Tuesday, 16th January 2018  

Vijayavani

ಮಹದಾಯಿ ಉಳಿಸಿಕೊಳ್ಳಲು ಏನು ಬೇಕಾದ್ರೂ ಮಾಡ್ತೀವಿ - ಮತ್ತೆ ಕ್ಯಾತೆ ತೆಗೆದ ಪಾಲ್ಯೇಕರ್​ - ಇತ್ತ ಗೋವಾ ಸಚಿವನ ವಿರುದ್ಧ ಪಾಟೀಲ್ ಕಿಡಿ        ನನ್ನ ವಿರುದ್ಧ ಸುಳ್ಳು ಕೇಸ್​ ದಾಖಲಿಸಲು ಯತ್ನ - ಕೇಂದ್ರ ಸರ್ಕಾರದ ವಿರುದ್ಧ ತೊಗಾಡಿಯಾ ಕಿಡಿ - ಕಣ್ಣೀರಿಟ್ಟು ಅಚ್ಚರಿ ಮೂಡಿಸಿದ ಫೈರ್ ಬ್ರ್ಯಾಂಡ್​        ಆನೆಗಳ ಹಿಂಡಿನಿಂದ ತಪ್ಪಿಸಿಕೊಂಡು ಬಾವಿಗೆ ಬಿದ್ದ ಮರಿ ಆನೆ - ಮರಿ ಮೇಲೆತ್ತಲು ಅರಣ್ಯ ಇಲಾಖೆ ಹರ ಸಾಹಸ - ತಮಿಳುನಾಡಿನ ರಾಯಕೋಟೆ ಬಳಿ ಘಟನೆ        ಭಾರತ ಪ್ರವಾಸದಲ್ಲಿ ಇಸ್ರೇಲ್​ ಪ್ರಧಾನಿ - ಮುಂಬೈಗೆ ಬಂದಿಳಿದ ಮುಂಬೈ ದಾಳಿ ಸಂತ್ರಸ್ತ ಮೋಶೆ - ಭಾರತಕ್ಕೆ ಬಂದಿದ್ದು ಖುಷಿ ತಂದಿದೆ ಎಂದ ಬಾಲಕ        ತಮಿಳುನಾಡಿನಲ್ಲಿ ಮುಂದುವರಿದ ಪೊಂಗಲ್ ಸಡಗರ - ಅಳಂಗನಲ್ಲೂರಿನಲ್ಲಿ ಜಲ್ಲಿಕಟ್ಟು ಕಿಕ್​ - ಸಿಎಂ, ಡಿಸಿಎಂ ರಿಂದ ಕ್ರೀಡೆ ಉದ್ಘಾಟನೆ       
Breaking News :

ಚಿನ್ನ ಪರೀಕ್ಷಕನಾಗಿದ್ದವ ಬ್ಯಾಂಕ್‌ಗೆ ವಂಚಿಸಿದ್ದು ಬರೋಬ್ಬರಿ 50 ಲಕ್ಷ!

Sunday, 31.12.2017, 8:52 AM       No Comments

ಗದಗ: ಬ್ಯಾಂಕ್‌ನಲ್ಲಿ ಚಿನ್ನ ಪರೀಕ್ಷಕನಿಂದಲೇ ಬ್ಯಾಂಕ್‌ಗೆ ಭಾರಿ ವಂಚನೆಯಾಗಿರುವ ಘಟನೆ ಗದದ ತಾಲೂಕಿನ ಮುಳಗುಂದ ಪಟ್ಟಣದಲ್ಲಿ ನಡೆದಿದೆ.

ಕೆವಿಜಿ ಬ್ಯಾಂಕ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಚಿನ್ನ ಪರೀಕ್ಷಕ ಮಂಜುನಾಥ್‌ ರಾಯ್ಕರ್​ ಎಂಬಾತ ನಕಲಿ ಚಿನ್ನವನ್ನು ಅಸಲಿ ಚಿನ್ನ ಎಂದು ನಂಬಿಸಿ ಅಧಿಕಾರಿಗಳಿಂದ ಹಣ ಕೊಡಿಸುತ್ತಿದ್ದ. ಇದೇ ರೀತಿ ಸುಮಾರು 50 ಲಕ್ಷಕ್ಕೂ ಹೆಚ್ಚು ವಂಚಿಸಿದ್ದಾನೆ ಎನ್ನಲಾಗಿದೆ.

10 ವರ್ಷದಿಂದ ಚಿನ್ನ ಪರೀಕ್ಷಕನಾಗಿದ್ದ ಮಂಜುನಾಥ್‌, ಅಂದಾಜು 21 ಗ್ರಾಹಕರ ಹೆಸರಿನಲ್ಲಿ ವಂಚಿಸಿದ್ದು, 2 ವರ್ಷದಿಂದ ವಂಚನೆ ವಾಸನೆ ಸಿಕ್ಕಿದ್ದರೂ ಬ್ಯಾಂಕ್‌ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಕೃತ್ಯದಲ್ಲಿ ಬ್ಯಾಂಕ್‌ ಅಧಿಕಾರಿಗಳು ಶಾಮೀಲಾಗಿರುವ ಶಂಕೆಯನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ.

ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಮಂಜುನಾಥ್‌ ರಾಯ್ಕರ್‌ ನಾಪತ್ತೆಯಾಗಿದ್ದು, ಈ ಕುರಿತು ಮುಳಗುಂದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top