Saturday, 18th August 2018  

Vijayavani

ಭಾರೀ ಮಳೆಗೆ ತತ್ತರಿಸಿದ ಕೇರಳದಲ್ಲಿ ಮೋದಿ ವೈಮಾನಿಕ ಸಮೀಕ್ಷೆ: ಐನೂರು ಕೋಟಿ ನೆರವು ಘೋಷಣೆ        ಕೊಡಗಿಗೆ ಮಳೆ ಸಂಕಷ್ಟ: ಹಾನಿ ಬಗ್ಗೆ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿಗೆ ಮುಖ್ಯಕಾರ್ಯದರ್ಶಿ ವರದಿ        ಕೊಡಗಿನ ಗೋಣಿಕೊಪ್ಪದಲ್ಲಿ ಮಳೆಯ ಅಬ್ಬರಕ್ಕೆ ಕುಸಿದ ಮನೆ: ನಾಲ್ಕು ಮಂದಿ ದುರ್ಮರಣ        ಚಾರ್ಮಾಡಿ ಘಾಟ್​​ನ ತಿರುವಿನಲ್ಲಿ ಕೆಟ್ಟು ನಿಂತ ವಾಹನ: ಧರ್ಮಸ್ಥಳ ಮಾರ್ಗದಲ್ಲಿ ವಿಪರೀತ ಟ್ರಾಫಿಕ್​ ಜಾಮ್        ಅರಕಲಗೂಡನಲ್ಲಿ 200 ಮನೆಗಳು ಜಲಾವೃತ: ದ್ವೀಪದಂತಾದ ರಾಮನಾಥಪುರ, ಮುಳುಗಿದ ನಿಮಿಷಾಂಭ ದೇಗುಲ       
Breaking News

ಇಲ್ಲ ಸಲ್ಲದ ಹೇಳಿಕೆ ಕೊಟ್ಟವರನ್ನು ಬಿಡಲಾರೆ

Sunday, 22.07.2018, 5:25 PM       No Comments

ದೆಹಲಿ: ಪಕ್ಷದ ವಿರುದ್ಧವೇ ಮಾತನಾಡಿ ಪಕ್ಷದ ಮೇಲೆ ವಿವಾದಗಳನ್ನು ಎಳೆದು ತರುವ ನಾಯಕರ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಗರಂ ಆಗಿದ್ದಾರೆ. ಸಲ್ಲದ ಹೇಳಿಕೆಗಳನ್ನು ನೀಡಿದರೆ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿರುವ ಅವರು, “ನಾನು ರಾಜಕೀಯದಲ್ಲಿ ಅತಿ ದೊಡ್ಡ ಹೋರಾಟದಲ್ಲಿ ತೊಡಗಿದ್ದೇನೆ. ಪಕ್ಷದ ವೇದಿಕೆಯಲ್ಲಿ ಯಾರು ಏನು ಬೇಕಾದರೂ ಮಾತನಾಡುವ ಅಧಿಕಾರ ನಾಯಕರಿಗೆ ಇದೆ. ಆದರೆ ಪಕ್ಷದ ವೇದಿಕೆಯಿಂದ ಹೊರಗೆ ಇಲ್ಲ ಸಲ್ಲದ ಹೇಳಿಕೆ ನೀಡಿದರೆ, ಆ ಹೇಳಿಕೆ ನನ್ನ ಹೋರಾಟಕ್ಕೆ ಅಡ್ಡಿಯಾದರೆ ಯಾವುದೇ ಕ್ರಮ ಕೈಗೊಳ್ಳಲು ನಾನು ಹಿಂದೆ ಮುಂದೆ ನೋಡುವುದಿಲ್ಲ,” ಎಂದು ರಾಹುಲ್​ ಗಾಂಧಿ ಹೇಳಿದ್ದಾರೆ.

ಕರ್ನಾಟಕದಲ್ಲಿ ನಿನ್ನೆಯಷ್ಟೇ ನಡೆದಿದ್ದ ಕೆಪಿಸಿಸಿ ಪದಾಧಿಕಾರಿಗಳ ಮತ್ತು ಜಿಲ್ಲಾ ಅಧ್ಯಕ್ಷರ ಸಭೆಯಲ್ಲಿ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ ವೇಣುಗೋಪಾಲ್​ ಅವರೂ ಕೂಡ ಇದೇ ಎಚ್ಚರಿಕೆಯನ್ನೇ ಪಕ್ಷದ ನಾಯಕರಿಗೆ ನೀಡಿದ್ದರು. ಪಕ್ಷದಿಂದ ಹೊರಗೆ ಯಾರೂ ಮಾತನಾಡಬಾರದು. ಮಾತನಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದ್ದರು.

ಇದನ್ನೂ ಓದಿ: ರಾಜ್ಯ ಕಾಂಗ್ರೆಸ್​ಗೆ ವೇಣು ಕೊಟ್ಟ ಆ ಸೂಚನೆ ಏನು?

ಮೈತ್ರಿ ಸರ್ಕಾರದ ವಿರುದ್ಧ ಪಕ್ಷದ ನಾಯಕರೇ ಹೇಳಿಕೆ ನೀಡುತ್ತಿರುವುದರಿಂದ ಪಕ್ಷಕ್ಕೆ ಮತ್ತು ಸರ್ಕಾರದ ವರ್ಚಸ್ಸಿಗೆ ದಕ್ಕೆಯಾಗುತ್ತಿರುವುದರ ಹಿನ್ನೆಲೆಯಲ್ಲಿ ವೇಣುಗೋಪಾಲ್​ ಅವರು ಈ ಸೂಚನೆ ನೀಡಿದ್ದರು. ಇದಕ್ಕೂ ಹಿಂದೆ ಡಿ.ಕೆ ಶಿವಕುಮಾರ್​ ಅವರು ಇದೇ ರೀತಿಯ ಮನವಿಯನ್ನು ರಾಜ್ಯ ನಾಯಕರಿಗೆ ಮಾಡಿದ್ದರು. “ಮಾತನಾಡುವವರೆಲ್ಲ ಮಾತನಾಡಿ ಮುಗಿಸಿದ್ದಾರೆ. ಇನ್ನು ಮುಂದೆ ಸರ್ಕಾರದ ವಿರುದ್ಧ ಮಾತನಾಡುವುದು ಬೇಡ,” ಎಂದು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ರಾಜ್ಯದಲ್ಲಿ ಮೈತ್ರಿ ಸರ್ಕಾರಕ್ಕೆ ಜಾಸ್ತಿ ಆಯುಷ್ಯವಿಲ್ಲ: ಕಾಂಗ್ರೆಸ್‌ ಮಾಜಿ ಶಾಸಕ 

ಹೀಗಿರುವಾಗಲೇ ತುಮಕೂರಿನಲ್ಲಿ ಮಾತನಾಡಿರುವ ಮಧುಗಿರಿ ಮಾಜಿ ಶಾಸಕ ಕೆ.ಎನ್​ ರಾಜಣ್ಣ, ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂಬ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟರೆ ನಾನು ಸ್ಪರ್ಧೆ ಮಾಡಬೇಕಾಗುತ್ತದೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಡಿ.ಕೆ ಶಿವಕುಮಾರ್​ ಈ ರೀತಿ ಬಹಿರಂಗ ಹೇಳಿಕೆ ನೀಡುವುದು ಸರಿಯಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: ಮೈತ್ರಿ ಸರ್ಕಾರದ ಬಗ್ಗೆ ಯಾರೂ ಅಪಸ್ವರ ಎತ್ತಬಾರದು: ಸಚಿವ ಡಿಕೆಶಿ

ಇತ್ತೀಚೆಗಷ್ಟೇ ಕೇಂದ್ರದ ಮಾಜಿ ಸಚಿವ ಶಶಿ ತರೂರ್​ ಅವರು ಬಿಜೆಪಿ 2019ರಲ್ಲಿ ಅಧಿಕಾರಕ್ಕೆ ಬಂದರೆ “ಹಿಂದೂ ಪಾಕಿಸ್ತಾನ” ಸೃಷ್ಟಿಯಾಗಲಿದೆ ಎಂದು ಹೇಳಿದ್ದರು. ಈ ಮಾತು ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಶಶಿ ತರೂರ್​ ಅವರಿಗೆ ಎಚ್ಚರಿಕೆ ನೀಡಿದ್ದ ಕಾಂಗ್ರೆಸ್​, ಮಾತಿನಲ್ಲಿ ಎಚ್ಚರಿಕೆ ಇರಲಿ ಎಂದು ಹೇಳಿತ್ತು.

ಇದನ್ನೂ ಓದಿ: ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಭಾರತ ಹಿಂದು ಪಾಕಿಸ್ತಾನವಾಗಲಿದೆ: ಶಶಿ ತರೂರ್​ 

ಇದನ್ನೂ ಓದಿ: ಹಿಂದೂ ಪಾಕಿಸ್ತಾನ ಹೇಳಿಕೆಗೆ ಬದ್ಧರಾದ ತರೂರ್​; ಕಾಂಗ್ರೆಸ್​ನಿಂದ ಎಚ್ಚರಿಕೆಯ ಪಾಠ

ಪಕ್ಷದ ನಾಯಕರೇ ಪಕ್ಷದ ವಿರುದ್ಧ ಹೇಳಿಕೆ ನೀಡುವುದು ಮತ್ತು ವಿವಾದಕ್ಕೆ ಗುರಿಯಾಗುತ್ತಿರುವುದರಿಂದ ರಾಹುಲ್​ ಗಾಂಧಿ ಅವರು ಇಂದು ಈ ರೀತಿಯ ಎಚ್ಚರಿಕೆ ರವಾನಿಸಿದ್ದಾರೆ.

Leave a Reply

Your email address will not be published. Required fields are marked *

Back To Top