Friday, 21st September 2018  

Vijayavani

ಸಿಎಂ ‘ದಂಗೆ’ ಹೇಳಿಕೆ ವಿರುದ್ಧ ಕೇಸರಿ ಗುಟುರು - ಡಿಜಿಪಿ ನೀಲಮಣಿ ರಾಜುಗೆ ಬಿಜೆಪಿ ದೂರು - ಸಂಜೆ 4.30ಕ್ಕೆ ಗವರ್ನರ್ ಭೇಟಿ​​​​        ರಾಜ್ಯಾದ್ಯಂತ ಭುಗಿಲೆದ್ದ ‘ದಂಗೆ’ ಉರಿ - ಕಲಬುರಗಿ, ಮಂಡ್ಯ, ಧಾರವಾಡ, ಕೊಡಗಿನಲ್ಲಿ ದಳ್ಳುರಿ        ಬ್ರದರ್ಸ್​​ ತಂಟೆಗೆ ಹೋಗ್ಬೇಡಿ, ವಿವಾದಾತ್ಮಕ ಹೇಳಿಕೆ ಕೊಡ್ಬೇಡಿ - ಸಾಫ್ಟ್​ ಪಾಲಿಟಿಕ್ಸ್ ಬಗ್ಗೆ ಡಿಕೆಶಿಗೆ ಸಿದ್ದು ಕ್ಲಾಸ್        ಕರ್ನಾಟಕದಲ್ಲಿ ನಮಗೆ ಅಧಿಕಾರ ಬೇಕು - ಇಲ್ದಿದ್ರೆ ಲೋಕಸಭೆ ಚುನಾವಣೆಯಲ್ಲಿ ಕಷ್ಟ ಕಷ್ಟ - ಪರಿಸ್ಥಿತಿ ನಿಭಾಯಿಸಲು ಸಿದ್ದುಗೆ ಸೂಚನೆ        ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ - ಅಪಹರಿಸಿದ್ದ ಮೂವರು ಪೊಲೀಸರ ಹತ್ಯೆಗೈದ ಕಿರಾತಕರು        ಓಡಿಶಾದಲ್ಲಿ ಡೆಯ್ ಚಂಡಮಾರುತದ ಅಬ್ಬರ - ಕಾಲಾಪುರಕ್ಕೆ ನುಗ್ಗಿದ ಡ್ಯಾಮ್ ನೀರು ನುಗ್ಗಿ ಪ್ರವಾಹ - ಬಿರುಗಾಳಿಗೆ ಜನರು ಕಂಗಾಲ್       
Breaking News

ಮಹದಾಯಿ ತೀರ್ಪಿನ ಕೂಲಂಕಷ ಅಧ್ಯಯನ ನಂತರ ಮುಂದಿನ ನಡೆ: ಸಿಎಂ ಕುಮಾರಸ್ವಾಮಿ

Tuesday, 14.08.2018, 6:32 PM       No Comments

ಬೆಂಗಳೂರು: ಮಹದಾಯಿ ವಿವಾದ ನ್ಯಾಯಾಧಿಕರಣವು ಮಹದಾಯಿ ನೀರು ಹಂಚಿಕೆಯ ಕುರಿತು ಶಿಫಾರಸನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು, ಅದರಲ್ಲಿರುವ ಅಂಶಗಳನ್ನು ಕೂಲಂಕಷವಾಗಿ ಅಧ್ಯಯನ ಮಾಡಿ ನಂತರ ಪ್ರತಿಕ್ರಿಯಿಸುವುದಾಗಿ ಮುಖ್ಯಮಂತ್ರಿ ಎಚ್‍.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ನಾನು ಈಗಾಗಲೇ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಹಾಗೂ ಕಾನೂನು ತಜ್ಞರೊಂದಿಗೆ ಈ ವಿಷಯ ಚರ್ಚಿಸಿದ್ದು, ನ್ಯಾಯಾಧಿಕರಣದ ತೀರ್ಪು 12 ಸಂಪುಟಗಳಷ್ಟಿದ್ದು, ಅದನ್ನು ಕೂಲಂಕಷವಾಗಿ ಅಧ್ಯಯನ ನಡೆಸಿದ ನಂತರ ಎಲ್ಲರೊಂದಿಗೆ ಸಮಾಲೋಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ತೀರ್ಪು ಸಮಾಧಾನ ತಂದಿದೆ
ಮಹದಾಯಿ ನ್ಯಾಯಾಧೀಕರಣದ ತೀರ್ಪು ವಿಚಾರವಾಗಿ ಡಿಸಿಎಂ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ನಾವು 36.೦4 ಟಿಎಂಸಿ ಅಡಿ ನೀರು ಕೇಳಿದ್ದೆವು. ಆದರೆ, 13.06 ಟಿಎಂಸಿ ಅಡಿ ನೀರು ನಮಗೆ ನೀಡುವ ತೀರ್ಪು ಬಂದಿದೆ. ನಮಗೆ ಇನ್ನೂ ಹೆಚ್ಚಿನ ನಿರೀಕ್ಷೆ ಇತ್ತು. ಒಟ್ಟಿನಲ್ಲಿ ತೀರ್ಪು ಸಮಾಧಾನ ತಂದಿದೆ ಎಂದಿದ್ದಾರೆ.

ತೀರ್ಪಿನ ಬಗ್ಗೆ ಗೋವಾದವರು ತೃಪ್ತಿ ಪಟ್ಟುಕೊಳ್ಳಬೇಕು. ಗೊಂದಲಗಳು ಬೇಡ ಎಂಬ ಕಾರಣಕ್ಕೆ ಪ್ರಧಾನಿ ಮಧ್ಯಪ್ರವೇಶಕ್ಕೆ ಒತ್ತಾಯಿಸಿದ್ದೆವು. ಇದೀಗ ನ್ಯಾಯಾಧಿಕರಣ ತೀರ್ಪು ಬಂದಿದೆ. ಮುಂದೆ ಏನೆಲ್ಲಾ ಮಾಡಬೇಕು ಎಂಬುದರ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top