Sunday, 24th September 2017  

Vijayavani

1. 3ನೇ ಮ್ಯಾಚ್‌ನಲ್ಲೂ ಆಸೀಸ್‌ ಉಡೀಸ್‌- ರೋಹಿತ್,ರಹಾನೆ,ಪಾಂಡ್ಯ ಬೊಂಬಾಟ್‌ ಆಟ- ಭಾರತಕ್ಕೆ ಸರಣಿ ವಶ 2. ದೆಹಲಿಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ- ಜಾವ್ಡೇಕರ್ ನೇತೃತ್ವದಲ್ಲಿ ಮೀಟಿಂಗ್‌- ತಡವಾಗಿ ದೆಹಲಿ ವಿಮಾನ ಏರಿದ ಈಶ್ವರಪ್ಪ 3. ಸಿದ್ದಾರ್ಥ್​ ಮನೆ ಮೇಲೆ ಐಟಿ ದಾಳಿ ಪ್ರಕರಣ- 650 ಕೋಟಿ ಮೌಲ್ಯದ ಅಕ್ರಮ ಆದಾಯ ಪತ್ತೆ- ದಿಗ್ವಿಜಯ ನ್ಯೂಸ್​ಗೆ ಐಟಿ‌ ಮೂಲಗಳ ಮಾಹಿತಿ 4. ವಿಶ್ವಸಂಸ್ಥೆಯಲ್ಲಿ ಮತ್ತೆ ಬಾಲ ಬಿಚ್ಚಿದ ಪಾಕಿಸ್ತಾನ- ಮಡಿಲಲ್ಲಿ ಕೆಂಡ ಇಟ್ಕೊಂಡು ಭಾರತದತ್ತ ವಾಗ್ಬಾಣ- ಇಂಡಿಯಾ ಉಗ್ರವಾದದ ತಾಯಿ ಅಂತಾ ಪಾಕ್ ಉದ್ಧಟತನ 5. ಕೋಕ್ ಸ್ಟುಡಿಯೋದಿಂದ ಸಂಗೀತ ಸಂಜೆ- ಪೆಪೋನ್ ಗಾಯನಕ್ಕೆ ಮನಸೋತ ಯುವಜನ- ಹುಚ್ಚಿದ್ದು ಕುಣಿಸಿದ ಯುವದಸರಾ
Breaking News :

ಬೆಂಗ್ಳೂರು ಬಿಟ್ಟು ಬಿಸಿಲ ನಗರಿ ಕಡೆ ಮುಖ ಮಾಡಿದ ಮಳೆರಾಯ

Thursday, 14.09.2017, 7:53 AM       No Comments

ಕಲಬುರಗಿ: ಬಿಸಿಲ ನಗರಿ ಕಲಬುರಗಿ ಜಿಲ್ಲೆಯಾದ್ಯಂತ ವರುಣನ ಆರ್ಭಟ ಜೋರಾಗಿದೆ. ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ನಗರದ ಲಾಡಗೇರಿ ಕ್ರಾಸ್, ರೋಜಾ ಕಾಲೋನಿ, ಬಸ್​ ನಿಲ್ದಾಣದ ರಸ್ತೆ, ಸಿದ್ದಪಾಷಾ ದರ್ಗಾ ರೋಡ್​ಗಳು ಜಲಾವೃತಗೊಂಡಿದ್ದು ಸಂಪೂರ್ಣ ಕೆರೆಯಂತಾಗಿದೆ. ಇದರಿಂದ ವಾಹನ ಸವಾರರು ಪರದಾಡಿದರು.

ಇನ್ನೂ ಕೆಲವು ಕಡೆ ಮರಗಳು ಧರೆಗುರುಳಿದ್ದು, ಭಾರಿ ಮಳೆ ಹಿನ್ನೆಲೆ ಪಾಲಿಕೆ ನೀಡಿದ ಮಾಹಿತಿ ಮೇರೆಗೆ ಎಸ್​ಪಿ ಶಶಿಕುಮಾರ್​ ಸಿಟಿ ರೌಂಡ್​ ನಡೆಸಿದರು. ಅಂದಹಾಗೆ ಬೆಂಗಳೂರಿನ ಜನರನ್ನು ಕೆಲಕಾಲ ಕಾಡಿದ ಮಳೆರಾಯ ಸ್ವಲ್ಪ ವಿರಾಮ ತೆಗೆದುಕೊಂಡಿದ್ದಾನೆ. ಮತ್ತೆ ಆಗಮನದ ಆತಂಕದಲ್ಲಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top