Friday, 20th October 2017  

Vijayavani

1. ಲಿಂಗಾಯತ ಪ್ರತಿಪಾದಕರಾಗಿದ್ದಕ್ಕೆ ಕಲಬುರ್ಗಿ ಹತ್ಯೆ – ಲಿಂಗಾಯತ ವಿಚಾರ ಬರೆದಿದ್ದಕ್ಕೆ ಗೌರಿ ಲಂಕೇಶ್​ ಕೊಲೆ ಶಂಕೆ – ಬೆಂಗಳೂರಿನಲ್ಲಿ ಜಾಮದಾರ್​ ವಿವಾದಾತ್ಮಕ ಹೇಳಿಕೆ 2. ಬಿಜೆಪಿ ಬಿಟ್ಟು ಕಾಂಗ್ರೆಸ್​ ಸೇರಿದಕ್ಕೆ ಮಾರಣಾಂತಿಕ ಹಲ್ಲೆ – ಮಾಜಿ ಕಾರ್ಪೊರೇಟರ್​ ರವೀಂದ್ರ ವಿರುದ್ಧ ಮಹಿಳೆ ಆರೋಪ – ಗಾಯಾಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ 3. ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವ – ರಥೋತ್ಸವದ ವೇಳೆ ನೂಕು ನುಗ್ಗಲು – ಭಕ್ತರ ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್ 4. ಹಾಲಿವುಡ್, ಬಾಲಿವುಡ್​ ಬೇರೆ ಅಲ್ಲ – ಎರಡೂ ಕಡೆ ಲೈಂಗಿಕ ಶೋಷಣೆ ಇದ್ದೆ ಇದೆ – ಸಂದರ್ಶನದಲ್ಲಿ ಸತ್ಯ ತೆರೆದಿಟ್ಟ ಪ್ರಿಯಾಂಕ ಚೋಪ್ರಾ 5. ದೀಪಾವಳಿಗೆ ಪ್ರಧಾನಿ ತಾಯಿ ಫುಲ್ ಖುಷ್​ – ರಾಮನ ಹಾಡಿಗೆ ಸಖತ್ ಸ್ಟೆಪ್ಸ್​ – 97ರ ಹರೆಯದಲ್ಲೂ ಹೀರಾಬೆನ್​ ಜೀವನ ಪ್ರೀತಿ
Breaking News :

ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ

Thursday, 12.10.2017, 4:41 PM       No Comments

ನವದೆಹಲಿ: ಹಿಮಾಚಲ ಪ್ರದೇಶ​ ವಿಧಾನಸಭೆ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.

ಕೇಂದ್ರ ಚುನಾವಣಾ ಆಯುಕ್ತ ಅಚಲ್​ ಕುಮಾರ್​ ಜ್ಯೋತಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಿದರು.

68 ವಿಧಾನಭಾ ಕ್ಷೇತ್ರಗಳಿರುವ ಹಿಮಾಚಲ ಪ್ರದೇಶದಲ್ಲಿ ಒಂದು ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್​ 9 ರಂದು ಮತದಾನ ನಡೆಯಲಿದ್ದು, ಡಿಸೆಂಬರ್​ 18 ರಂದು ಮತ ಎಣಿಕೆ ನಡೆಯಲಿದೆ.  ಹಿಮಾಚಲ ಪ್ರದೇಶದಲ್ಲಿ ಚುನಾವಣಾ ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇದೇ ಸಂದರ್ಭದಲ್ಲಿ ಡಿಸೆಂಬರ್​ 18ರೊಳಗೆ ಗುಜರಾತ್​ ವಿಧಾನಸಭೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ ಎಂದು ತಿಳಿಸಿದರು. ಚುನಾವಣಾ ಆಯೋಗ ಗುಜರಾತ್​ ಚುನಾವಣೆಯ ದಿನಾಂಕ ಪ್ರಕಟಿಸಲಿಲ್ಲ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top