Friday, 18th August 2017  

Vijayavani

1. ಕಾಂಗ್ರೆಸ್‌ನಲ್ಲಿ ಎಡಪಂಥಿಯರಿಗೆ ಮಾತ್ರ ಮಣೆ- ಚುನಾವಣಾ ತಂತ್ರಗಾರ ಕೈ ಗುಡ್‌ಬೈ- ಅಲ್ಪ ಸಂಖ್ಯಾತರರನ್ನ ಅತಿಯಾಗಿ ಓಲೈಸ್ತಿದ್ಯಾ ಕಾಂಗ್ರೆಸ್‌.? 2. ಜೆಡಿಎಸ್​ ಭಿನ್ನರಿಗೆಲ್ಲಾ ಇಲ್ಲಾ ಟಿಕೆಟ್​ – 3 ಕ್ಷೇತ್ರಗಳ ಟಿಕೆಟ್​​​​​​​​ಗೆ ಖಾತ್ರಿ ನೀಡದ ಖರ್ಗೆ- ತ್ರಿಶಂಕು ಸ್ಥಿತಿಯಲ್ಲಿ ಜೆಡಿಎಸ್​​​​​​ ಭಿನ್ನರ ಸ್ಥಿತಿ 3. ಸಿಲಿಕಾನ್ ಸಿಟಿಗೆ ಖತರ್ನಾಕ್​ ಗ್ಯಾಂಗ್​ ಎಂಟ್ರಿ- ಸೆಕ್ಯೂರಿಟಿ ಡ್ರೆಸ್​​​ನಲ್ಲಿ ಮಾಡ್ತಿದ್ದಾರೆ ಕಳ್ಳತನ- ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಕೃತ್ಯ 4. ರಾಜೀನಾಮೆ ಬಳಿಕ ವಿಶಾಲ್‌ ಸಿಕ್ಕಾ ಮೊದಲ ಮಾತು- ನನ್ನ ಜೀವನದ ದುಃಖದ ವಿಚಾರ ಅಂತಾ ಬೇಸರ- ಅತ್ತ ನಾನು ಕಾರಣನಲ್ಲ ಎಂದ ನಾರಾಯಣ ಮೂರ್ತಿ 5. ಯುಪಿ ಆಸ್ಪತ್ರೆಯಲ್ಲಿ ಮಕ್ಕಳ ಸಾವು ಪ್ರಕರಣ- ಹೈಕೋರ್ಟ್‌ನಿಂದ ಯೋಗಿ ಸರ್ಕಾರಕ್ಕೆ ತರಾಟೆಗೆ- ಕೂಡಲೇ ವರದಿ ನೀಡಲು ಸೂಚನೆ
Breaking News :

ಕೋರ್ಟ್​ ಆವರಣದಲ್ಲಿ ಗ್ಯಾಂಗ್ ವಾರ್: ಬಾಗಪ್ಪ ಹರಿಜನ ಮೇಲೆ ಗುಂಡಿನ ದಾಳಿ

Tuesday, 08.08.2017, 11:22 AM       No Comments

ವಿಜಯಪುರ: ಭೀಮಾತೀರದ ಹಂತಕ ಕುಖ್ಯಾತಿ ಬಾಗಪ್ಪ ಹರಿಜನ್ ಎಂಬುವವರ ಮೇಲೆ ಅಪರಿಚಿತ ದುಷ್ಕರ್ಮಿಗಳು​ ವಿಜಯಪುರ ಕೋರ್ಟ್ ಆವರಣದಲ್ಲಿಂದು ಏಕಾಏಕಿ ಗುಂಡಿನ ದಾಳಿ ನಡೆಸಿರುವ ಘಟನೆ ಇದೀಗ ನಡೆದಿದೆ.

ವಿಜಯಪುರ ನ್ಯಾಯಾಲಯದ ಆವರಣದಲ್ಲಿಂದು ಹಾಡಹಗಲೇ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಬಾಗಪ್ಪ ಹರಿಜನ್ ಎಂಬುವರ ಮೇಲೆ ಗುಂಡಿನ ದಾಳಿ ನಡೆದಿದೆ. ಬಾಗಪ್ಪ ಹರಿಜನ್ ಎಂಬುವವರು ಭೀಮಾತೀರದ ಹಂತಕ ಎಂಬ ಕುಖ್ಯಾತಿಯನ್ನು ಹೊಂದಿದ್ದಾರೆ.​ ಬಾಗಪ್ಪ, ಭೀಮಾತೀರದ ಹಂತಕ ಚಂದಪ್ಪ ಹರಿಜನ ಸಹೋದರನಾಗಿದ್ದಾನೆ.

ಹರಿಜನ ಬಾಗಪ್ಪನ ಮೇಲೆ 5 ಬಾರಿ ಗುಂಡು ಹಾರಿಸಲಾಗಿದೆ. ಪರಿಣಾಮ ಬಾಗಪ್ಪನ ದೇಹಕ್ಕೆ 3 ಗುಂಡುಗಳು ಹೊಕ್ಕಿದ್ದು, ಗಂಭೀರವಾಗಿರುವ ಬಾಗಪ್ಪನನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಕಳೆದ ತಿಂಗಳಷ್ಟೇ ಬಾಗಪ್ಪ ಜೈಲಿಂದ ಹೊರಬಂದಿದ್ದ. ಸೋದರ ಸಂಬಂಧಿಗಳ ಕೊಲೆ ಪ್ರಕರಣ ಸಂಬಂಧ ಎರಡನೇ ವಿಚಾರಣೆಗಾಗಿ ಇಂದು ಕೋರ್ಟ್​ಗೆ ಹಾಜರಾಗಲು ಏಕಾಂಗಿಯಾಗಿ ಬರುತ್ತಿದ್ದ ವೇಳೆ ಬಾಗಪ್ಪನ ಮೇಲೆ ಅಪರಿಚಿತ ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆದಿದೆ.

ಅಂದಹಾಗೆ ಯಾರು, ಯಾತಕ್ಕಾಗಿ ಬಾಗಪ್ಪ ಹರಿಜನ್​ ಮೇಲೆ ಫೈರಿಂಗ್ ಮಾಡಿದ್ದಾರೆ ಎಂಬ ಮಾಹಿತಿ ಇನ್ನು ತಿಳಿದು ಬಂದಿಲ್ಲ. ಆದರೆ, ಕೆಲ ದಿನಗಳ ಹಿಂದೆ ಸಾಕ್ಷಿದಾರನಿಗೆ ಬೆದರಿಕೆ ಹಾಕಿರುವ ಬಗ್ಗೆ ಮಾಹಿತಿ ಇದೆ. ಇನ್ನು ಗುಂಡಿನ ದಾಳಿ ಹಿನ್ನೆಲೆ ನ್ಯಾಯಾಲಯದ ಆವರಣದಲ್ಲಿ ಬಿಗಿ ಪೊಲೀಸ್​ ಬಂದೋಬಸ್ತ್ ಮಾಡಲಾಗಿದೆ.(ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top