Friday, 20th April 2018  

Vijayavani

ಬಾದಾಮಿಯಿಂದ ಸ್ಪರ್ಧೆ ವಿಚಾರದಲ್ಲಿ ದ್ವಂದ್ವ- ಸ್ಪರ್ಧೆ ಬಗ್ಗೆ ಸ್ಪಷ್ಟವಾಗಿ ಹೇಳದ ಸಿಎಂ- ಹೈಕಮಾಂಡ್​ ನಿರ್ಧಾರ ಅಂತಿಮ        ಉಲ್ಟಾ ಹೊಡೆದ ಸಿಎಂ ಪುತ್ರ ಯತೀಂದ್ರ- ತಂದೆಯ ಬಾದಾಮಿ ಸ್ಪರ್ಧೆ ಪೋಸ್ಟ್​​​ ಡಿಲೀಟ್​​ - ಏ.23 ಕ್ಕೆ ನಾಮಪತ್ರ ಎಂದಿದ್ದ ಯತೀಂದ್ರ        ಜಗಳೂರು ಟಿಕೆಟ್​ ವಂಚಿತೆ ಆಸ್ಪತ್ರೆಗೆ ದಾಖಲು- ಟಿಕೆಟ್​​ ಕೊಟ್ಟು ಕಸಿದಿದ್ದರಿಂದ ನೊಂದಿದ್ದ ಪುಷ್ಪಾ- ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ        ಕಾಂಗ್ರೆಸ್​ನಲ್ಲಿ ಆಗಿದೆಯಂತೇ ಕೋಟಿ ಕೋಟಿ ಡೀಲ್​- ಕೆಪಿಸಿಸಿ ಅಧ್ಯಕ್ಷರಿಂದಲೇ ಟಿಕೆಟ್​ ಸೇಲ್​- ಛಲವಾದಿ ನಾರಾಯಣಸ್ವಾಮಿ ಹೊಸ ಬಾಂಬ್​        ಕೋಲಾರದ ಮಾಲೂರಿನಲ್ಲಿ ವೈದ್ಯರ ಎಡವಟ್ಟು- ಮಗುವಿನ ದೇಹದಲ್ಲೇ ಸೂಜಿ ಬಿಟ್ಟ ಡಾಕ್ಟರ್​- ಏಳು ದಿನದ ಬಳಿಕ ಮಗು ಸಾವು        ನರೋಡಾ ಪಾಟೀಯಾ ಹತ್ಯಾಖಾಂಡ ಪ್ರಕರಣ- ಮಾಜಿ ಸಚಿವೆ ಮಾಯಾ ಕೊಡ್ನಾನಿ ನಿರ್ದೋಶಿ- ಗುಜರಾತ್​​ ಹೈಕೋರ್ಟ್​​ನಿಂದ ತೀರ್ಪು       
Breaking News

22 ವರ್ಷ ಹಿಂದೆ ಶಾಸಕನ ಹತ್ಯೆ ಮಾಡಿದ್ದ ಆರ್​ಜೆಡಿ ಮಾಜಿ ಸಂಸದ ಆರೆಸ್ಟ್

Friday, 19.05.2017, 4:42 PM       No Comments

ಹಜಾರಿಬಾಗ್ (ಜಾರ್ಖಂಡ್): ಸುಮಾರು 22 ವರ್ಷಗಳ ಹಿಂದೆ ಜನತಾ ದಳದ ಶಾಸಕ ಅಶೋಕ್ ಸಿಂಗ್​ ಅವರ ಹತ್ಯೆ ನಡೆದಿತ್ತು. ಆ ಪ್ರಕರಣದಲ್ಲಿ ಆರ್​ಜೆಡಿ ಪಕ್ಷದ ಮಾಜಿ ಸಂಸದ ಪ್ರಭುನಾಥ್ ಸಿಂಗ್ ಹಾಗೂ ಆತನ ಇಬ್ಬರು ಸಹೋದರರು ಆರೋಪಿಗಳಾಗಿದ್ದರು. ಆದರೆ, ಇಂದು ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿ ಮೂವರನ್ನೂ ತಪ್ಪಿತಸ್ಥರು ಎಂದು ನ್ಯಾಯಾಲಯ ತೀರ್ಪು ನೀಡಿದೆ.

1995ರಲ್ಲಿ ನಡೆದ ಅಶೋಕ್​ ಸಿಂಗ್ ಹತ್ಯೆ ಪ್ರಕರಣದಲ್ಲಿ ಅಪರಾಧಿಗಳು ಎಂದು ಪ್ರಭುನಾಥ್ ಸಿಂಗ್ ಮತ್ತು ಅವರ ಸಹೋದರರಾದ ದೀನನಾಥ್ ಸಿಂಗ್ ಮತ್ತು ರಿತೇಶ್ ಸಿಂಗ್​ ಅವರನ್ನು ಕೋರ್ಟ್​ ಘೋಷಿಸುತ್ತಿದ್ದಂತೆ ಸ್ಥಳೀಯ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಹಜಾರಿಬಾಗ್ ಜೈಲಿಗೆ ಕಳುಹಿಸಲಾಗಿದೆ.

ಮೇ 23 ರಂದು ಅವರ ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗುವುದು ಎಂದು 9 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸುರೇಂದ್ರ ಶರ್ಮಾ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ: ಛಾಪ್ರಾ ಜಿಲ್ಲೆಯ ಶಾಸಕ ಅಶೋಕ್ ಸಿಂಗ್ ಅವರ ಮೇಲೆ 3 ಜುಲೈ 1995 ರಂದು ಗುಂಡಿನ ದಾಳಿ ನಡೆಸಲಾಗಿತ್ತು. ಈ ಘಟನೆಯಲ್ಲಿ ಅವರು ಮೃತಪಟ್ಟಿದ್ದರು.

ಹತ್ಯೆಯಾದ ಎಂಎಲ್ಎ ಪತ್ನಿ ಚಂದನಿ ದೇವಿಯ ಹೇಳಿಕೆಯ ಆಧಾರದ ಮೇಲೆ ಈ ಪ್ರಕರಣ ದಾಖಲಿಸಲಾಗಿತ್ತು ಎಂದು  ಪೊಲೀಸ್ ಮೂಲಗಳು ತಿಳಿಸಿವೆ. (PTI)

Leave a Reply

Your email address will not be published. Required fields are marked *

Back To Top