Sunday, 21st October 2018  

Vijayavani

ಚಡಚಣ ಸೋದರರ ಹತ್ಯೆ ಪ್ರಕರಣ-ಸಿಪಿಐ ಅಸೋದೆ 10 ದಿನ ಕಸ್ಟಡಿಗೆ-ಸಂಬಂಧಿಕರ ಮೇಲೂ ದೂರು ದಾಖಲು        ಸಿಸಿಬಿಯಿಂದ ಮುತ್ತಪ್ಪ ರೈಗೆ 8 ಗಂಟೆ ಡ್ರಿಲ್​-ಸೂಕ್ತ ದಾಖಲೆಗಳಿಂದ ಮಾಜಿ ಡಾನ್​​ ಬಚಾವ್​-ಇಂದು ಪೊಲೀಸರಿಂದ ಗನ್​​ಮ್ಯಾನ್​​ಗಳ ವಿಚಾರಣೆ        ಆ್ಯಕ್ಷನ್​​​ಕಿಂಗ್​​​ ವಿರುದ್ಧ ಶೃತಿ ಹರಿಹರನ್​ ಮೀಟು ಏಟು-ನಟಿ ವಿರುದ್ಧ ಸರ್ಜಾ ಫ್ಯಾಮಿಲಿ ಟಾಕ್​​ಫೈಟ್​​-ಆರೋಪಕ್ಕೆ ಸ್ಪಷ್ಟನೆ ನೀಡಲು ಇಂದು ಪ್ರೆಸ್​​ಮೀಟ್​​​        ಸಂಸದರ ನಿಧಿ ಹೊಡೆಯಲು ಮೆಗಾ ಪ್ಲಾನ್​-ನಕಲಿ ಲೆಟರ್​​​​​ಹೆಡ್​​​ ಮೂಲಕ ಲಕ್ಷ ಲಕ್ಷ ಗುಳುಂ-26 ಲಕ್ಷ ನುಂಗಿದ ಭೂಪ ಪೊಲೀಸರ ವಶಕ್ಕೆ        ರಂಗೇರಿತು ಉಪಚುನಾವಣೆ ಅಖಾಡ-ಇಂದು ಪಂಚ ಕ್ಷೇತ್ರಗಳಲ್ಲೂ ನಾಯಕರ ಪ್ರಚಾರ-ದೋಸ್ತಿಗೆ ಹುರುಪು ತಂದ ಗುರು-ಶಿಷ್ಯರ ಮಿಲನ        ಮಡಿಕೇರಿ ಸಂತ್ರಸ್ತರಿಗೆ ಮಾದರಿ ಮನೆಗಳ ನಿರ್ಮಾಣ-5 ರಿಂದ 10 ಲಕ್ಷದೊಳಗೆ ಮೂರು ರೀತಿಯ ಮನೆ-ಜನರು ಕೇಳಿದ ಮನೆ ಎರಡು ತಿಂಗಳೊಳಗೆ ರೆಡಿ       
Breaking News

ಮಾಜಿ ಸಚಿವ ಈಟಿ ಶಂಭುನಾಥ ನಿಧನ

Thursday, 09.08.2018, 5:18 PM       No Comments

ಹೂವಿನಹಡಗಲಿ (ಬಳ್ಳಾರಿ): ಮಾಜಿ ಸಚಿವ ಈಟಿ ಶಂಭುನಾಥ (77) ಗುರುವಾರ ಮಧ್ಯಾಹ್ನ ಬೆಂಗಳೂರಿನ ಸೆಂಟ್‌ಜಾನ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕುರುಬ ಸಮುದಾಯದವರಾದ ಈಟಿ ಶಂಭುನಾಥ, 1941ರ ಡಿಸೆಂಬರ್ 23ರಂದು ಜನಿಸಿದರು. 1967-68ರಲ್ಲಿ ಬೆಂಗಳೂರಿನ ವಿಶ್ವೇಶ್ವರಯ್ಯ ಇಂಜಿನೀಯರಿಂಗ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದರು. 1970-73ರ ವರೆಗೆ ಬಳ್ಳಾರಿ ಮಾರ್ಕೆಟ್ ಕಮಿಟಿ ನಿರ್ದೇಶಕರಾಗಿ, 1973-1978ರವರೆಗೆ ಹಗರಿಬೊಮ್ಮನಹಳ್ಳಿ ಮಾರ್ಕೆಟ್ ಕಮಿಟಿ ಉಪಾಧ್ಯಕ್ಷರಾಗಿ, 1973-87ರ ವರೆಗೆ ಹೂವಿನಹಡಗಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 1989ರಲ್ಲಿ ಎಂ.ಪಿ.ಪ್ರಕಾಶ್ ವಿರುದ್ಧ ವಿಧಾನಸಭೆಗೆ ಸ್ಪರ್ಧಿಸಿ ಜಯಗಳಿಸಿದ್ದರು. ನಂತರ ಬಂಗಾರಪ್ಪನವರ ಮಂತ್ರಿಮಂಡಲದಲ್ಲಿ ಅರಣ್ಯ ಇಲಾಖೆ ಸಚಿವರಾಗಿದ್ದರು.

1992-93 ರಲ್ಲಿ ಎಸ್.ಎಂ.ಕೃಷ್ಣ ಉಪಮುಖ್ಯಮಂತ್ರಿ ಆಗಿದ್ದಾಗ ತಾಲೂಕಿನ ರೈತ ಜೀವನಾಡಿ ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಶಂಕುಸ್ಥಾಫನೆ ನೆರವೇರಿಸುವಲ್ಲಿ ಇವರು ಪ್ರಮುಖರಾಗಿದ್ದರು. ಕಾಗಿನೆಲೆ ಕನಕಗುರುಪೀಠದ ಸಂಸ್ಥಾಪನೆ ರೂವಾರಿಗಳೂ ಆಗಿದ್ದ ಇವರು, ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದರು. ಪಟ್ಟಣದಲ್ಲಿ ಶುಕ್ರವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರಿಗೆ ಇಬ್ಬರು ಗಂಡು ಮಕ್ಕಳು, ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ.

Leave a Reply

Your email address will not be published. Required fields are marked *

Back To Top