Sunday, 15th July 2018  

Vijayavani

ಬಾಲಕನ ವಿಡಿಯೋ ಹಿಂದೆ ಬಿಜೆಪಿ ಕೈವಾಡ ಆರೋಪ - ವಿಡಿಯೋ ತನಿಖೆಗೆ ಸದಾನಂದಗೌಡ ಆಗ್ರಹ - ರಾಜಕಾರಣಿಗಳ ಆಟಕ್ಕೆ ಕೊಡವರ ಆಕ್ರೋಶ        26 ವರ್ಷ ಲಿಂಗಾಯತರೇ ರಾಜ್ಯ ಆಳಿದ್ದಾರೆ - ಕುಮಾರಸ್ವಾಮಿ ಸಿಎಂ ಆಗಿ 2 ತಿಂಗಳಾಗಿದೆ - ಉತ್ತರ ಕರ್ನಾಟಕ ನಿರ್ಲಕ್ಷ್ಯ ಆರೋಪಕ್ಕೆ ದೇವೇಗೌಡ ತಿರುಗೇಟು        ಕೊನೆಗೂ ಶಿರಾಡಿ ಘಾಟ್‌ ಲೋಕಾರ್ಪಣೆ - ವಾಸ್ತು ಪ್ರಕಾರ ರೇವಣ್ಣ ಉದ್ಘಾಟನೆ - ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ        ಮಟನ್ ಬಿರಿಯಾನಿ, ಚಿಕನ್ ಚಾಪ್ಸ್, ಬೋಟಿ ಗೊಜ್ಜು, ಮೊಟ್ಟೆ - 25 ಸಾವಿರ ಮಂದಿಗೆ ಭರ್ಜರಿ ಬಾಡೂಟ - ಚಾಮುಂಡೇಶ್ವರಿ ಕ್ಷೇತ್ರದ ಜನರಿಗೆ ಜಿಟಿಡಿ ಕೃತಜ್ಞತೆ        ಒಂದು ದೇಶ ಒಂದೇ ಚುನಾವಣೆ - ಮೋದಿ ಪರಿಕಲ್ಪನೆಗೆ ಸೂಪರ್‌ಸ್ಟಾರ್‌ ಬೆಂಬಲ - ಹಣ, ಸಮಯ ಉಳಿತಾಯ ಎಂದ ರಜನಿ        ಉಕ್ಕಿಹರಿಯುತ್ತಿರೋ ಕೃಷ್ಣೆ - ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ - ಇತ್ತ ತಮಿಳುನಾಡಿನಲ್ಲಿ ಕಾವೇರಿ ಭೋರ್ಗರೆತ       
Breaking News

ಆತ್ಮಹತ್ಯೆಗೆ ಶರಣಾದ ರೈತ

Wednesday, 11.07.2018, 5:18 AM       No Comments

ಬಾಗಲಕೋಟೆ: ಸಮ್ಮಿಶ್ರ ಸರ್ಕಾರ ರೈತರ ಬೆಳೆ ಸಾಲಮನ್ನಾ ಮಾಡಿದರೂ ಅನ್ನದಾತರ ಆತ್ಮಹತ್ಯೆ ಪ್ರಕರಣಗಳಿಗೆ ತಡೆ ಬೀಳುತ್ತಿಲ್ಲ. ಜಿಲ್ಲೆಯ ಬಾದಾಮಿ ತಾಲೂಕಿನ ಬೀರನೂರ ರೈತ ಮಂಜುನಾಥ ಹೊಸಮನಿ(28) ವಿಷ ಸೇವಿಸಿ ಮಂಗಳವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹತ್ತಿ ಬೆಳೆಗೆ ಸಿಂಪಡಿಸುವ ಎಣ್ಣೆ ಸೇವಿಸಿ ಅಸ್ವಸ್ಥಗೊಂಡಿದ್ದ ಮಂಜುನಾಥ ಅವರನ್ನು ಕೂಡಲೇ ಬಾಗಲಕೋಟೆ ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸರ್ಕಾರದ ಸಾಲಮನ್ನಾ ಯೋಜನೆ ತನಗೆ ಯಾವುದೇ ಪ್ರಯೋಜನಕ್ಕೆ ಬರಲಿಲ್ಲವೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 15 ಎಕರೆ ಜಮೀನಿನಲ್ಲಿ ಉಳ್ಳಾಗಡ್ಡಿ, ಮೆಕ್ಕೆಜೋಳ, ತರಕಾರಿ ಬೆಳೆ ಬೆಳೆದಿದ್ದರು. ಸಹಕಾರಿ ಬ್ಯಾಂಕ್, ರಾಷ್ಟ್ರೀಕೃತ ಬ್ಯಾಂಕ್, ಕೈಗಡ ಸೇರಿ ಅಂದಾಜು 9 ಲಕ್ಷ ರೂ. ಸಾಲಮಾಡಿದ್ದರು. ಸರ್ಕಾರ ಎರಡು ಲಕ್ಷ ರೂ. ಬೆಳೆಸಾಲ ಮನ್ನಾ ಮಾಡಿದರೂ ಅದರ ವ್ಯಾಪ್ತಿಗೆ ಈ ರೈತ ಕುಟುಂಬ ಬರುತ್ತಿರಲಿಲ್ಲವಂತೆ. ಹೀಗಾಗಿ ಸಾಲದ ಹೊರೆ ಇಳಿಸಿಕೊಳ್ಳುವ ಬಗೆ ತಿಳಿಯದೆ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

Back To Top