Thursday, 19th July 2018  

Vijayavani

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ - ಕೇರಳ ಸರ್ಕಾರದಿಂದ ಗ್ರೀನ್​ಸಿಗ್ನಲ್        ಕೇಂದ್ರದಿಂದ ನೆರವಿನ ಮಹಾಪೂರ - ಕೃಷಿ ಯೋಜನೆ, ಮೆಗಾ ಡೈರಿ ಆರಂಭಕ್ಕೆ 900 ಕೋಟಿ ನೆರವು        ಸ್ಮಶಾನ ಜಾಗದ ವಿಚಾರವಾಗಿ ಜಟಾಪಟಿ - ಎರಡು ಗುಂಪುಗಳ ಮಧ್ಯೆ ಮಾರಾಮಾರಿ - ಘರ್ಷಣೆಯಲ್ಲಿ 50 ಮಂದಿಗೆ ಗಾಯ        ಕೃಷ್ಣಾ ನದಿಯಲ್ಲಿ ಪ್ರವಾಹದ ನರ್ತನ - ಯಾದಗಿರಿಯ ನೀಲಕಂಠನದೊಡ್ಡಿ ಗ್ರಾಮಕ್ಕೆ ಜಲದಿಗ್ಬಂಧನ - ಗ್ರಾಮಸ್ಥರು ತಲ್ಲಣ        ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಜಿಟಿಡಿ - ಬಳ್ಳಾರಿಗೆ ಕಳಿಸೋದಾಗಿ ಅಧಿಕಾರಿಗಳಿಗೆ ವಾರ್ನಿಂಗ್- ಚಪ್ಪಾಳೆ ಹೊಡೆದ ಸ್ಟೂಡೆಂಟ್ಸ್        ಎಲ್ಲೆಡೆ ಕೇಳಿಬರ್ತಿದೆ ಧೋನಿ ನಿವೃತ್ತಿ ವಿಷಯ - ಲೀಡ್ಸ್​​ನಲ್ಲಿ ಅಂಪೈರ್ ಬಳಿ ಬಾಲ್ ಪಡೆದಿದ್ದೇಕೆ - ಕ್ರಿಕೆಟಿಗೆ ಗುಡ್​​ಬೈ ಹೇಳ್ತಾರಾ ಮಾಹಿ       
Breaking News

ಕರಾವಳಿಯಾದ್ಯಂತ ಧಾರಾಕಾರ ಮಳೆ: ಗೋಡೆ ಕುಸಿದು ಇಬ್ಬರು ಸಾವು

Saturday, 07.07.2018, 8:55 AM       No Comments

ಮಂಗಳೂರು : ಕರಾವಳಿಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ತಡೆಗೋಡೆ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಹೆಬ್ಬಾರಬೈಲಿನಲ್ಲಿ ತಡರಾತ್ರಿ ಮನೆಯಲ್ಲಿ ಮಲಗಿದ್ದ ಅಜ್ಜಿ ಪಾರ್ವತಿ(65) ಮತ್ತು ಮೊಮ್ಮಗ ಧನುಷ್(11) ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಪುತ್ತೂರು ಸಹಾಯಕ ಕಮಿಷನರ್ ಎಚ್.ಕೃಷ್ಣಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎರಡನೇ ದಿನವೂ ಮುಂದುವರಿದ ಮಳೆ

ಉಡುಪಿ, ಕುಂದಾಪುರ, ಕಾರ್ಕಳ, ಬೈಂದೂರು ತಾಲೂಕಿನಾದ್ಯಂತ ಎಡೆಬಿಡದೆ ಮಳೆ ಸುರಿಯುತ್ತಿದ್ದು, ವಾಟ್ಸ್‌ಆ್ಯಪ್‌ನಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಣೆಯಾಗಿರುವ ಕುರಿತು ಸಂದೇಶ ವೈರಲ್ ಆಗಿದೆ. ಆದರೆ ಜಿಲ್ಲಾಡಳಿತ ಯಾವುದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಲ್ಲ.
ಈ ಕುರಿತು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸ್ಪಷ್ಟನೆ ನೀಡಿದ್ದು, ಸ್ಥಳೀಯ ಪರಿಸ್ಥಿತಿ ನೋಡಿಕೊಂಡು ರಜೆ ಘೋಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಈಗಾಗಲೇ ಬಿಇಒಗಳಿಗೆ ರಜೆ ಘೋಷಣೆ ಅಧಿಕಾರ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕೊಡಗಿನಲ್ಲಿ ಮಳೆ ಅಬ್ಬರ

ಕೊಡಗು ಜಿಲ್ಲೆಯಲ್ಲಿಯೂ ವರುಣನ ಅಬ್ಬರ ಮುಂದುವರಿದಿದ್ದು, ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಕೊಡಗು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top