Tuesday, 17th July 2018  

Vijayavani

ಕಾಂಗ್ರೆಸ್‌ ಕಿರುಕುಳದಿಂದಲೇ ಸಿಎಂ ಕಣ್ಣೀರು - ಕಾಂಗ್ರೆಸ್‌ ನೆಚ್ಚಿಕೊಂಡು ಹೋದ್ರೆ ಇದೇ ಸ್ಥಿತಿ - ಎಚ್​ಡಿಕೆ  ಕಣ್ಣೀರಿಗೆ ಜೇಟ್ಲಿ ಟಾಂಗ್‌        ವಾಣಿಜ್ಯ ಬ್ಯಾಂಕ್‌ನಲ್ಲಿನ ಚಾಲ್ತಿ ಸಾಲವೂ ಮನ್ನಾ - ಸಿಎಂ ನಿರ್ಧಾರ - ರೈತರಿಗೆ ಮತ್ತೊಂದು ಕೊಡುಗೆ ನೀಡಿದ ಮುಖ್ಯಮಂತ್ರಿ        ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದ ಶಾಸಕರ ಪುತ್ರ - ಪ್ರಶ್ನಿಸಿದ ಪೇದೆಗೆ ಅವಾಚ್ಯ ಶಬ್ದಗಳಿಂದ ನಿಂದನೆ        ಬಂಗಾಳದಲ್ಲಿ ಮೋದಿ ರ್ಯಾಲಿ ವೇಳೆ ಅವಗಢ - ಪೆಂಡಾಲ್ ಕುಸಿದು 22 ಜನರಿಗೆ ಗಾಯ - ಆರೋಗ್ಯ ವಿಚಾರಿಸಿದ ಪ್ರಧಾನಿ ನಮೋ        ಕರಾವಳಿಯಲ್ಲಿ ಭಾರಿ ಮಳೆಯ ಅವಾಂತರ - ಕುಸಿದುಬಿತ್ತು ಭಟ್ಕಳದ ಬಸ್ ನಿಲ್ದಾಣ - ಹೊರ ಓಡಿದ ಪ್ರಯಾಣಿಕರು        ಕೆಆರ್​​ಎಸ್​​​ನಿಂದ ಭಾರಿ ಪ್ರಮಾಣದ ನೀರು - ರಂಗನತಿಟ್ಟು ಪಕ್ಷಿಧಾಮ ಸಂಪೂರ್ಣ ಮುಳುಗಡೆ - ಧುಮ್ಮಿಕ್ಕುತ್ತಿದೆ ಹೊಗೇನಕಲ್ ಫಾಲ್ಸ್       
Breaking News

ಅಭಿವೃದ್ಧಿಯ ಆಯ್ಕೆಯೇ ಬಿಜೆಪಿಯ ಗೆಲುವಿನ ಮೂಲ: ಮೋದಿ

Monday, 18.12.2017, 5:11 PM       No Comments

<< ಅಪಪ್ರಚಾರ ಮಾಡಿದ ಕಾಂಗ್ರೆಸ್​ಗೆ ಜನತೆಯಿಂದ ತಕ್ಕ ಪಾಠ >>

ಹೊಸದಿಲ್ಲಿ: ದೇಶ ಉಳಿದೆಲ್ಲವನ್ನು ಬಿಟ್ಟು ಅಭಿವೃದ್ಧಿಯನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ಗುಜರಾತ್​ ಮತ್ತು ಹಿಮಾಚಲ ಪ್ರದೇಶದಲ್ಲಿನ ಬಿಜೆಪಿ ಗೆಲುವೇ ಸಾಕ್ಷಿ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಸೋಮವಾರ ಸಂಜೆ ವಿಜಯದ ಭಾಷಣ ಮಾಡಿದ ಮೋದಿ, ಜಿಎಸ್​ಟಿ ಪರಿಣಾಮದಿಂದ ಉತ್ತರಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷ ಸೋಲುತ್ತದೆ ಎಂದು ಅಪಪ್ರಚಾರ ಮಾಡಲಾಗಿತ್ತು. ಗುಜರಾತ್​ ಚುನಾವಣೆ ವಿಷಯದಲ್ಲೂ ಅದನ್ನೇ ಮಾಡಲಾಗಿತ್ತು. ಆದರೆ, ಇಂದಿನ ಫಲಿತಾಂಶದಿಂದ ಜನರು ಸುಧಾರಣೆಯನ್ನು ಧನಾತ್ಮಕವಾಗಿ ಸ್ವೀಕರಿಸಲು ಸಿದ್ಧರಿದ್ದಾರೆ ಎಂಬುದು ಸ್ಪಷ್ಟವಾಗಿದೆ ಎಂದು ತಿಳಿಸಿದರು.

ತಾವು ಗುಜರಾತ್​ನ ಮುಖ್ಯಮಂತ್ರಿಯಾಗಿದ್ದಾಗ ಮಾಡಿದ್ದ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಿರುವುದಕ್ಕೆ ರಾಜ್ಯದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರ ಬಗ್ಗೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದರು.

ಗುಜರಾತ್​ನಲ್ಲಿ ಪಕ್ಷವನ್ನು ಸೋಲಿಸಲು ಕಾಂಗ್ರೆಸ್ ನಾನಾ ಸಂಚುಗಳನ್ನು ರೂಪಿಸಿತ್ತು. ಅದಕ್ಕೆ ಜನರು ಮನ್ನಣೆ ನೀಡಲಿಲ್ಲ ಎಂದು ತಿಳಿಸಿದರು.

ಎಲ್ಲ ವರ್ಗದ ಜನತೆಗೆ ಮತ್ತೆ ಭರವಸೆ ಸಿಕ್ಕಿದೆ. ಅಭಿವೃದ್ಧಿ ಮಾಡದಿದ್ದರೆ ಜನತೆ ಸ್ವೀಕರಿಸುವುದಿಲ್ಲ. ಇದಕ್ಕೆ ಗುಜರಾತ್ ಬಹುದೊಡ್ಡ ಉದಾಹರಣೆ.ಅಭಿವೃದ್ಧಿಯಿಂದಾಗಿಯೇ ನಿರಂತರ ಗೆಲುವು. ಅಪಪ್ರಚಾರ ಮಾಡಿದ ಕಾಂಗ್ರೆಸ್ಗೆ ಜನತೆ ತಕ್ಕ ಪಾಠ ಕಲಿಸಿದ್ದಾರೆ. ದೇಶದ ಅಭಿವೃದ್ಧಿಯೇ ಬಿಜೆಪಿಯ ಮೊದಲ ಆದ್ಯತೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ನಲ್ಲಿ ನಮಗೆ ನಂಬಿಕೆ ಇದೆ ಎಂದಿದ್ದಾರೆ.

ಗುಜರಾತ್ನಲ್ಲಿ 30 ವರ್ಷಕ್ಕೂ ಮೊದಲು ಜಾತಿ ವಿಷ ಬೀಜವನ್ನು ಬಿತ್ತಿದ್ದರು. ಅದನ್ನು ಬಿಜೆಪಿ ಕಾರ್ಯಕರ್ತರು ಕಿತ್ತೊಗೆದಿದ್ದಾರೆ. ಜಾತಿ ರಾಜಕಾರಣದಿಂದ ಗುಜರಾತ್ ಮುಕ್ತವಾಗಿದೆ. ಯಾರು ಏನು ಮಾಡಿದರು ಎನ್ನುವುದನ್ನು ಇಲ್ಲಿಗೆ ಮರೆತು ಮುಂದಿನ ಅಭಿವೃದ್ಧಿಗಾಗಿ ಎಲ್ಲರೂ ಕೈಜೋಡಿಸಿ ಮುನ್ನಡೆಯೋಣ ಎಂದು ಮೋದಿ ತಿಳಿಸಿದರು. (ಏಜೆನ್ಸೀಸ್)

Leave a Reply

Your email address will not be published. Required fields are marked *

Back To Top