Friday, 19th October 2018  

Vijayavani

ಮೈಸೂರು ರಾಜವಂಶದಲ್ಲಿ ಒಂದೇ ದಿನ ಎರಡು ಸಾವು-ಪ್ರಮೋದಾದೇವಿ ನಾದಿನಿ ವಿಧಿವಶ        ವಿಲನ್ ಚಿತ್ರದಲ್ಲಿ ಶಿವಣ್ಣರನ್ನ ಕಡೆಗಣನೆ ಎಂದು ಆಕ್ರೋಶ - ಥಿಯೆಟರ್‌ ಮುಂದೆ ಅಭಿಮಾನಿಗಳ ಪ್ರತಿಭಟನೆ        ಒಕ್ಕಲಿಗರ ಸಂಘದಲ್ಲಿ ಮೂಗು ತೂರಿಸಲ್ಲ - ಜಾತಿ, ಧರ್ಮದಲ್ಲಿ ಹಸ್ತಕ್ಷೇಪ ಮಾಡಲ್ಲ - ಎಕ್ಸ್‌ಕ್ಲೂಸಿವ್‌ ಸಂದರ್ಶನದಲ್ಲಿ ಡಿಕೆಶಿ ಮಾತು        ಅದ್ದೂರಿ ಜಂಬೂ ಸವಾರಿ - ಅಂಬಾರಿ ಹೊತ್ತು ಅರ್ಜುನ ಗಾಂಭೀರ್ಯ ನಡಿಗೆ - ಬನ್ನಿಮಂಟಪದತ್ತ ವಿಜಯದಶಮಿ ಮೆರವಣೆಗೆ        ದಸರಾ ಮೆರವಣಿಗೆಯಲ್ಲಿ ನಾಡಿನ ಶ್ರೀಮಂತ ಕಲೆ ಅನಾವರಣ - ಗಮನ ಸೆಳೆದ ವಿವಿಧ ಜಿಲ್ಲೆಗಳ ಸ್ತಬ್ಧಚಿತ್ರಗಳ ಚಿತ್ರಣ        ದೆಹಲಿಯಲ್ಲಿ ವಿಜಯದಶಮಿ ಸಂಭ್ರಮ-ರಾಮಲೀಲ ಮೈದಾನದಲ್ಲಿ ರಾವಣನ ಸಂಹಾರ - ಕಾರ್ಯಕ್ರಮದಲ್ಲಿ ರಾಷ್ಟ್ರಪತಿ, ಪ್ರಧಾನಿ ಭಾಗಿ       
Breaking News

ಕ್ಯಾಲಿಫೋರ್ನಿಯಾ: ಮುಸುಕುಧಾರಿ ವ್ಯಕ್ತಿಯ ಗುಂಡಿನ ದಾಳಿಗೆ ಐದು ಬಲಿ

Wednesday, 15.11.2017, 9:25 AM       No Comments

>> ಆದರೆ ಱಂಕೋ ಟೆಹಾಮಾ ಎಲಿಮೆಂಟರಿ ಶಾಲೆಯ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಕ್ಯಾಲಿಫೋರ್ನಿಯಾ: ಅಮೆರಿಕಾದಲ್ಲಿ ಉಗ್ರರು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದಾರೆ. ಇಲ್ಲಿನ ಱಂಕೋ ಟೆಹಾಮಾ ಎಲಿಮೆಂಟರಿ ಶಾಲೆ ಮುಂಭಾಗ ಮುಸುಕುಧಾರಿ ವ್ಯಕ್ತಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಮೂರು ಮಕ್ಕಳು ಸೇರಿದಂತೆ ಒಟ್ಟು 5 ಮಂದಿ ಮೃತಪಟ್ಟಿದ್ದಾರೆ.

ಆದರೆ ಱಂಕೋ ಟೆಹಾಮಾ ಎಲಿಮೆಂಟರಿ ಶಾಲೆಯ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಗುಂಡಿನ ದಾಳಿ ಶಬ್ದ ಕೇಳುತ್ತಿದ್ದಂತೆಯೇ ಒಳಗಡೆ ಹೋದ ಸಿಬ್ಬಂದಿ ಕೊಠಡಿಗಳ ಬಾಗೀಲುಗಳನ್ನು ಮುಚ್ಚಿಸಿ, ಮಕ್ಕಳಿಗೆ ಬೆಂಚ್​ಗಳ ಕೆಳಗಡೆ ಬಚ್ಚಿಟ್ಟುಕೊಳ್ಳುವಂತೆ ಸೂಚಿಸಿದ್ದಾರೆ.

ಶಾಲೆಯ ಆವರಣದಲ್ಲಿ ನುಗ್ಗಿ ಗುಂಡಿನ ದಾಳಿ ಮಾಡಲು ಪ್ರಾರಂಭಿಸಿದ್ದ ಮುಸುಕುಧಾರಿ ವ್ಯಕ್ತಿಯನ್ನು ಪೊಲೀಸರು ಬಲಿ ಪಡೆದಿದ್ದಾರೆ. ಮುನ್ನೆಚ್ಚರಿಕ ಕ್ರಮವಾಗಿ ಸುತ್ತಮುತ್ತಲ ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರವಹಿಸಲಾಗಿದೆ. (ಏಜೆನ್ಸೀಸ್)

Leave a Reply

Your email address will not be published. Required fields are marked *

Back To Top