟಕ ನಿರ್ಲಕ್ಷ್ಯ ಆರೋಪಕ್ಕೆ ದೇವೇಗೌಡ ತಿರುಗೇಟು        ಕೊನೆಗೂ ಶಿರಾಡಿ ಘಾಟ್‌ ಲೋಕಾರ್ಪಣೆ - ವಾಸ್ತು ಪ್ರಕಾರ ರೇವಣ್ಣ ಉದ್ಘಾಟನೆ - ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ        ಮಟನ್ ಬಿರಿಯಾನಿ, ಚಿಕನ್ ಚಾಪ್ಸ್, ಬೋಟಿ ಗೊಜ್ಜು, ಮೊಟ್ಟೆ - 25 ಸಾವಿರ ಮಂದಿಗೆ ಭರ್ಜರಿ ಬಾಡೂಟ - ಚಾಮುಂಡೇಶ್ವರಿ ಕ್ಷೇತ್ರದ ಜನರಿಗೆ ಜಿಟಿಡಿ ಕೃತಜ್ಞತೆ        ಒಂದು ದೇಶ ಒಂದೇ ಚುನಾವಣೆ - ಮೋದಿ ಪರಿಕಲ್ಪನೆಗೆ ಸೂಪರ್‌ಸ್ಟಾರ್‌ ಬೆಂಬಲ - ಹಣ, ಸಮಯ ಉಳಿತಾಯ ಎಂದ ರಜನಿ        ಉಕ್ಕಿಹರಿಯುತ್ತಿರೋ ಕೃಷ್ಣೆ - ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ - ಇತ್ತ ತಮಿಳುನಾಡಿನಲ್ಲಿ ಕಾವೇರಿ ಭೋರ್ಗರೆತ       
Breaking News

ವರದಕ್ಷಿಣೆ ಕಿರುಕುಳ: ಸಿಗರೇಟ್‌ನಿಂದ ಪತ್ನಿ ಮುಖ ಸುಟ್ಟ ಲೋಕಾ ನೌಕರ

Saturday, 02.09.2017, 12:24 PM       No Comments

ಬೆಳಗಾವಿ: ವರದಕ್ಷಿಣೆ ವಿರುದ್ಧ ಜಾಗೃತಿ ಮೂಡಿಸಿ ಅದನ್ನು ನಿರ್ಮೂಲನೆ ಮಾಡಬೇಕಿದ್ದ ಲೋಕಾಯುಕ್ತದ ನೌಕರನೇ ಇಲ್ಲಿ ಖಳನಾಯಕ.

ಹೌದು, ಲೋಕಾಯುಕ್ತದಲ್ಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಯೇ ವರಕ್ಷಿಣೆಗಾಗಿ ತನ್ನ ಹೆಂಡತಿಯನ್ನು ಪೀಡಿಸಿ, ಕಿರುಕುಳ ನೀಡುತ್ತಿದ್ದಾನೆ.

ಈ ಕುರಿತು ಪತ್ನಿ ಮಹಿಳಾ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದಾಳೆ. ಪತಿಯಿಂದ ರಕ್ಷಣೆ ನೀಡುವಂತೆ ಬೆಳಗಾವಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಮೂಲತಃ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಇಸ್ಲಾಂಪುರದ ನಿವಾಸಿಯಾಗಿರುವ ಅರ್ಜುನ್‌ ಕರೆಪ್ಪ ಬಾಗರಾಯ ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ಡಿ ದರ್ಜೆ ನೌಕರನಾಗಿದ್ದಾನೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಶಾಬಂದರ್ ಗ್ರಾಮದ ಕಾವೇರಿ ಶಾಂತಪ್ಪ ವಾಲಿ(20) ಅವರೊಂದಿಗೆ ವಿವಾಹವಾಗಿತ್ತು.

ಮದುವೆಯಾದ ನಂತರ ಕಳೆದ 6 ತಿಂಗಳ ಹಿಂದಯಷ್ಟೇ ಕಾವೇರಿ ಪತಿಯೊಂದಿಗೆ ಬೆಂಗಳೂರಿಗೆ ಬಂದು ನೆಲೆಸಿದ್ದರು. ಅಂದಿನಿಂದ ನಿತ್ಯ ವರದಕ್ಷಿಣೆ ತರುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದ. ಕುಡಿದ ಮತ್ತಿನಲ್ಲಿ ಪತ್ನಿಯ ಕೂದಲು ಕತ್ತರಿಸಿ, ಸಿಗರೇಟ್‌ನಿಂದ ಸುಟ್ಟು, ಚಾಕುವಿನಿಂದ ಕೈ, ಮುಖದ ಮೆಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. (ದಿಗ್ವಿಜಯ ನ್ಯೂಸ್‌)

Leave a Reply

Your email address will not be published. Required fields are marked *

Back To Top