Sunday, 19th August 2018  

Vijayavani

ರಣಚಂಡಿ ಮಳೆಗೆ ಕುಸಿಯುತ್ತಿದೆ ಕೊಡಗು - ಮತ್ತೆ ಜೋರಾಯ್ತು ಮಳೆ ಅಬ್ಬರ - ಮುಕ್ಕೋಡ್ಲು ಗ್ರಾಮದಲ್ಲಿ 80 ಜನರ ರಕ್ಷಣೆ        ಕ್ಷಣ ಕ್ಷಣಕ್ಕೂ ಆತಂಕ, ಬಿರುಕು ಬಿಟ್ಟ ಧರೆ - ಪ್ರವಾಹದಲ್ಲಿ ಕೊಚ್ಚಿ ಹೋಗ್ತಿದೆ ಬೆಟ್ಟ,ಗುಡ್ಡ - ಕಣ್ಮುಂದೆಯೇ ನೆಲಸಮ ವಾಗ್ತಿದೆ ಬದುಕು        ಕೊಡಗಲ್ಲಿ ಇಂದು ಸಿಎಂ ಎಚ್​ಡಿಕೆ ಪ್ರವಾಸ - ಸಂತ್ರಸ್ಥರ ನೋವು ಆಲಿಸಲಿರುವ ಬಿಎಸ್​ವೈ - ನಿರಾಶ್ರಿತರಿಗೆ ನೆರವು ಅಂದ್ರು ರೇವಣ್ಣ        ಸಂತ್ರಸ್ಥರಿಗೆ ಸ್ಯಾಂಡಲ್​ವುಡ್​​​​​​​​​ ನೆರವಿನ ಹಸ್ತ - ಅಗತ್ಯವಸ್ತುಗಳ ಪೂರೈಸಿದ ಸ್ಟಾರ್ಸ್​​​​​​​​​​​ - ಕೈಲಾದ ಸಹಾಯ ಮಾಡ್ತಿದ್ದಾರೆ ಕರುನಾಡ ಜನರು        ಕೇರಳದಲ್ಲಿ ಕಡಿಮೆಯಾಗ್ತಿಲ್ಲ ನೆರೆ ಅಬ್ಬರ - ಸಾವಿನ ಸಂಖ್ಯೆ 357ಕ್ಕೇ ಏರಿಕೆ - ದೇವರನಾಡಿಗೆ ಹರಿದು ಬರ್ತಿದೆ ನೆರವಿನ ಮಹಾಪೂರ        ಭಾರತ - ಇಂಗ್ಲೆಂಡ್​ ನಡುವಿನ 3ನೇ ಟೆಸ್ಟ್​​​​ ಪಂದ್ಯ - ಬೃಹತ್ ಮೊತ್ತದತ್ತ ಟೀಂ ಇಂಡಿಯಾ - ಶತಕದ ಗಡಿಯಲ್ಲಿ ಎಡವಿದ ಕೊಹ್ಲಿ       
Breaking News

ಗಣಿ ನಾಡು ಬಳ್ಳಾರಿಗೆ ತಂಪೆರೆದ ನಿರಂತರ ಮುಂಗಾರು

Friday, 15.09.2017, 11:01 AM       No Comments

ಬಳ್ಳಾರಿ: ಸುಡು ಸುಡುವ ಬಳ್ಳಾರಿ ಜಿಲ್ಲೆಯಲ್ಲೂ ಈ ಬಾರಿ ವರುಣನ ಅಬ್ಬರ ಜೋರಾಗಿದೆ. ಮುನಿಸಿಕೊಂಡಿದ್ದ ಮಳೆರಾಯನ ಆಗಮನದಿಂದ ಮುನಿಸಿಕೊಂಡಿದ್ದ ಗಣಿ-ಗಡಿ ನಾಡಿನ ಮಂದಿ ಪುಲ್​ ಖುಷ್​ ಆಗಿದ್ದಾರೆ.

ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಸತ್ಯನಾರಾಯಣ ಪೇಟೆಯ ಅಂಡರ್‌ ಪಾಸ್‌ ಬ್ರಿಡ್ಜ್‌ ಜಲಾವೃತಗೊಂಡಿದೆ. ಕೆಎಚ್‌ಬಿ ಕಾಲನಿ ಸೇರಿ ಹಲವೆಡೆ ಮನೆಗಳಿಗೆ ನುಗ್ಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

ಏಳಬಿಂಚಿ ಗ್ರಾಮದ ಬಳಿ ಎಚ್ಎಲ್‌ಸಿ ಕೆನಾಲ್‌ ಮೂಲಕ ಮಳೆ ನೀರು ಹರಿದು ಹೋಗುತ್ತಿದ್ದು, ಅಪಾರ ಪ್ರಮಾಣದ ಬೆಳೆ ಹಾನಿ ಆತಂಕ ಎದುರಾಗಿದೆ. ಕೆನಾಲ್‌ ಒಡೆಯುವ ಸಾಧ್ಯತೆಗಳಿದ್ದರೂ ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬ್ಯಾಲಾಳು, ಕಡಲಬಾಳು, ಬನ್ನಿಗೋಳ ಗ್ರಾಮಗಳಲ್ಲಿ ಭಾರಿ ಮಳೆಯಿಂದ ಬೆಳೆ ಹಾನಿ ಸಂಭವಿಸಿದ್ರೆ, ಸಿರುಗುಪ್ಪದ ಕರೂರು ಬಳಿ ಭತ್ತದ ಪೈರು ಜಲಾವೃತಗೊಂಡಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top