Friday, 20th October 2017  

Vijayavani

1. ಲಿಂಗಾಯತ ಪ್ರತಿಪಾದಕರಾಗಿದ್ದಕ್ಕೆ ಕಲಬುರ್ಗಿ ಹತ್ಯೆ – ಲಿಂಗಾಯತ ವಿಚಾರ ಬರೆದಿದ್ದಕ್ಕೆ ಗೌರಿ ಲಂಕೇಶ್​ ಕೊಲೆ ಶಂಕೆ – ಬೆಂಗಳೂರಿನಲ್ಲಿ ಜಾಮದಾರ್​ ವಿವಾದಾತ್ಮಕ ಹೇಳಿಕೆ 2. ಬಿಜೆಪಿ ಬಿಟ್ಟು ಕಾಂಗ್ರೆಸ್​ ಸೇರಿದಕ್ಕೆ ಮಾರಣಾಂತಿಕ ಹಲ್ಲೆ – ಮಾಜಿ ಕಾರ್ಪೊರೇಟರ್​ ರವೀಂದ್ರ ವಿರುದ್ಧ ಮಹಿಳೆ ಆರೋಪ – ಗಾಯಾಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ 3. ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವ – ರಥೋತ್ಸವದ ವೇಳೆ ನೂಕು ನುಗ್ಗಲು – ಭಕ್ತರ ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್ 4. ಹಾಲಿವುಡ್, ಬಾಲಿವುಡ್​ ಬೇರೆ ಅಲ್ಲ – ಎರಡೂ ಕಡೆ ಲೈಂಗಿಕ ಶೋಷಣೆ ಇದ್ದೆ ಇದೆ – ಸಂದರ್ಶನದಲ್ಲಿ ಸತ್ಯ ತೆರೆದಿಟ್ಟ ಪ್ರಿಯಾಂಕ ಚೋಪ್ರಾ 5. ದೀಪಾವಳಿಗೆ ಪ್ರಧಾನಿ ತಾಯಿ ಫುಲ್ ಖುಷ್​ – ರಾಮನ ಹಾಡಿಗೆ ಸಖತ್ ಸ್ಟೆಪ್ಸ್​ – 97ರ ಹರೆಯದಲ್ಲೂ ಹೀರಾಬೆನ್​ ಜೀವನ ಪ್ರೀತಿ
Breaking News :

ಹಾಸನದಲ್ಲಿ ಕಾರ್ತಯಕರ್ತರ ಮಾರಾಮಾರಿ; ಮೂಕರಾದ ದೇವೇಗೌಡ್ರು!

Saturday, 07.10.2017, 3:24 PM       No Comments

ಹಾಸನ: ಬೇಲೂರಿನ ಸುರಾಪುರ ಬಳಿಯಿರುವ ರಣಘಟ್ಟ ಒಡ್ಡಿಗೆ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಅವರು ಶನಿವಾರ ಭೇಟಿ ನೀಡಿದ್ದ ವೇಳೆ ರೈತ ಸಂಘದ ನಡುವೆ ಮಾರಾಮಾರಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

ರಣಘಟ್ಟಿಗೆ ದೇವೇಗೌಡರು ಭೇಟಿ ನೀಡಿದಾಗ ರೈತ ಸಂಘದ ಮುಖಂಡ ಕುಮಾರ್ ದೇವೇಗೌಡರ ವಿರುದ್ಧ ಮಾತನಾಡಿದ್ದಾರೆ. ಇದರಿಂದ ಕೆರಳಿದ ಇನ್ನುಳಿದ ರೈತರು ಗೌಡರ ವಿರುದ್ಧ ಧ್ವನಿಯೆತ್ತಿದ್ದಕ್ಕೆ ಅವರವರೇ ಹೊಡೆದಾಡಿಕೊಂಡಿದ್ದಾರೆ.

ರಣಘಟ್ಟ ಒಡ್ಡಿನಿಂದ ಬೇಲೂರಿನ ಹಳೇಬೀಡು, ಮಾದಿಹಳ್ಳಿಗೆ ನೀರು ಹರಿಸುವಂತೆ ಕೆಲ ದಿನದ ಹಿಂದೆ ಮಠಾಧೀಶರು ಹಾಗೂ ರೈತರು ಹೋರಾಟ ನಡೆಸಿದ್ದರು. ನೀರಿಗಾಗಿ ಹೋರಾಟ ನಡೆದಿದ್ದ ಕಾರಣ ಇಂದು ಸ್ಥಳಕ್ಕೆ ದೇವೇಗೌಡರು ಭೇಟಿ ನೀಡಿದಾಗ ಈ ಘಟನೆ ನಡೆದಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top