Thursday, 19th July 2018  

Vijayavani

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ - ಕೇರಳ ಸರ್ಕಾರದಿಂದ ಗ್ರೀನ್​ಸಿಗ್ನಲ್        ಕೇಂದ್ರದಿಂದ ನೆರವಿನ ಮಹಾಪೂರ - ಕೃಷಿ ಯೋಜನೆ, ಮೆಗಾ ಡೈರಿ ಆರಂಭಕ್ಕೆ 900 ಕೋಟಿ ನೆರವು        ಸ್ಮಶಾನ ಜಾಗದ ವಿಚಾರವಾಗಿ ಜಟಾಪಟಿ - ಎರಡು ಗುಂಪುಗಳ ಮಧ್ಯೆ ಮಾರಾಮಾರಿ - ಘರ್ಷಣೆಯಲ್ಲಿ 50 ಮಂದಿಗೆ ಗಾಯ        ಕೃಷ್ಣಾ ನದಿಯಲ್ಲಿ ಪ್ರವಾಹದ ನರ್ತನ - ಯಾದಗಿರಿಯ ನೀಲಕಂಠನದೊಡ್ಡಿ ಗ್ರಾಮಕ್ಕೆ ಜಲದಿಗ್ಬಂಧನ - ಗ್ರಾಮಸ್ಥರು ತಲ್ಲಣ        ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಜಿಟಿಡಿ - ಬಳ್ಳಾರಿಗೆ ಕಳಿಸೋದಾಗಿ ಅಧಿಕಾರಿಗಳಿಗೆ ವಾರ್ನಿಂಗ್- ಚಪ್ಪಾಳೆ ಹೊಡೆದ ಸ್ಟೂಡೆಂಟ್ಸ್        ಎಲ್ಲೆಡೆ ಕೇಳಿಬರ್ತಿದೆ ಧೋನಿ ನಿವೃತ್ತಿ ವಿಷಯ - ಲೀಡ್ಸ್​​ನಲ್ಲಿ ಅಂಪೈರ್ ಬಳಿ ಬಾಲ್ ಪಡೆದಿದ್ದೇಕೆ - ಕ್ರಿಕೆಟಿಗೆ ಗುಡ್​​ಬೈ ಹೇಳ್ತಾರಾ ಮಾಹಿ       
Breaking News

ಚಂದಾ ಕೊಚ್ಚಾರ್​ ವಿರುದ್ಧ ಸ್ವತಂತ್ರ ತನಿಖೆ ನಡೆಸಲು ಐಸಿಐಸಿಐ ಬ್ಯಾಂಕ್​ ಸಮ್ಮತಿ

Wednesday, 30.05.2018, 6:28 PM       No Comments

ಮುಂಬೈ: ವಿಡಿಯೋಕಾನ್ ಗ್ರೂಪ್ ಕಂಪನಿಗಳಿಗೆ ಐಸಿಐಸಿಐ ಬ್ಯಾಂಕ್​ನಿಂದ ನಿಯಮ ಬಾಹಿರವಾಗಿ ಸಾಲ ಮಂಜೂರು ಮಾಡಿದ ಆರೋಪ ಎದುರಿಸುತ್ತಿರುವ ಐಸಿಐಸಿಐ ಬ್ಯಾಂಕ್​ನ ಎಂಡಿ ಮತ್ತು ಸಿಇಒ ಚಂದಾ ಕೊಚ್ಚಾರ್​ ವಿರುದ್ಧ ಸ್ವತಂತ್ರ ತನಿಖೆ ನಡೆಸಲು ಬ್ಯಾಂಕ್​ ಸಮ್ಮತಿಸಿದೆ.

ಸ್ವತಂತ್ರ ವ್ಯಕ್ತಿಯ ಮೂಲಕ ತನಿಖೆ ನಡೆಸಲಾಗುವುದು. ಚಂದಾ ಕೊಚ್ಚಾರ್​ ಅವರ ವಿರುದ್ಧ ಕೇಳಿ ಬಂದಿರುವ ಎಲ್ಲಾ ಆರೋಪಗಳ ಕುರಿತು ಕೂಲಂಕಷವಾಗಿ ತನಿಖೆ ನಡೆಸಲಾಗುವುದು. ಈ ಪ್ರಕರಣದ ಕುರಿತು ಲಭ್ಯವಿರುವ ಎಲ್ಲಾ ಸಾಕ್ಷ್ಯಗಳನ್ನು ಮತ್ತು ಇ-ಮೇಲ್​ ಸಂವಹನವನ್ನು ಪರಿಶೀಲಿಸಲಾಗುವುದು. ಜತಗೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ವ್ಯಕ್ತಿಗಳ ಹೇಳಿಕೆ ಪಡೆಯಲಾಗುವುದು ಎಂದು ಬ್ಯಾಂಕ್​ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ವಿಡಿಯೋಕಾನ್ ಸಮೂಹದ ಮುಖ್ಯಸ್ಥ ವೇಣುಗೋಪಾಲ್ ಧೂತ್ ಅವರು ಐಸಿಐಸಿಯ ಸಿಇಒ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚಾರ್ ಜತೆ ಉತ್ತಮ ಸಂಬಂಧ ಹೊಂದಿದ್ಧಾರೆ. ಇದೇ ಕಾರಣದಿಂದಾಗಿ ವಿಡಿಯೋಕಾನ್ ಸಮೂಹಕ್ಕೆ ಐಸಿಐಸಿಐ ಬ್ಯಾಂಕ್ 3,250 ಕೋಟಿ ರೂ. ಸಾಲ ಮಂಜೂರು ಮಾಡಿತ್ತು ಎಂದು ಆರೋಪಿಸಲಾಗಿದೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top