Wednesday, 24th October 2018  

Vijayavani

ರಂಗೇರಿದ ಉಪ ಚುನಾವಣಾ ಕಣ-ಜಮಖಂಡಿಯಲ್ಲಿಂದು ಬಿಎಸ್ ವೈ ಮತಬೇಟೆ-ಸಕ್ಕರೆ ನಾಡು ಮಂಡ್ಯದಲ್ಲಿಂದು ಸಿದ್ದರಾಮಯ್ಯ ಪ್ರಚಾರ        ದೀಪಾವಳಿಯಿಂದ ಲೋಡ್​ ಶೆಡ್ಡಿಂಗ್-ಇಂಧನ ಇಲಾಖೆ ಅಧಿಕಾರಿಗಳ ಜತೆ ಸಿಎಂ ಸಭೆ-ಕತ್ತಲಲ್ಲಿ ಮುಳುಗುತ್ತಾ ಕರ್ನಾಟಕ..?        ಸಾಲಮನ್ನಾವೂ ಇಲ್ಲ, ಬೆಲೆಯೂ ಇಲ್ಲ-ಬೆವರು ಸುರಿಸಿ ಬೆಳೆದ ಬೆಳೆ ಕೇಳೋರೂ ಇಲ್ಲ-ಅನ್ನದಾತನಿಗೆ ಕಣ್ಣೀರು ತರಿಸುತ್ತಿದೆ ಈರುಳ್ಳಿ        ಬೆಂಗಳೂರಲ್ಲಿ ಅನಧಿಕೃತ ಬಿಟ್ ಕಾಯಿನ್ ATM-ಆರೋಪಿ ಹರೀಶ್ ಬಂಧನ-ಕೆಂಪ್ ಫೋರ್ಟ್​ನಲ್ಲಿದ್ದ ಎಟಿಎಂ ಪೊಲೀಸರ ವಶಕ್ಕೆ        ಕೊಳ್ಳೆಗಾಲದಲ್ಲಿ 17 ವರ್ಷಗಳಿಂದ ಕಾಮಗಾರಿ ಅಪೂರ್ಣ-ಇನ್ನೂ ಆಗಿಲ್ಲ ವಾಲ್ಮೀಕಿ ಭವನ ನಿರ್ಮಾಣ-ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ        ವಿಜಯಪುರದಲ್ಲಿ ಗಂಗಾಕಲ್ಯಾಣ ಗೋಲ್ಮಾಲ್-ಫಲಾನುಭವಿಗಳಿಗೆ ಸಿಗದ ಬೋರ್ ವೇಲ್ ಸೌಲಭ್ಯ-ಯಾರದ್ದೋ ಹೆಸರಲ್ಲಿ ಅನುದಾನ ನೀಡಿದ ಅಧಿಕಾರಿಗಳು       
Breaking News

ಪರಿಷ್ಕೃತ ವೇತನ ಬಾಕಿ ಪಾವತಿ

Thursday, 10.05.2018, 3:09 AM       No Comments

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಪರಿಷ್ಕೃತ ವೇತನದ ಬಾಕಿ ಪಾವತಿಸಲು ಸೂಕ್ತ ಕ್ರಮಕೈಗೊಳ್ಳುವಂತೆ ಸರ್ಕಾರಿ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳಿಗೆ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎನ್.ಎಸ್. ಪ್ರಸಾದ್ ಸೂಚಿಸಿದ್ದಾರೆ. 2018ರ ಏಪ್ರಿಲ್ ನಂತರದಲ್ಲಿ ಪರಿಷ್ಕೃತ ವೇತನ ಶ್ರೇಣಿ ನಿಗದಿಪಡಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಆದೇಶ ನೀಡಲಾಗಿದೆ. ಕೇಂದ್ರ ಚುನಾವಣಾ ಆಯೋಗದ ಅನುಮೋದನೆಯೊಂದಿಗೆ ರಾಜ್ಯ

ಸರ್ಕಾರಿ ನೌಕರರ ವೇತನ, ಭತ್ಯೆ ಮತ್ತು ಪಿಂಚಣಿ ಪರಿಷ್ಕರಿಸುವ ಸಂಬಂಧ ನಿಯಮ ಮತ್ತು ಆದೇಶ ಹೊರಡಿಸಲಾಗಿತ್ತು. ಅದರಂತೆ ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಮತ್ತು ಪಿಂಚಣಿ 2017 ಜುಲೈ 1ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಿ ಆರ್ಥಿಕ ಲಾಭವನ್ನು 2018 ಏ.1ರಿಂದ ಪಾವತಿಸಲು ಆರ್ಥಿಕ ಇಲಾಖೆ ಆದೇಶಿಸಿತ್ತು. ಜತೆಗೆ ರಾಜ್ಯ ಸರ್ಕಾರಿ ನೌಕರರ ವೇತನವನ್ನು 2018 ಜೂನ್ 30ರೊಳಗಾಗಿ ನಿಗದಿಪಡಿಸಲು ಇಲಾಖೆ ಮುಖ್ಯಸ್ಥರಿಗೆ ಆರ್ಥಿಕ ಇಲಾಖೆ ನಿರ್ದೇಶನ ನೀಡಿದೆ.

Leave a Reply

Your email address will not be published. Required fields are marked *

Back To Top