Thursday, 19th April 2018  

Vijayavani

ಬಿಜೆಪಿ ಕಚೇರಿಯಲ್ಲಿ ಅಮಿತ್‌ ಷಾ ಮೀಟಿಂಗ್ - ಸೋಶಿಯಲ್‌ ಮೀಡಿಯಾ ಬಗ್ಗೆ ಫುಲ್‌ ಮಾರ್ಕ್ಸ್‌ - ಎಚ್ಚರಿಕೆ ಹೆಜ್ಜೆ ಇಡಲು ಸಲಹೆ        ಒಂಟಿಸಲಗದ ಮನೆಗೆ ಬಂತು ಬಿ ಫಾರಂ ​​ - ಅಂಬಿ ಷರುತ್ತುಗಳಿಗೆ ಒಪ್ಪಿದ ಪರಂ - ಪಕ್ಷದ ನಡೆ ಬಗ್ಗೆ ರೆಬೆಲ್‌ಸ್ಟಾರ್‌ ಗರಂ        ಕೈ ಟಿಕೆಟ್​ ತಪ್ಪಿದ್ದಕ್ಕೆ ಶಶಿಕುಮಾರ್ ಅಸಮಾಧಾನ​ - ದೇವೆಗೌಡರ ಭೇಟಿಯಾದ ಕೊಲ್ಲೂರ ಕಾಳ - ಪದ್ಮನಾಭ ನಗರದ ನಿವಾಸದಲ್ಲಿ ಜೆಡಿಸ್​ ಸೇರ್ಪಡೆ        ಟಿಕೆಟ್​ಗಾಗಿ ಹೆಚ್ಚಿದ ಕಣ್ಣೀರಧಾರೆ - ಮಾಯಕೊಂಡದಲ್ಲಿ ಕಣ್ಣೀರಿಟ್ಟ ಮಾಜಿ ಶಾಸಕ - ತರೀಕೆರೆಯಲ್ಲಿ ಶಿವಶಂಕರಪ್ಪ ಭಾವುಕ        ಭವಾನಿ ಸೋಲಿಸಿ ಎಂದಿದ್ದು ನನ್ನನ್ನಲ್ಲ - ಕೈ ಅಭ್ಯರ್ಥಿ ವಿರುದ್ಧ ಮಾತನಾಡಿದ್ದಾರೆ - ಭವಾನಿ ವಿಡಿಯೋ ಬಗ್ಗೆ ಸಾ.ರಾ ಮಹೇಶ್‌ ಸ್ಪಷ್ಟನೆ        ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ - 6ನೇ ವೇತನ ಆಯೋಗದ ಶಿಫಾರಸು ಜಾರಿಗೆ ಗ್ರೀನ್​ಸಿಗ್ನಲ್ - ಚುನಾವಣಾ ಆಯೋಗದಿಂದ ಒಪ್ಪಿಗೆ       
Breaking News

ಒಡಕಿನ ರಾಜಕಾರಣಕ್ಕೆ ಸಿದ್ದರಾಮಯ್ಯ ಕೈ: ಎಚ್​ಡಿಕೆ

Monday, 19.03.2018, 6:39 PM       No Comments

ಚಿಕ್ಕಮಗಳೂರು: ಧರ್ಮ ವಿಭಜನೆಯ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಒಡಕಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಪಕ್ಷದ ಪ್ರಚಾರಕ್ಕಾಗಿ ಚಿಕ್ಕಮಗಳೂರಿಗೆ ಸೋಮವಾರ ಸಂಜೆ ಆಗಮಿಸಿದ ಅವರು, ಹೆಲಿಪ್ಯಾಡ್​​ನಲ್ಲಿ ಸುದ್ದಿಗಾರರ ಜತೆ ಮಾತನಾಡಿದರು. ಲಿಂಗಾಯತ ಧರ್ಮದ ವಿಚಾರವಾಗಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯಿಂದ ತರಾತುರಿಯಲ್ಲಿ ವರದಿ ತರಿಸಿಕೊಂಡಿರುವ ಸಿದ್ದರಾಮಯ್ಯ, ಅಷ್ಟೇ ಆತುರದಲ್ಲಿ ಕೇಂದ್ರಕ್ಕೆ ಶಿಫಾರಸು ಮಾಡಿದ್ದಾರೆ.
ಇದುವರೆಗೂ ಆ ವರದಿಯಲ್ಲಿ ಏನಿದೆ ಎಂಬುದರ ಬಗ್ಗೆ ಸಾರ್ವಜನಿಕರಿಗೆ ಮತ್ತು ಜನಪ್ರತಿನಿಧಿಗಳಿಗೆ ಗೊತ್ತಾಗಿಲ್ಲ. ಧರ್ಮ ಸೂಕ್ಷ್ಮತೆ ಇರುವ ವಿಚಾರವನ್ನು ಸಮಾಜದ ಹಿರಿಯರು ಸ್ವಾಮೀಜಿಗಳ ಸಮ್ಮುಖದಲ್ಲಿ ಚರ್ಚೆ ನಡೆಸಬೇಕಾಗಿತ್ತು ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟರು.
ಸರ್ಕಾರ ಜನರ ಸಮಸ್ಯೆಗಳನ್ನು ಬಗೆಹರಿಸುವ ಬದಲು ಧರ್ಮ ಒಡೆಯಲು ಕೈ ಹಾಕಿದ್ದು ಸರಿಯಲ್ಲ, ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಇದರ ಬಗ್ಗೆ ಅರಿವಾಗಲಿದೆ. ಪಶ್ಚಾತ್ತಾಪ ಪಡುವ ಸನ್ನಿವೇಶ ಸೃಷ್ಟಿಯಾಗಲಿದೆ ಎಂದರು.

Leave a Reply

Your email address will not be published. Required fields are marked *

Back To Top