Wednesday, 24th October 2018  

Vijayavani

ರಂಗೇರಿದ ಉಪ ಚುನಾವಣಾ ಕಣ-ಜಮಖಂಡಿಯಲ್ಲಿಂದು ಬಿಎಸ್ ವೈ ಮತಬೇಟೆ-ಸಕ್ಕರೆ ನಾಡು ಮಂಡ್ಯದಲ್ಲಿಂದು ಸಿದ್ದರಾಮಯ್ಯ ಪ್ರಚಾರ        ದೀಪಾವಳಿಯಿಂದ ಲೋಡ್​ ಶೆಡ್ಡಿಂಗ್-ಇಂಧನ ಇಲಾಖೆ ಅಧಿಕಾರಿಗಳ ಜತೆ ಸಿಎಂ ಸಭೆ-ಕತ್ತಲಲ್ಲಿ ಮುಳುಗುತ್ತಾ ಕರ್ನಾಟಕ..?        ಸಾಲಮನ್ನಾವೂ ಇಲ್ಲ, ಬೆಲೆಯೂ ಇಲ್ಲ-ಬೆವರು ಸುರಿಸಿ ಬೆಳೆದ ಬೆಳೆ ಕೇಳೋರೂ ಇಲ್ಲ-ಅನ್ನದಾತನಿಗೆ ಕಣ್ಣೀರು ತರಿಸುತ್ತಿದೆ ಈರುಳ್ಳಿ        ಬೆಂಗಳೂರಲ್ಲಿ ಅನಧಿಕೃತ ಬಿಟ್ ಕಾಯಿನ್ ATM-ಆರೋಪಿ ಹರೀಶ್ ಬಂಧನ-ಕೆಂಪ್ ಫೋರ್ಟ್​ನಲ್ಲಿದ್ದ ಎಟಿಎಂ ಪೊಲೀಸರ ವಶಕ್ಕೆ        ಕೊಳ್ಳೆಗಾಲದಲ್ಲಿ 17 ವರ್ಷಗಳಿಂದ ಕಾಮಗಾರಿ ಅಪೂರ್ಣ-ಇನ್ನೂ ಆಗಿಲ್ಲ ವಾಲ್ಮೀಕಿ ಭವನ ನಿರ್ಮಾಣ-ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ        ವಿಜಯಪುರದಲ್ಲಿ ಗಂಗಾಕಲ್ಯಾಣ ಗೋಲ್ಮಾಲ್-ಫಲಾನುಭವಿಗಳಿಗೆ ಸಿಗದ ಬೋರ್ ವೇಲ್ ಸೌಲಭ್ಯ-ಯಾರದ್ದೋ ಹೆಸರಲ್ಲಿ ಅನುದಾನ ನೀಡಿದ ಅಧಿಕಾರಿಗಳು       
Breaking News

28 ದಿನ ಗ್ಯಾಂಗ್‌ ರೇಪ್‌ ಮಾಡಿ ನದಿಗೆ ಎಸೆದರೂ ಈಜುತ್ತಾ ಊರು ಸೇರಿದ ಯುವತಿ!

Tuesday, 18.09.2018, 8:30 PM       No Comments

ಭುವನೇಶ್ವರ: ಯುವತಿಯನ್ನು ಅಪಹರಿಸಿದ್ದ ದುಷ್ಕರ್ಮಿಗಳು ಆಕೆಯ ಮೇಲೆ 28 ದಿನ ಸಾಮೂಹಿಕ ಅತ್ಯಾಚಾರ ಎಸಗಿ ನದಿಗೆ ಎಸೆದಿದ್ದು, ಯುವತಿ ಆಶ್ಚರ್ಯಕರ ರೀತಿಯಲ್ಲಿ ಬದುಕುಳಿದು ತನ್ನ ಊರು ಸೇರಿರುವ ಘಟನೆ ಬೆಳಕಿಗೆ ಬಂದಿದೆ.

ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ಯುವತಿಯನ್ನು ನದಿಗೆ ಎಸೆದಿದ್ದಾರೆ. ಯುವತಿಯು ಈಜುವ ಮೂಲಕವೇ ರೌತ್ರಾಯ್‌ಪುರ ಗ್ರಾಮಕ್ಕೆ ತೆರಳಿ ತನ್ನ ಪಾಲಕರು ಮತ್ತು ಪೊಲೀಸರಿಗೆ ಘಟನೆ ಕುರಿತು ವಿವರಿಸಿದ್ದಾಳೆ.

ಆಗಸ್ಟ್‌ನ ಒಂದು ದಿನ ರಾತ್ರಿ ಮಧುಬನ್‌ ಬಜಾರ್‌ಗೆ ತೆರಳುತ್ತಿದ್ದಾಗ ಯುವತಿಯನ್ನು ಅಪಹರಿಸಿದ ದುಷ್ಕರ್ಮಿಗಳು, ನಿರ್ಜನ ಪ್ರದೇಶದಲ್ಲಿದ್ದ ಮನೆಯ ಕೋಣೆಯೊಂದರಲ್ಲಿ ಕೂಡಿ ಹಾಕಿದ್ದಾರೆ. ಆ ಬಳಿಕ 28 ದಿನವೂ ಸತತ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಆಗಸ್ಟ್‌ 20ರಿಂದಲೂ ಯುವತಿ ಕಾಣೆಯಾಗಿದ್ದಳು. ಈ ಕುರಿತು ಆಕೆಯ ಪಾಲಕರು ಎಫ್‌ಐಆರ್‌ ದಾಖಲಿಸಿದ್ದು, ಯುವತಿಯು ಆಕೆಯ ಚಿಕ್ಕಪ್ಪನಿಂದಲೇ ಅಪಹರಣಕ್ಕೀಡಾಗಿದ್ದಳು. ಸದ್ಯ ಆತನನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. (ಏಜೆನ್ಸೀಸ್)

Leave a Reply

Your email address will not be published. Required fields are marked *

Back To Top