Sunday, 15th July 2018  

Vijayavani

ಬಾಲಕನ ವಿಡಿಯೋ ಹಿಂದೆ ಬಿಜೆಪಿ ಕೈವಾಡ ಆರೋಪ - ವಿಡಿಯೋ ತನಿಖೆಗೆ ಸದಾನಂದಗೌಡ ಆಗ್ರಹ - ರಾಜಕಾರಣಿಗಳ ಆಟಕ್ಕೆ ಕೊಡವರ ಆಕ್ರೋಶ        26 ವರ್ಷ ಲಿಂಗಾಯತರೇ ರಾಜ್ಯ ಆಳಿದ್ದಾರೆ - ಕುಮಾರಸ್ವಾಮಿ ಸಿಎಂ ಆಗಿ 2 ತಿಂಗಳಾಗಿದೆ - ಉತ್ತರ ಕರ್ನಾಟಕ ನಿರ್ಲಕ್ಷ್ಯ ಆರೋಪಕ್ಕೆ ದೇವೇಗೌಡ ತಿರುಗೇಟು        ಕೊನೆಗೂ ಶಿರಾಡಿ ಘಾಟ್‌ ಲೋಕಾರ್ಪಣೆ - ವಾಸ್ತು ಪ್ರಕಾರ ರೇವಣ್ಣ ಉದ್ಘಾಟನೆ - ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ        ಮಟನ್ ಬಿರಿಯಾನಿ, ಚಿಕನ್ ಚಾಪ್ಸ್, ಬೋಟಿ ಗೊಜ್ಜು, ಮೊಟ್ಟೆ - 25 ಸಾವಿರ ಮಂದಿಗೆ ಭರ್ಜರಿ ಬಾಡೂಟ - ಚಾಮುಂಡೇಶ್ವರಿ ಕ್ಷೇತ್ರದ ಜನರಿಗೆ ಜಿಟಿಡಿ ಕೃತಜ್ಞತೆ        ಒಂದು ದೇಶ ಒಂದೇ ಚುನಾವಣೆ - ಮೋದಿ ಪರಿಕಲ್ಪನೆಗೆ ಸೂಪರ್‌ಸ್ಟಾರ್‌ ಬೆಂಬಲ - ಹಣ, ಸಮಯ ಉಳಿತಾಯ ಎಂದ ರಜನಿ        ಉಕ್ಕಿಹರಿಯುತ್ತಿರೋ ಕೃಷ್ಣೆ - ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ - ಇತ್ತ ತಮಿಳುನಾಡಿನಲ್ಲಿ ಕಾವೇರಿ ಭೋರ್ಗರೆತ       
Breaking News

ಶೋಪಿಯಾನ್​ ಎನ್​ಕೌಂಟರ್​: ಓರ್ವ ಹಿಜ್ಬುಲ್​ ಉಗ್ರ ಸೆರೆ

Sunday, 10.09.2017, 10:17 AM       No Comments

ಶ್ರೀನಗರ: ಜಮ್ಮು ಕಾಶ್ಮೀರದ ಶೋಫಿಯಾನ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಸೇನಾಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರರನ್ನು ಜೀವಂತವಾಗಿ ಸೆರೆಹಿಡಿಯಲಾಗಿದೆ.

ಬಂಧಿತ ಉಗ್ರನನ್ನು ಆದಿಲ್‌ ಎಂದು ಗುರುತಿಸಲಾಗಿದ್ದು, ಈತ ಇತ್ತೀಚೆಗಷ್ಟೇ ಹಿಜ್ಬುಲ್‌ ಮುಜಾಹಿದ್ದೀನ್‌ ಸಂಘಟನೆಗೆ ಸೇರಿದ್ದ ಎನ್ನಲಾಗಿದೆ. ಮತ್ತೊರ್ವ ಉಗ್ರ ತಾರಿಕ್‌ ಅಹ್ಮದ್‌ ಸೇನಾಪಡೆಯ ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿಗಾಗಿ ವಿಜಯವಾಣಿ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಶೋಫಿಯಾನ್​ನ ಬಾರ್ಬೌ ಗ್ರಾಮದಲ್ಲಿ ಮೂವರು ಉಗ್ರರು ಅಡಗಿದ್ದಾರೆ ಎಂಬ ಮಾಹಿತಿಯನ್ನರಿತು ಪೊಲೀಸರು ಮತ್ತು ಸೇನಾಪಡೆ ಜಂಟಿ ಕಾರ್ಯಾಚರಣೆ ನಡೆಸಿತ್ತು. ಸದ್ಯ ಕಾರ್ಯಾಚರಣೆ ಮುಂದುವರಿದಿದೆ.

ನಾಲ್ಕು ದಿನಗಳ ಪ್ರವಾಸಕ್ಕಾಗಿ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿದ್ದಾರೆ. ಇಂದು ಅವರು ಭದ್ರತಾ ಪಡೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಿದ್ದಾರೆ. ಸಿಂಗ್‌ ಭೇಟಿ ನೀಡಲಿರುವ ಸ್ಥಳದಿಂದ ಕೇವಲ ಕಿಲೋಮೀಟರ್‌ ಅಂತರದಲ್ಲಿ ನಿನ್ನೆ ಶನಿವಾರವಷ್ಟೇ ಪೊಲೀಸರ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಓರ್ವ ಪೇದೆ ಮೃತಪಟ್ಟಿದ್ದ ಎಂದು ಸೇನಾ ಮೂಲಗಳು ತಿಳಿಸಿವೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top