Sunday, 15th July 2018  

Vijayavani

ಬಾಲಕನ ವಿಡಿಯೋ ಹಿಂದೆ ಬಿಜೆಪಿ ಕೈವಾಡ ಆರೋಪ - ವಿಡಿಯೋ ತನಿಖೆಗೆ ಸದಾನಂದಗೌಡ ಆಗ್ರಹ - ರಾಜಕಾರಣಿಗಳ ಆಟಕ್ಕೆ ಕೊಡವರ ಆಕ್ರೋಶ        26 ವರ್ಷ ಲಿಂಗಾಯತರೇ ರಾಜ್ಯ ಆಳಿದ್ದಾರೆ - ಕುಮಾರಸ್ವಾಮಿ ಸಿಎಂ ಆಗಿ 2 ತಿಂಗಳಾಗಿದೆ - ಉತ್ತರ ಕರ್ನಾಟಕ ನಿರ್ಲಕ್ಷ್ಯ ಆರೋಪಕ್ಕೆ ದೇವೇಗೌಡ ತಿರುಗೇಟು        ಕೊನೆಗೂ ಶಿರಾಡಿ ಘಾಟ್‌ ಲೋಕಾರ್ಪಣೆ - ವಾಸ್ತು ಪ್ರಕಾರ ರೇವಣ್ಣ ಉದ್ಘಾಟನೆ - ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ        ಮಟನ್ ಬಿರಿಯಾನಿ, ಚಿಕನ್ ಚಾಪ್ಸ್, ಬೋಟಿ ಗೊಜ್ಜು, ಮೊಟ್ಟೆ - 25 ಸಾವಿರ ಮಂದಿಗೆ ಭರ್ಜರಿ ಬಾಡೂಟ - ಚಾಮುಂಡೇಶ್ವರಿ ಕ್ಷೇತ್ರದ ಜನರಿಗೆ ಜಿಟಿಡಿ ಕೃತಜ್ಞತೆ        ಒಂದು ದೇಶ ಒಂದೇ ಚುನಾವಣೆ - ಮೋದಿ ಪರಿಕಲ್ಪನೆಗೆ ಸೂಪರ್‌ಸ್ಟಾರ್‌ ಬೆಂಬಲ - ಹಣ, ಸಮಯ ಉಳಿತಾಯ ಎಂದ ರಜನಿ        ಉಕ್ಕಿಹರಿಯುತ್ತಿರೋ ಕೃಷ್ಣೆ - ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ - ಇತ್ತ ತಮಿಳುನಾಡಿನಲ್ಲಿ ಕಾವೇರಿ ಭೋರ್ಗರೆತ       
Breaking News

ಆಯತಪ್ಪಿ ನದಿಗೆ ಬಿದ್ದ ಮಗನ ರಕ್ಷಣೆಗೆ ಹೋಗಿ ತಾಯಿ, ಇಬ್ಬರು ಮಕ್ಕಳು ಸಾವು

Saturday, 30.06.2018, 7:59 PM       No Comments

ಔರಾದ್ ಗ್ರಾಮೀಣ: ಆಯತಪ್ಪಿ ಸೇತುವೆಯಿಂದ ಕೆಳಗಡೆ ಬಿದ್ದ ಮಗನನ್ನು ರಕ್ಷಿಸಲು ಹೋದ ತಾಯಿ ಹಾಗೂ ಆಕೆಯ ಮಡಿಲಿನಲ್ಲಿದ್ದ ಮತ್ತೊಂದು ಮಗು ಮೃತಪಟ್ಟಿರುವ ಘಟನೆ ನಡೆದಿದೆ.

ನಂದ್ಯಾಳ್ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು, ತಾಯಿ ರಬೀಕಾ (28), ಮಕ್ಕಳಾದ ವಿಲ್ಸನ್ (4) ಹಾಗೂ ಸ್ಯಾಮ್ಸನ್ (2) ಮೃತಪಟ್ಟವರು.

ತಾಯಿ ರಬೀಕಾ ಹಾಗೂ ಅತ್ತೆ ಚಂದರಮ್ಮ ನಂದ್ಯಾಳ್ ಗ್ರಾಮದ ಮಧ್ಯದಲ್ಲಿರುವ ಸೇತುವೆ ಸಮೀಪದ ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಮಗ ವಿಲ್ಸನ್ ಆಟವಾಡುತ್ತ ಸೇತುವೆಯಿಂದ ಕೆಳಗೆ ಬಿದ್ದಿದ್ದಾನೆ. ಇದನ್ನು ಕಂಡು ಗಾಬರಿಗೊಂಡ ತಾಯಿ ತನ್ನ ಮಡಿಲಲ್ಲಿದ್ದ ಎರಡು ವರ್ಷದ ಸ್ಯಾಮ್ಸನ್ ಜತೆ ವಿಲ್ಸನ್ನನ್ನು ರಕ್ಷಿಸಲು ಹೋಗಿ ನೀರಿಗೆ ಧುಮುಕಿದ್ದಾಳೆ. ಆದರೆ ಮೇಲೆ ಬರಲಿಕ್ಕಾಗದೆ ನೀರಿನಲ್ಲಿ ಉಸಿರುಗಟ್ಟಿ ಅಸುನೀಗಿದ್ದಾರೆ.

ಚಿಂತಾಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top