Friday, 20th October 2017  

Vijayavani

1. ಲಿಂಗಾಯತ ಪ್ರತಿಪಾದಕರಾಗಿದ್ದಕ್ಕೆ ಕಲಬುರ್ಗಿ ಹತ್ಯೆ – ಲಿಂಗಾಯತ ವಿಚಾರ ಬರೆದಿದ್ದಕ್ಕೆ ಗೌರಿ ಲಂಕೇಶ್​ ಕೊಲೆ ಶಂಕೆ – ಬೆಂಗಳೂರಿನಲ್ಲಿ ಜಾಮದಾರ್​ ವಿವಾದಾತ್ಮಕ ಹೇಳಿಕೆ 2. ಬಿಜೆಪಿ ಬಿಟ್ಟು ಕಾಂಗ್ರೆಸ್​ ಸೇರಿದಕ್ಕೆ ಮಾರಣಾಂತಿಕ ಹಲ್ಲೆ – ಮಾಜಿ ಕಾರ್ಪೊರೇಟರ್​ ರವೀಂದ್ರ ವಿರುದ್ಧ ಮಹಿಳೆ ಆರೋಪ – ಗಾಯಾಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ 3. ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವ – ರಥೋತ್ಸವದ ವೇಳೆ ನೂಕು ನುಗ್ಗಲು – ಭಕ್ತರ ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್ 4. ಹಾಲಿವುಡ್, ಬಾಲಿವುಡ್​ ಬೇರೆ ಅಲ್ಲ – ಎರಡೂ ಕಡೆ ಲೈಂಗಿಕ ಶೋಷಣೆ ಇದ್ದೆ ಇದೆ – ಸಂದರ್ಶನದಲ್ಲಿ ಸತ್ಯ ತೆರೆದಿಟ್ಟ ಪ್ರಿಯಾಂಕ ಚೋಪ್ರಾ 5. ದೀಪಾವಳಿಗೆ ಪ್ರಧಾನಿ ತಾಯಿ ಫುಲ್ ಖುಷ್​ – ರಾಮನ ಹಾಡಿಗೆ ಸಖತ್ ಸ್ಟೆಪ್ಸ್​ – 97ರ ಹರೆಯದಲ್ಲೂ ಹೀರಾಬೆನ್​ ಜೀವನ ಪ್ರೀತಿ
Breaking News :

Suitcase ಇದ್ರೆನೇ ಸರ್ಕಾರಿ ಕೆಲ್ಸ ಆಗೋದು ಅಂದ್ರು ಮಲ್ಲಿಕಾ ಘಂಟಿ

Thursday, 14.09.2017, 12:36 PM       No Comments

ಬಳ್ಳಾರಿ: ಮತ್ತೊಮ್ಮೆ Suitcase ಸಂಸ್ಕೃತಿ ಸದ್ದುಮಾಡತೊಡಗಿದೆ. ಸರ್ಕಾರಿ ಕಚೇರಿಗಳಿಗೆ ಸೂಟ್‌ಕೇಸ್‌ ಕೊಂಡೊಯ್ದರೆ ಮಾತ್ರ ಅಭಿವೃದ್ಧಿ ಕೆಲಸಗಳು ಸರಾಗವಾಗಿ ಆಗುತ್ತವೆ. ಹೀಗಾಗಿ ವಿಶ್ವವಿದ್ಯಾಲಯಗಳಲ್ಲಿ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಮಲ್ಲಿಕಾ ಘಂಟಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬೆಳ್ಳಿಹಬ್ಬ ಕಾರ್ಯಕ್ರಮದ ಎರಡನೇ ದಿನದ ವಿಚಾರ ಸಂಕಿರಣ ಸಮಾರಂಭದಲ್ಲಿ ಮಾತನಾಡಿರುವ ಹಂಪಿ ಕನ್ನಡ ವಿವಿಯ ಕುಲಪತಿ ಮಲ್ಲಿಕಾ ಘಂಟಿ, ವಿಶ್ವವಿದ್ಯಾಲಯಗಳ ಅಭಿವೃದ್ಧಿ ವಿಚಾರಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿಗಾಗಿ ವಿಜಯವಾಣಿ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಇನ್ನು ಮೊನ್ನೆಯಷ್ಟೇ ಬೆಳ್ಳಿಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿದ್ದ ಸಿಎಂ ಸಿದ್ದರಾಮಯ್ಯ ವಿವಿಯಲ್ಲಿನ ಸಿಬ್ಬಂದಿ, ಅಧ್ಯಾಪಕರ ಕೊರತೆ ನೀಗಿಸುವ ಭರವಸೆ ನೀಡಿದ್ದರು ಎಂಬುದನ್ನು ಇಲ್ಲಿ ಗಮನಿಸಬಹುದು.

ಸಿಎಂ ಸಿದ್ದರಾಮಯ್ಯ ಅವರ ಭರವಸೆ ಕೇವಲ ಒಂದು ದಿನಕ್ಕೆ ಸೀಮಿತವಾಗಿದೆ ಎಂದು ಸಿದ್ದರಾಮಯ್ಯ ಭರವಸೆ ಭಾಷಣದ ವಿರುದ್ಧ ಮಾತನಾಡಿದ ಮಲ್ಲಿಕಾ ಘಂಟಿ, ಸರ್ಕಾರಿ ಕಚೇರಿಗಳಲ್ಲಿ ಹಣ ಇಲ್ಲದಿದ್ದರೆ ಏನು ನಡೆಯುವುದಿಲ್ಲ ಎಂದು ನೋವು ತೋಡಿಕೊಂಡಿದ್ದಾರೆ.

ಈ ಹಿಂದೆ ಹಂಪಿ ವಿವಿಯಲ್ಲಿ ಕೆಲಸ ಮಾಡಿದ ಎಲ್ಲರೂ ತಮ್ಮ ತಮ್ಮ 25 ವರ್ಷದ ಅನುಭವಗಳನ್ನು ಹೇಳಿಕೊಳ್ಳುತ್ತಿದ್ದರು. ಸೂಟ್‌ಕೇಸ್‌ ಎನ್ನುವುದು ಕೇವಲ ರೂಪಕವಷ್ಟೆ. ನನ್ನ ಹೇಳಿಕೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ. ನಾನು ಎಂದಿಗೂ ಸೂಟ್‌ಕೇಸ್‌ ಕೊಡುವುದನ್ನು ಎದುರಿಸಿಲ್ಲ. ವ್ಯವಸ್ಥೆಗಳ ಬಗ್ಗೆ ತಕರಾರುಗಳಿವೆ. ಸರ್ಕಾರ ಮತ್ತು ವಿಧಾನಸೌಧವನ್ನು ನಾನು ತಳುಕುಹಾಕಿಲ್ಲ. ಇದು ಕೇವಲ ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಹೇಳಿದ್ದೇನೆ ಹೊರತು ಇದರಲ್ಲಿ ಯಾವುದೇ ರಾಜಕೀಯ ಲೇಪನವಿಲ್ಲ ಎಂದು ಮಲ್ಲಿಕಾ ಘಂಟಿ ದಿಗ್ವಿಜಯ ನ್ಯೂಸ್‌ಗೆ ಸ್ಪಷ್ಟಪಡಿಸಿದ್ದಾರೆ.

ವಿಚಾರಗಳು ನಮ್ಮನ್ನು ಕೊಲ್ಲಬಾರದು. ರಾಜಕೀಯವೇ ವ್ಯವಸ್ಥೆ ಅಲ್ಲ. ಚಳವಳಿಗಳ ಮೂಲಕ ಸಾಂಸ್ಕೃತಿಕವಾಗಿ ಬದಲಾವಣೆಯನ್ನು ತರಬೇಕಿದೆ. ಈ ನಿಟ್ಟಿನಲ್ಲಿ ಮಾಧ್ಯಮದವರು ಕೂಡ ತಾತ್ವಿಕವಾದ ಬದ್ಧತೆಯನ್ನು ಉಳಿಸಿಕೊಳ್ಳುವಲ್ಲಿ ಶ್ರಮಿಸಬೇಕು. ರಾಜಕಾರಣಕ್ಕಿಂತಲೂ ಕನ್ನಡ ವಿಶ್ವವಿದ್ಯಾಲಯ ದೊಡ್ಡದು. ಈ ಹೇಳಿಕೆ ರಾಜಕೀಯ ಪ್ರೇರಿತವಲ್ಲ. ಭ್ರಷ್ಟಾಚಾರ ಕೇವಲ ಇವತ್ತಿನ ಸಮಸ್ಯೆಯಲ್ಲ. ಅದು ಹಿಂದಿನ ಕಾಲದಿಂದಲೂ ಇದೆ ಎಂದಿದ್ದಾರೆ. (ದಿಗ್ವಿಜಯ ನ್ಯೂಸ್‌)

Leave a Reply

Your email address will not be published. Required fields are marked *

Back To Top