Wednesday, 21st February 2018  

Vijayavani

ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಗೂಂಡಾಗಿರಿ ಪ್ರಕರಣ - ಬೌರಿಂಗ್​ ಆಸ್ಪತ್ರೆಯಲ್ಲಿ ಮೆಡಿಕಲ್​ ಟೆಸ್ಟ್​ ಕಂಪ್ಲೀಟ್​​ - ಕೋರ್ಟ್​ಗೆ ಆರೋಪಿಗಳು ಹಾಜರ್​​​        ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಆರಂಭ - ವಾದ ಮಂಡನೆಗೆ ಅವಕಾಶ ಕೋರಿ ಮಧ್ಯಂತರ ಅರ್ಜಿ - ಸರ್ಕಾರದ ಮೇಲೆ ನಂಬಿಕೆಯಿಲ್ಲ ಎಂದು ಆಲಂ ಪಾಷ ಅರ್ಜಿ        ಇಂದಿನಿಂದ ಬಾಹುಬಲಿ ಹೆಲಿ ಟೂರಿಸಂ - ಜಸ್ಟ್​​​ 2,100 ರೂಪಾಯಿಗೆ 8 ನಿಮಿಷ ಹಾರಾಟ - ಫೆಬ್ರವರಿ 25 ಬರ್ತಿದ್ದಾರೆ ಕೇಂದ್ರ ಗೃಹ ಸಚಿವರು        ಮುಗಿಯದ ಭೈರತಿ ಬಸವರಾಜ್ ಬೆಂಬಲಿಗರ ದರ್ಪ - ಪೇದೆ ಮೇಲೆ ಗೂಂಡಾಗಳ ಹಲ್ಲೆ - ಆರೋಪ ತಳ್ಳಿ ಹಾಕಿದ ಕಾಂಗ್ರೆಸ್​​​​​ ಶಾಸಕ        ಹೋಂ ಮಿನಿಸ್ಟರ್‌ ಹೆಸರಲ್ಲಿ ಭಾರಿ ಆಸ್ತಿ ಆರೋಪ - ದಿಗ್ವಿಜಯ ನ್ಯೂಸ್‌ನಲ್ಲಿ ದಾಖಲೆ ಬಯಲು - ಆರೋಪ ನಿರಾಕರಿಸಿದ ರಾಮಲಿಂಗಾರೆಡ್ಡಿ       
Breaking News

ಪದ್ಮವಿಭೂಷಣ IAS ಅಧಿಕಾರಿ ಸಾವು

Monday, 10.07.2017, 11:29 AM       No Comments

ನವದೆಹಲಿ: ಭಾರತದ ಮಾಜಿ ರಾಯಭಾರಿ ನರೇಶ್​ ಚಂದ್ರ ಅವರು ನಿನ್ನೆ ಭಾನುವಾರ ರಾತ್ರಿ ಗೋವಾ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಬಹು ಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದ 82 ವರ್ಷದ ನರೇಶ್​ ಚಂದ್ರ ಅವರು ಕಳೆದ ಶುಕ್ರವಾರ ಗೋವಾದ ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಸುಮಾರು 10 ಗಂಟೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ.

ನರೇಶ್​ ಚಂದ್ರ ಅವರು 1990 ರಿಂದ 1992ರ ವರೆಗೆ ಕ್ಯಾಬಿನೆಟ್​ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಅವರು 1996 ರಿಂದ 2001ರ ವರೆಗೆ ಅಮೆರಿಕದ ಭಾರತದ ರಾಯಭಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ನರೇಶ್​ ಅವರು ಮೂರು ದಶಕಗಳ ಕಾಲ ಅಮೆರಿಕದಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.

ನರೇಶ್​ ಚಂದ್ರ ಅವರು ಭಾರತದ 2ನೇ ಅತಿ ದೊಡ್ಡ ಪ್ರಶಸ್ತಿಯಾದ ಪದ್ಮ ವಿಭೂಷಣ 2007ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅವರು ಗಣಿತ ಶಾಸ್ತ್ರದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದರು. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top