Sunday, 23rd September 2018  

Vijayavani

ಜಿಮ್​ ತರಬೇತುದಾರನ ಅಪಹರಣ ಮತ್ತು ಹಲ್ಲೆ ಪ್ರಕರಣದಲ್ಲಿ ನಟ ದುನಿಯಾ ವಿಜಯ್​ ಬಂಧನ.        ವಿಧಾನ ಪರಿಷತ್​​ 3 ಸ್ಥಾನಗಳಿಗೆ ಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಬಿಜೆಪಿ ಪಟ್ಟಿ ಇಂದು ಅಂತಿಮ        ಮೋದಿ ಕಳ್ಳ ಎಂದಿದ್ದ ರಾಹುಲ್​ ವಿರುದ್ಧ ನಿರ್ಮಲಾ ಗುಡುಗು: ರಾಹುಲ್​ ಅವರದ್ದು ಕಳ್ಳರ ಕುಟುಂಬ ಎಂದ ಸಚಿವೆ        ಹಾಸನದಲ್ಲಿ ಇಂದು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಮುಖ್ಯಮಂತ್ರಿ ಎಚ್​ಡಿಕೆ       
Breaking News

ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ: ಮಹಿಳಾ ಆಯೋಗಕ್ಕೆ ದೂರು ನೀಡಿದ ರ‍್ಯಾಪಿಡ್ ರಶ್ಮಿ

Monday, 16.04.2018, 11:48 AM       No Comments

ಬೆಂಗಳೂರು: ರಾಜರಥ ಸಿನಿಮಾ ತಂಡದ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಆರ್​ಜೆ ರ‍್ಯಾಪಿಡ್ ರಶ್ಮಿಗೆ ಸಾಮಾಜಿಕ ಜಾಲತಾಣಗಳಲ್ಲಿ ನೀಡಲಾಗುತ್ತಿರುವ ಕಿರುಕುಳ ಸಂಬಂಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.

ಲೈಂಗಿಕ ದೌರ್ಜನ್ಯ, ಅತ್ಯಾಚಾರ ಹಾಗೂ ಬೆದರಿಕೆ ಸೇರಿದಂತೆ ಇನ್ನೂ ಹಲವು ಬಗೆಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ನಿರೂಪಕಿ ರ‍್ಯಾಪಿಡ್ ರಶ್ಮಿ ಸೋಮವಾರ ದೂರು ನೀಡಿದ್ದಾರೆ.

ಖಾಸಗಿ ಕಾರ್ಯಕ್ರಮದಲ್ಲಿ ರಾಜರಥ ಸಿನಿಮಾ ನೋಡದವರ ಬಗ್ಗೆ ಏನೆಂದು ಹೇಳುತ್ತೀರಿ ಎಂದು ರ‍್ಯಾಪಿಡ್ ರಶ್ಮಿ ಪ್ರಶ್ನೆ ಕೇಳಿದ್ದರು. ಇದಕ್ಕೆ ಉತ್ತರವಾಗಿ ಸಿನಿಮಾ ನೋಡದವರನ್ನು ಅವಾಚ್ಯ ಶಬ್ದಗಳಿಂದ ಭಂಡಾರಿ ಬ್ರದರ್ಸ್ ನಿಂದಿಸಿದ್ದರು. ಇದಕ್ಕೆ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿರುವ ಪ್ರತಿಯೊಂದು ಕಾಮೆಂಟ್‍ನ್ನು ರ‍್ಯಾಪಿಡ್ ರಶ್ಮಿ ಮಹಿಳಾ ಆಯೋಗಕ್ಕೆ ಸಲ್ಲಿಸಿದ್ದಾರೆ. ಈ ಕುರಿತು ಸೈಬರ್ ಕ್ರೈಂ ಪೊಲೀಸರು ತನಿಖೆ ನಡೆಸುವ ಸಾಧ್ಯತೆ ಇದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top