Wednesday, 24th October 2018  

Vijayavani

ರಂಗೇರಿದ ಉಪ ಚುನಾವಣಾ ಕಣ-ಜಮಖಂಡಿಯಲ್ಲಿಂದು ಬಿಎಸ್ ವೈ ಮತಬೇಟೆ-ಸಕ್ಕರೆ ನಾಡು ಮಂಡ್ಯದಲ್ಲಿಂದು ಸಿದ್ದರಾಮಯ್ಯ ಪ್ರಚಾರ        ದೀಪಾವಳಿಯಿಂದ ಲೋಡ್​ ಶೆಡ್ಡಿಂಗ್-ಇಂಧನ ಇಲಾಖೆ ಅಧಿಕಾರಿಗಳ ಜತೆ ಸಿಎಂ ಸಭೆ-ಕತ್ತಲಲ್ಲಿ ಮುಳುಗುತ್ತಾ ಕರ್ನಾಟಕ..?        ಸಾಲಮನ್ನಾವೂ ಇಲ್ಲ, ಬೆಲೆಯೂ ಇಲ್ಲ-ಬೆವರು ಸುರಿಸಿ ಬೆಳೆದ ಬೆಳೆ ಕೇಳೋರೂ ಇಲ್ಲ-ಅನ್ನದಾತನಿಗೆ ಕಣ್ಣೀರು ತರಿಸುತ್ತಿದೆ ಈರುಳ್ಳಿ        ಬೆಂಗಳೂರಲ್ಲಿ ಅನಧಿಕೃತ ಬಿಟ್ ಕಾಯಿನ್ ATM-ಆರೋಪಿ ಹರೀಶ್ ಬಂಧನ-ಕೆಂಪ್ ಫೋರ್ಟ್​ನಲ್ಲಿದ್ದ ಎಟಿಎಂ ಪೊಲೀಸರ ವಶಕ್ಕೆ        ಕೊಳ್ಳೆಗಾಲದಲ್ಲಿ 17 ವರ್ಷಗಳಿಂದ ಕಾಮಗಾರಿ ಅಪೂರ್ಣ-ಇನ್ನೂ ಆಗಿಲ್ಲ ವಾಲ್ಮೀಕಿ ಭವನ ನಿರ್ಮಾಣ-ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ        ವಿಜಯಪುರದಲ್ಲಿ ಗಂಗಾಕಲ್ಯಾಣ ಗೋಲ್ಮಾಲ್-ಫಲಾನುಭವಿಗಳಿಗೆ ಸಿಗದ ಬೋರ್ ವೇಲ್ ಸೌಲಭ್ಯ-ಯಾರದ್ದೋ ಹೆಸರಲ್ಲಿ ಅನುದಾನ ನೀಡಿದ ಅಧಿಕಾರಿಗಳು       
Breaking News

ಗೂಗಲ್ ಪ್ಲಸ್ ಮೈನಸ್

Wednesday, 10.10.2018, 3:02 AM       No Comments

ವಾಷಿಂಗ್ಟನ್: ಬಳಕೆದಾರರ ಮಾಹಿತಿ ಸೋರಿಕೆ ಆರೋಪದ ಹಿನ್ನೆಲೆ ಗೂಗಲ್ ಪ್ಲಸ್ ಸಾಮಾಜಿಕ ಜಾಲತಾಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಗೂಗಲ್ ನಿರ್ಧರಿಸಿದೆ. ಕಳೆದ ಮಾರ್ಚ್​ನಲ್ಲಿಯೇ ಮಾಹಿತಿ ಸೋರಿಕೆಗೆ ಪೂರಕವಾದ ಬಗ್ ಸೇರಿಕೊಂಡಿರುವುದು ಗೂಗಲ್​ಗೆ ತಿಳಿದುಬಂದಿತ್ತು. ಆದರೆ ಬಳಕೆದಾರರಿಗೆ ಈ ಕುರಿತು ಮಾಹಿತಿ ನೀಡಿರಲಿಲ್ಲ. ಆದರೆ ಈ ವಿಷಯವನ್ನು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿ, ಸಾವಿರಾರು ಬಳಕೆದಾರರ ಮಾಹಿತಿ ಸಾರ್ವಜನಿಕಗೊಂಡಿದೆ ಎಂದು ಹೇಳಿತ್ತು. ಹೀಗಾಗಿ ಮುಂದಿನ 10 ತಿಂಗಳವರೆಗೆ ಗೂಗಲ್ ಪ್ಲಸ್ ಸ್ಥಗಿತಗೊಳಿಸಲು ಗೂಗಲ್ ನಿರ್ಧರಿಸಿದೆ. ಆರ್ಕಟ್ ಬಳಿಕ ಹೊಸ ಸಾಮಾಜಿಕ ಜಾಲತಾಣವನ್ನಾಗಿ ಗೂಗಲ್ ಪ್ಲಸ್​ನ್ನು ಗೂಗಲ್ ಪರಿಚಯಿಸಿತ್ತು. ಆದರೆ ಫೇಸ್​ಬುಕ್​ನಷ್ಟು ಖ್ಯಾತಿ ಗಳಿಸಿರಲಿಲ್ಲ.

Leave a Reply

Your email address will not be published. Required fields are marked *

Back To Top