Friday, 21st September 2018  

Vijayavani

ಸಂಕಷ್ಟ ತಂದ ದಂಗೆ ಹೇಳಿಕೆ - ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು - ರಾಷ್ಟ್ರಪತಿಗಳಿಗೆ ಮಾಹಿತಿ ರವಾನೆ ಸಾಧ್ಯತೆ        ಸಿಎಂ ಬೇಜವಾಬ್ಧಾರಿ ಹೇಳಿಕೆಗೆ ರಾಜ್ಯಾದ್ಯಂತ ಖಂಡನೆ - ಬಿಜೆಪಿ ಕಾರ್ಯಕರ್ತರ ಪ್ರೊಟೆಸ್ಟ್​ - ಬಾಗಲಕೋಟೆಯಲ್ಲಿ ಬ್ಯಾನರ್​ ದಹನ        ಮಲೆನಾಡಲ್ಲಿ ಪ್ರವಾಹದ ಬೆನ್ನಲ್ಲೇ ಮತ್ತೊಂದು ಬರೆ - ನೆರೆ ಬಳಿಕ ಬತ್ತುತ್ತಿವೆ ನದಿಗಳು - ಆತಂಕದಲ್ಲಿ ಚಿಕ್ಕಮಗಳೂರು ಜನತೆ        ಶತಮಾನದ ಆಸ್ಪತ್ರೆಗೆ ಸರ್ಕಾರದ ಬೀಗ - ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ಜಾಗ - ಉಡುಪಿಯಲ್ಲಿ ಉಚಿತ ಚಿಕಿತ್ಸೆ ಇನ್ನು ಮರೀಚಿಕೆ..?        ಮೈಸೂರಲ್ಲಿ ನಾಡಹಬ್ಬಕ್ಕೆ ತಯಾರಿ - ಮಾವುತರಿಗೆ ಜಿಲ್ಲಾಡಳಿತದ ಭೂರಿ ಭೋಜನ - ಕೇರಂ ಆಡಿ ಸಂತಸಪಟ್ಟ ಕಾವಾಡಿಗರು        ಹುಬ್ಬಳ್ಳಿಯಲ್ಲಿ ಅಷ್ಟವಿನಾಯಕ ಸ್ಪರ್ಧೆ - ಅಲಂಕಾರದಲ್ಲಿ ಹಿರೇಪೇಟೆಯ ವಿನಾಯಕ ಪ್ರಥಮ- ಗಾಂಧಿ ಚೌಕ್ ಗಣಪ ಉತ್ತಮ ವಿಗ್ರಹ       
Breaking News

ಪತಿಯನ್ನು ವಿದೇಶಕ್ಕೆ ಕಳುಹಿಸಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ಯಾಕೆ?

Thursday, 11.01.2018, 7:09 AM       No Comments

ಬೆಂಗಳೂರು: ಗೃಹಿಣಿಯೊಬ್ಬಳು ಅತ್ತೆ ಮಾವನ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಬುಧವಾರ ರಾತ್ರಿ ನಡೆದಿದೆ.

ಟೆಂಪಲ್ ಬೆಲ್ಸ್ ಪ್ರೀಮಿಯರ್​​ ಅಪಾರ್ಟ್​​ಮೆಂಟ್​​ಲ್ಲಿ ವಾಸವಾಗಿದ್ದ ನಿರ್ಮಲಾ ಎಂಬ ಮಹಿಳೆ ನೇಣು ಬಿಗಿದುಕೊಂಡಿದ್ದಾಳೆ. ನಿರ್ಮಲಾ ಅವರಿಗೆ ಒಂದೂವರೆ ವರ್ಷದ ಹಿಂದೆ ಚಿತ್ರದುರ್ಗ ಮೂಲದ ವಿಶ್ವನಾಥ್​​​ ಜತೆ ವಿವಾಹವಾಗಿತ್ತು.

ಪತಿ ಜಪಾನ್​​​​ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಆಗಾಗ ನಗರಕ್ಕೆ ಬಂದು ಹೋಗುತ್ತಿದ್ದರು. ಕಳೆದೆರಡು ದಿನದ ಹಿಂದಷ್ಟೆ ಪತಿ ಬೆಂಗಳೂರಿಗೆ ಬಂದು ಜಪಾನ್​​ಗೆ ವಾಪಸ್​ ಆಗಿದ್ದರು.

ನಿರ್ಮಲಾ ಆತ್ಮಹತ್ಯೆಗೂ ಮುನ್ನ ಡೆತ್​​​​​ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಸಾವಿಗೆ ಅತ್ತೆ-ಮಾವರ ಕಿರುಕುಳವೇ ಕಾರಣ ಎಂದು ಬರೆದಿದ್ದಾಳೆ. ಆದರೆ, ಪೊಲೀಸರು ಬರುವ ಮುನ್ನವೇ ಸಾಕ್ಷಿ ನಾಶಕ್ಕೆ ಪ್ರಯತ್ನ ಪಟ್ಟಿದ್ದು, ಡೆತ್​ನೋಟ್ ಹರಿದು ಕಸದ ಬುಟ್ಟಿಗೆ ಎಸೆಯಲಾಗಿತ್ತು.

ಪೊಲೀಸರು ತನಿಖೆ ನಡೆಸುವ ವೇಳೆ ಹರಿದ ಡೆತ್​ನೋಟ್ ಪತ್ತೆಯಾಗಿದ್ದು, ಅವನ್ನೆಲ್ಲ ಜೋಡಿಸಿ ಓದಿದ ಆರ್.ಆರ್. ನಗರ ಪೊಲೀಸರು ಅತ್ತೆ-ಮಾವನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top