Friday, 21st September 2018  

Vijayavani

ಸಿಎಂ ‘ದಂಗೆ’ ಹೇಳಿಕೆ ವಿರುದ್ಧ ಕೇಸರಿ ಗುಟುರು - ಡಿಜಿಪಿ ನೀಲಮಣಿ ರಾಜುಗೆ ಬಿಜೆಪಿ ದೂರು - ಸಂಜೆ 4.30ಕ್ಕೆ ಗವರ್ನರ್ ಭೇಟಿ​​​​        ರಾಜ್ಯಾದ್ಯಂತ ಭುಗಿಲೆದ್ದ ‘ದಂಗೆ’ ಉರಿ - ಕಲಬುರಗಿ, ಮಂಡ್ಯ, ಧಾರವಾಡ, ಕೊಡಗಿನಲ್ಲಿ ದಳ್ಳುರಿ        ಬ್ರದರ್ಸ್​​ ತಂಟೆಗೆ ಹೋಗ್ಬೇಡಿ, ವಿವಾದಾತ್ಮಕ ಹೇಳಿಕೆ ಕೊಡ್ಬೇಡಿ - ಸಾಫ್ಟ್​ ಪಾಲಿಟಿಕ್ಸ್ ಬಗ್ಗೆ ಡಿಕೆಶಿಗೆ ಸಿದ್ದು ಕ್ಲಾಸ್        ಕರ್ನಾಟಕದಲ್ಲಿ ನಮಗೆ ಅಧಿಕಾರ ಬೇಕು - ಇಲ್ದಿದ್ರೆ ಲೋಕಸಭೆ ಚುನಾವಣೆಯಲ್ಲಿ ಕಷ್ಟ ಕಷ್ಟ - ಪರಿಸ್ಥಿತಿ ನಿಭಾಯಿಸಲು ಸಿದ್ದುಗೆ ಸೂಚನೆ        ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ - ಅಪಹರಿಸಿದ್ದ ಮೂವರು ಪೊಲೀಸರ ಹತ್ಯೆಗೈದ ಕಿರಾತಕರು        ಓಡಿಶಾದಲ್ಲಿ ಡೆಯ್ ಚಂಡಮಾರುತದ ಅಬ್ಬರ - ಕಾಲಾಪುರಕ್ಕೆ ನುಗ್ಗಿದ ಡ್ಯಾಮ್ ನೀರು ನುಗ್ಗಿ ಪ್ರವಾಹ - ಬಿರುಗಾಳಿಗೆ ಜನರು ಕಂಗಾಲ್       
Breaking News

ನನ್ನ ಡೆಡ್​ ಬಾಡಿ ಸಹ ಬಿಜೆಪಿಗೆ ಹೋಗುವುದಿಲ್ಲ: ಎಚ್​.ಸಿ.ಮಹದೇವಪ್ಪ

Thursday, 12.07.2018, 1:12 PM       No Comments

ಮೈಸೂರು: ನಾನು ಬಿಜೆಪಿಗೆ ಹೋಗುತ್ತೇನೆಂದು ಕೆಲವರು ಭಾವಿಸಿದ್ದಾರೆ. ಆದರೆ, ನಾನು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ. ನನ್ನ ಡೆಡ್ ಬಾಡಿ ಸಹ ಬಿಜೆಪಿಗೆ ಹೋಗುವುದಿಲ್ಲ ಎಂದು ಮಾಜಿ ಸಚಿವ ಡಾ.ಎಚ್​.ಸಿ.ಮಹದೇವಪ್ಪ ಹೇಳಿದ್ದಾರೆ.

ಮೈಸೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಬಿಜೆಪಿಗೆ ಹೋಗುತ್ತೇನೆಂದು ಪಿತೂರಿ ಮಾಡಲಾಗುತ್ತಿದೆ. ನಾನು ಬಿಜೆಪಿ ಸೇರುತ್ತೇನೆಂದು ಭಾವಿಸಿರುವುದು ಅವರ ಭ್ರಮೆ. ನಾನು ಕಾಂಗ್ರೆಸ್ ಮೂಲಕ ರಾಜಕೀಯ ಆರಂಭಿಸಿದ್ದೇನೆ. ಕಾಂಗ್ರೆಸ್​ನಲ್ಲೇ ನನ್ನ ರಾಜಕೀಯ ಅಂತ್ಯವಾಗಲಿದೆ. ಸಿದ್ಧಾಂತ ಇಟ್ಟುಕೊಂಡು ರಾಜಕೀಯಕ್ಕೆ ಬಂದಿದ್ದೇನೆ. ಅಧಿಕಾರಕ್ಕಾಗಿ ರಾಜಕೀಯಕ್ಕೆ ಬಂದಿಲ್ಲ ಎಂದರು.

ನನ್ನ ಸಿದ್ದರಾಮಯ್ಯ ನಡುವೆ ಸ್ನೇಹ ಹಳಸಿದೆ ಅಂತಾ ಹೇಳಿದವರು ಯಾರು? ಅವರೇನಾದರೂ ಹೇಳಿದ್ದಾರಾ? ನಾವು ಚೆನ್ನಾಗಿಯೇ ಇದ್ದೇವೆ. ನಮ್ಮ ಸಂಬಂಧ ಕೆಟ್ಟಿದೆ ಅಂಥ ಸುದ್ದಿ ಸೃಷ್ಟಿಸಿ ಲಾಭ ಮಾಡಿಕೊಳ್ಳುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ‌. ಆದರೆ, ಅದು ಆಗಲ್ಲ ಎಂದರು.

ನನ್ನ ಸೋಲಿಗೆ ಜೆಡಿಎಸ್ ಕಾರಣವಲ್ಲ. ಬದಲಿಗೆ ಬಿಜೆಪಿ ತಾನು ಗೆಲ್ಲಲು ಆಗದ ಜಾಗದಲ್ಲಿ ತನ್ನ ಮತಗಳನ್ನು ಜೆಡಿಎಸ್​ಗೆ ವರ್ಗಾವಣೆ ಮಾಡಿದ್ದೇ ಕಾರಣ ಎಂದು ಸೋಲಿನ ವಿಮರ್ಶೆ ಮಾಡಿದರು.

ಅಭಿವೃದ್ಧಿ ಮೇಲೆ ಜಾತಿ ಸವಾರಿ ಮಾಡಿತು. ನಮ್ಮ ಯೋಜನೆಗಳಿಗೆ ಜನ ಮನ್ನಣೆ ನೀಡಲೇ ಇಲ್ಲ. ನನ್ನ ಸೋಲಿಗಿಂತ ಸಿದ್ದರಾಮಯ್ಯ ಹಾಗೂ ಪಕ್ಷದ ಸೋಲು ನನಗೆ ಆಘಾತ ಮೂಡಿಸಿತು. ಇದರಿಂದ ಹೊರಬರಲು ನಮಗೆ ಒಂದೂವರೆ ತಿಂಗಳು ಬೇಕಾಯಿತು ಎಂದರು. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top