Thursday, 18th January 2018  

Vijayavani

ಹಿರಿಯ ನಟ ನಿರ್ದೇಶಕ ಕಾಶಿನಾಥ್ ಇನ್ನಿಲ್ಲ - ಬೆಂಗಳೂರಿನ ಶಂಕರ ಕ್ಯಾನ್ಸರ್​ ಆಸ್ಪ್ರೆಯಲ್ಲಿ ಕೊನೆಯುಸಿರು- ಕಳಚಿದ ಅನುಭವದ ಕೊಂಡಿ        ಡೈರೆಕ್ಟರ್​ ಎಪಿ ಅರ್ಜುನ್​ ಕಚೇರಿಯಲ್ಲಿ ಕಳ್ಳತನ - ಯಶ್​ ಬರ್ತಡೇ ದಿನ ಕೃತ್ಯ - ಮಾಜಿ ಕಾರು ಡ್ರೈವರ್ ವಿರುದ್ಧ ಅನುಮಾನದ ಹುತ್ತ         ಒಂಟಿ ಮಹಿಳೆಗೆ ಜಡೆ ಹಿಡಿದು ಥಳಿತ - ಕೊಪ್ಪಳ ಬಸ್​ಸ್ಟಾಪ್​ನಲ್ಲಿ ಪುರುಷರ ಅಟ್ಟಹಾಸ - ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್         ನೈಂಟಿ ಕೊಡ್ತೇವೆ ಅಂತ ಹರಕೆ ಹೊರ್ತಾರೆ ಭಕ್ತರು - ದೇವರ ಹೆಸರಲ್ಲಿ ಸಾಮೂಹಿಕ ಮದ್ಯಾರಾಧನೆ - ಕುಣಿಗಲ್‍ನ ಒಡೇಭೈರವನಿಗೆ ಬ್ರಾಂದಿ ವಿಸ್ಕಿಯೇ ನೈವೇದ್ಯ        ಕೃಷ್ಣನಗರಿಯಲ್ಲಿ ಪರ್ಯಾಯ ಸಂಭ್ರಮ - ಕೃಷ್ಣಪೂಜೆ ನೆರವೇರಿಸಿದ ಪಲಿಮಾರು ಶ್ರೀಗಳು - ಅದ್ಧೂರಿಯಿಂದ ಸರ್ವಜ್ಞ ಪೀಠಾರೋಹಣ       
Breaking News :

ಡಿ.ಕೆ.ರವಿ ತಾಯಿ ಗೌರಮ್ಮ ಚುನಾವಣಾ ಕಣಕ್ಕೆ ..?

Sunday, 12.11.2017, 5:45 PM       No Comments

>> ಕಾಂಗ್ರೆಸ್ ವಿರುದ್ಧ ಸಮರಕ್ಕೆ ಸಿದ್ಧರಾದ ಡಿ.ಕೆ. ರವಿ ಬೆಂಬಲಿಗರು

ತುಮಕೂರು: ದಕ್ಷ ಹಾಗೂ ಪ್ರಾಮಾಣಿಕ ಜಿಲ್ಲಾಧಿಕಾರಿಯಾಗಿ ಹೆಸರು ಮಾಡಿದ್ದ ಐಎಎಸ್​ ಅಧಿಕಾರಿ ದಿವಂಗತ ಡಿ.ಕೆ.ರವಿ ಅವರ ತಾಯಿ ಗೌರಮ್ಮ ಅವರು ಕೋಲಾರದಿಂದ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಡಿ.ಕೆ.ರವಿ ಸಾವಿನ ಬಗ್ಗೆ ಸರಿಯಾದ ತನಿಖೆಯಾಗಿಲ್ಲ, ಹಾಗಾಗಿ ಡಿ.ಕೆ.ರವಿ ತಾಯಿ ಗೌರಮ್ಮನವರನ್ನು ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಬೇಕು. ಆ ಮೂಲಕ ವಿಧಾನಸಭೆಯಲ್ಲಿ ಡಿ.ಕೆ. ರವಿ ಸಾವಿನ ನ್ಯಾಯಕ್ಕಾಗಿ ಹೋರಾಟ ನಡೆಸಬೇಕು ಎನ್ನುವುದು ಕೋಲಾರದ ಡಿ.ಕೆ. ರವಿ ಅಭಿಮಾನಿಗಳ ನಿರ್ಧಾರವಾಗಿದೆ.

ಡಿ.ಕೆ ರವಿ ಅವರಿಗೆ ನ್ಯಾಯ ದೊರಕಿಸಲು ಕಾಂಗ್ರೆಸ್ ಪಕ್ಷದ ವಿರುದ್ಧ ಸಮರ ಸಾರಲು ರವಿ ಅಭಿಮಾನಿಗಳು ಸಿದ್ಧತೆ ನಡೆಸುತ್ತಿದ್ದಾರೆ. ಸದ್ಯದಲ್ಲೇ ರವಿ ಅಭಿಮಾನಿಗಳು ಚುನಾವಣೆಗೆ ಸ್ಪರ್ಧಿಸುವ ವಿಷಯವಾಗಿ ಡಿ.ಕೆ. ರವಿ ಅವರ ತಾಯಿಯೊಂದಿಗೆ ಚರ್ಚೆ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top