Saturday, 20th October 2018  

Vijayavani

ಚೀಪ್ ಮೆಂಟಾಲಿಟಿ ನನಗಿಲ್ಲ - ಇದರ ಹಿಂದೆ ಕೈವಾಡ ಇರಬಹುದು - ನಟಿ ಶ್ರುತಿ ಹರಿಹರನ್ ಆರೋಪ ತಳ್ಳಿಹಾಕಿದ ಅರ್ಜುನ್ ಸರ್ಜಾ        ಸ್ಯಾಂಡಲ್​ವುಡ್​​ನಲ್ಲಿ ಮೀ ಟೂ - ನಾಳೆ ಸುದ್ದಿಗೋಷ್ಠಿಯಲ್ಲಿ ಶ್ರುತಿ ಹಾಕ್ತಾರಾ ಬಾಂಬ್ - ನಟಿ ವಿರುದ್ಧ ಗುಡುಗಿದ ಅರ್ಜುನ್ ಸರ್ಜಾ ಅತ್ತೆ        ಧರ್ಮ ವಿಚಾರದಲ್ಲಿ ಡಿಕೆಶಿ ಕ್ಷಮೆಯಾಚನೆಗೆ ಸಿದ್ದು ಸಿಟ್ಟು - ಒಂದೇ ವೇದಿಯಲ್ಲಿದ್ರೂ ಮುಖ ಮುಖ ನೋಡಲಿಲ್ಲ - ಜಂಟಿ ಸುದ್ದಿಗೋಷ್ಠಿಯಲ್ಲಿ ನಾಯಕರ ಮಹಾ ಮುನಿಸು        ಜೆಡಿಎಸ್‌, ಕಾಂಗ್ರೆಸ್‌ನ ಸುದ್ದಿಗೋಷ್ಠಿ - ಕಾಂಗ್ರೆಸ್‌, ಜೆಡಿಎಸ್‌ ಜಂಟಿ ಸಮರಕ್ಕೆ ಬಿಜೆಪಿ ವ್ಯಂಗ್ಯ- ಟ್ವೀಟ್‌ ಮೂಲಕ ಟಾಂಗ್‌        ಒಂದೇ ಮನಸ್ಸು ಎರಡು ದೇಹ ಅಂದ್ರು ಸಿಎಂ - ಈ ಜನ್ಮದಲ್ಲಿ ಗೌಡ್ರು-ಸಿದ್ದು ಒಂದಾಗಲ್ಲ ಅಂದ್ರು ಕಾರಜೋಳ - ದೋಸ್ತಿಗಳಿಗೆ ಬಿಜೆಪಿ ನಾಯಕರ ಟಕ್ಕರ್        ಗದಗಿನ ತೋಂಟದಾರ್ಯ ಶ್ರೀಗಳು ಲಿಂಗೈಕ್ಯ - ಹೃದಯಾಘಾತದಿಂದ ಗದಗ್‌ನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶ - ನಾಳೆ ಗದಗದಲ್ಲಿ ಅಂತ್ಯಕ್ರಿಯೆ       
Breaking News

ಮೇಸ್ತಾ ಸಾವು ಪ್ರಕರಣ: ಉದ್ವಿಗ್ನ ಕುಮಟಾದಲ್ಲಿ ಐಜಿಪಿ ಕಾರಿಗೆ ಬೆಂಕಿ

Monday, 11.12.2017, 3:45 PM       No Comments

<< ಹಿಂದು ಕಾರ್ಯಕರ್ತನ ಹತ್ಯೆ ಖಂಡಿಸಿ ಕರೆ ನೀಡಿದ್ದ ಬಂದ್ ವೇಳೆ ದುರ್ಘಟನೆ >>

ಕುಮಟಾ: ಹೊನ್ನಾವರದ ಹಿಂದು ಕಾರ್ಯಕರ್ತ ಪರೇಶ್ ಮೇಸ್ತಾ ಅನುಮಾನಾಸ್ಪದ ಸಾವು ಖಂಡಿಸಿ ಬಿಜೆಪಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಸೋಮವಾರ ನಡೆಸುತ್ತಿದ್ದ ಪ್ರತಿಭಟನೆ ಉಗ್ರರೂಪ ಪಡೆದುಕೊಂಡಿದೆ. ಪಶ್ಚಿಮ ವಲಯ ಐಜಿಪಿ ಹೇಮಂತ್ ನಿಂಬಾಳ್ಕರ್ ಕಾರಿಗೆ ಬೆಂಕಿ ಹಚ್ಚಲಾಗಿದೆ.

ಕುಮಟಾ ಮತ್ತು ಕಾರವಾರ ಬಂದ್​ ಕರೆ ನೀಡಲಾಗಿತ್ತು. ಕುಮಟಾದ ಮಣಕಿ ಮೈದಾನದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನರು ಸೇರಿ ಪರೇಶ್​ ಮೇಸ್ತಾ ಹತ್ಯೆ ಆರೋಪಿಗಳನ್ನು ಬಂಧಿಸಿ ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಉದ್ರಿಕ್ತ ಪ್ರತಿಭಟನಾಕಾರರು ಐಜಿಪಿ ಕಾರಿಗೆ ಬೆಂಕಿ ಹಚ್ಚಿದ್ದಾರೆ.

ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ಲಾಠಿ ಚಾರ್ಜ್​ ಮಾಡಿದ್ದಾರೆ. ಈ ವೇಳೆ ಐಜಿಪಿ ಕಾರು ಚಾಲಕ ಸುಂದರರಾಜ್​ಗೆ ಗಂಭೀರ ಗಾಯವಾಗಿದೆ. ಅಲ್ಲದೆ, ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ಮಾಡುತ್ತಿದ್ದ ವೇಳೆ ಕೆಲಕಾಲ ವಾಹನ ಸಂಚಾರಗಳಿಗೆ ತೊಂದರೆ ಉಂಟಾಯಿತು.

ಕಳೆದ ಬುಧವಾರ ಕಾಣೆಯಾಗಿದ್ದ ಹಿಂದು ಕಾರ್ಯಕರ್ತ ಪರೇಶ್ ಮೇಸ್ತಾ, ಹೊನ್ನಾವರ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದ. ಮೇಸ್ತಾ ಕೊಲೆ ವಿಷಯ ಹರಡುತ್ತಿದ್ದಂತೆ ಕಾರವಾರದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿತ್ತು. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top