Friday, 19th October 2018  

Vijayavani

ಮೈಸೂರು ರಾಜವಂಶದಲ್ಲಿ ಒಂದೇ ದಿನ ಎರಡು ಸಾವು-ಪ್ರಮೋದಾದೇವಿ ನಾದಿನಿ ವಿಧಿವಶ        ವಿಲನ್ ಚಿತ್ರದಲ್ಲಿ ಶಿವಣ್ಣರನ್ನ ಕಡೆಗಣನೆ ಎಂದು ಆಕ್ರೋಶ - ಥಿಯೆಟರ್‌ ಮುಂದೆ ಅಭಿಮಾನಿಗಳ ಪ್ರತಿಭಟನೆ        ಒಕ್ಕಲಿಗರ ಸಂಘದಲ್ಲಿ ಮೂಗು ತೂರಿಸಲ್ಲ - ಜಾತಿ, ಧರ್ಮದಲ್ಲಿ ಹಸ್ತಕ್ಷೇಪ ಮಾಡಲ್ಲ - ಎಕ್ಸ್‌ಕ್ಲೂಸಿವ್‌ ಸಂದರ್ಶನದಲ್ಲಿ ಡಿಕೆಶಿ ಮಾತು        ಅದ್ದೂರಿ ಜಂಬೂ ಸವಾರಿ - ಅಂಬಾರಿ ಹೊತ್ತು ಅರ್ಜುನ ಗಾಂಭೀರ್ಯ ನಡಿಗೆ - ಬನ್ನಿಮಂಟಪದತ್ತ ವಿಜಯದಶಮಿ ಮೆರವಣೆಗೆ        ದಸರಾ ಮೆರವಣಿಗೆಯಲ್ಲಿ ನಾಡಿನ ಶ್ರೀಮಂತ ಕಲೆ ಅನಾವರಣ - ಗಮನ ಸೆಳೆದ ವಿವಿಧ ಜಿಲ್ಲೆಗಳ ಸ್ತಬ್ಧಚಿತ್ರಗಳ ಚಿತ್ರಣ        ದೆಹಲಿಯಲ್ಲಿ ವಿಜಯದಶಮಿ ಸಂಭ್ರಮ-ರಾಮಲೀಲ ಮೈದಾನದಲ್ಲಿ ರಾವಣನ ಸಂಹಾರ - ಕಾರ್ಯಕ್ರಮದಲ್ಲಿ ರಾಷ್ಟ್ರಪತಿ, ಪ್ರಧಾನಿ ಭಾಗಿ       
Breaking News

ತಂದೆ-ತಾಯಿ, ಮಕ್ಕಳೂ ಸೇರಿ ಕುಟುಂಬದ ನಾಲ್ವರು ನೇಣಿಗೆ ಶರಣು

Monday, 03.07.2017, 7:56 AM       No Comments

ಬೆಂಗಳೂರು: ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣಾಗಿರುವ ಘಟನೆ ನಗರದ ಬೊಮ್ಮನಹಳ್ಳಿಯ ಬಂಡೇ ಪಾಳ್ಯದಲ್ಲಿ ನಡೆದಿದೆ.

ಪತಿ ಜಗದೀಶ್ (45), ಪತ್ನಿ ಕಸ್ತೂರಿ (38) ಹಾಗೂ ಮಕ್ಕಳಾದ ವಿನೋದ್ (16) ಬಾಲಚಂದ್ರ (18) ಎಂಬ ನಾಲ್ವರು ನೇಣಿಗೆ ಶರಣಾಗಿದ್ದಾರೆ. ಜಗದೀಶ್ ಮೂಲತ: ತಮಿಳುನಾಡು ಮೂಲದವರಾಗಿದ್ದು, ಎಂಟು ವರ್ಷಗಳಿಂದ ತನ್ನ ಕುಟುಂಬದೊಂದಿಗೆ ನಗರದ ಬಂಡೇಪಾಳ್ಯದಲ್ಲಿರುವ ಓಂ ಶಕ್ತಿ ಲೇಔಟ್​ನಲ್ಲಿ ವಾಸವಿದ್ದರು.

ಸಾಲ ಬಾಧೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಮೊದಲು ತನ್ನ ಇಬ್ಬರು ಮಕ್ಕಳಿಗೆ ನೇಣು ಬಿಗಿದು ನಂತರ ತನ್ನ ಪತ್ನಿಯೊಂದಿಗೆ ತಾನೂ ಕೂಡ ನೇಣಿಗೆ ಶರಣಾಗಿದ್ದಾನೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಬೊಮ್ಮನಹಳ್ಳಿ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ನಾಲ್ಕು ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

Leave a Reply

Your email address will not be published. Required fields are marked *

Back To Top