Monday, 11th December 2017  

Vijayavani

1. ಜಮ್ಮುವಿನಲ್ಲಿ ಗುಂಡಿನ ಚಕಮಕಿ- ಯೋಧರ ಗುಂಡೇಟಿಗೆ ಮೂವರು ಉಗ್ರರು ಮಟಾಶ್​​​- ಒಬ್ಬ ಜೀವಂತವಾಗಿ ಸೆರೆ, ವಿಚಾರಣೆ 2. ರವಿ ಬೆಳಗೆರೆ ಕಸ್ಟಡಿ ಅವಧಿ ಇಂದಿಗೆ ಅಂತ್ಯ- ಮಧ್ಯಾಹ್ನ ನ್ಯಾಯಾಲಯಕ್ಕೆ ಪತ್ರಕರ್ತ ಹಾಜರು- ಜಾಮೀನು ಕೊಡ್ತಾರಾ ನ್ಯಾಯಾಧೀಶರು..? 3. ಮಕ್ಕಳ ಮೊಟ್ಟೆ ಗುತ್ತಿಗೆದಾರರ ಹೊಟ್ಟೆಗೆ- ಕೊಪ್ಪಳದಲ್ಲಿ ನಡೆದಿದೆ ಮೊಟ್ಟೆ ಗೋಲ್​​ಮಾಲ್​- ಡಿಸಿ ಸೇರಿ ನಾಲ್ವರ ವಿರುದ್ಧ ಲೋಕಾಯುಕ್ತಕ್ಕೆ ದೂರು 4. ಸರ್ಕಾರಿ ಜಾಗದ ಮೇಲೆ ಬಿಲ್ಡರ್​ ಕಣ್ಣು- ರಾತ್ರೋರಾತ್ರೊ ಮನೆ ಖಾಲಿಗೆ ಆವಾಜ್​​- ಹುಬ್ಬಳ್ಳಿಯಲ್ಲಿ ದಯಾಮರಣಕ್ಕೆ 12 ಕುಟುಂಬದಿಂದ ಅರ್ಜಿ 5. ಗುತ್ತಿಗೆದಾರರ ಬಳಿ ಸರ್ಕಾರಿ ಫೈಲ್​​​​​ ಪ್ರಕರಣ- ಸ್ಪಷ್ಟನೆ ಕೋರಿ ಎಇಇಗೆ ನೋಟಿಸ್​​​- ಇದು ದಿಗ್ವಿಜಯ ನ್ಯೂಸ್​​ ಬಿಗ್​​ ಇಂಪ್ಯಾಕ್ಟ್​​​​
Breaking News :

ದಿಗ್ವಿಜಯ ನ್ಯೂಸ್​ ಕುಟುಕು ಕಾರ್ಯಾಚರಣೆಗೆ ಬಿಎಸ್​ವೈ ಪ್ರಶಂಸೆ

Thursday, 12.10.2017, 5:34 PM       No Comments

ಬೆಂಗಳೂರು: ದಿಗ್ವಿಜಯ ನ್ಯೂಸ್​ ಚಾನಲ್​ ನಡೆಸಿದ​ ‘ಘೋಡಾ ಹೈ ಘೋಡಾ’ ಕುಟುಕು ಕಾರ್ಯಾಚರಣೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಪ್ರಶಂಸಿಸಿದ್ದಾರೆ.

ನಗರದಲ್ಲಿಂದು ಮಾತನಾಡಿದ ಅವರು ಜೀವದ ಹಂಗು ತೊರೆದು ಪ್ರಕರಣವನ್ನು ಬಯಲಿಗೆಳೆದಿರುವ ದಿಗ್ವಿಜಯ ನ್ಯೂಸ್ ತಂಡಕ್ಕೆ ನನ್ನ ಅಭಿನಂದನೆ ಎಂದು ಹೇಳಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸರ್ಕಾರದ ಆಡಳಿತ ವೈಫಲ್ಯ ಎದ್ದು ತೋರಿಸುತ್ತಿದೆ. ಗೃಹ ಸಚಿವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಗೃಹ ಇಲಾಖೆ ಸಲಹೆಗಾರರ ಬೇಜವಾಬ್ದಾರಿಯ ಸಲಹೆಗಳಿಂದ ಈ ರೀತಿಯ ದಂಧೆಗಳಾಗ್ತಿವೆ ಎಂದು ಸರ್ಕಾರ ವಿರುದ್ಧ ಕಿಡಿಕಾರಿದರು.

ಈ ಸರ್ಕಾರಕ್ಕೆ ಜನತೆ ಮುಂದೆ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದ ಬಿಎಸ್​ವೈ ಅವರು ದಿಗ್ವಿಜಯ ನ್ಯೂಸ್​ ದಿಟ್ಟತನವನ್ನು ಪ್ರಶಂಸಿಸಿದರು. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top